ಚಿತ್ರದುರ್ಗದಲ್ಲಿ ಶುಕ್ರವಾರ 245 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ, ಸೆಪ್ಟೆಂಬರ್ 11: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 245 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4,544ಕ್ಕೆ ಏರಿಕೆಯಾದಂತಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 125, ಚಳ್ಳಕೆರೆ 26, ಹಿರಿಯೂರು 19, ಹೊಸದುರ್ಗ 33, ಮೊಳಕಾಲ್ಮುರು 10 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 32 ಸೇರಿದಂತೆ ಒಟ್ಟು 245 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 632 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 811 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.

New 245 New Coronavirus Cases Reported In Chitradurga District

ಸೋಂಕಿತರ ಪೈಕಿ ಈಗಾಗಲೆ 3,508 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1001 ಸಕ್ರಿಯ ಪ್ರಕರಣಗಳು ಇವೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 922 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 33,165 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

Recommended Video

      ಪೋಷಕರಿಗೆ ಸಿಹಿ ಸುದ್ದಿ ಕೊಟ್ಟ BJP government | Oneindia Kannada

      ಈವರೆಗೆ 47,152 ಜನರ ಮಾದರಿ ಸಂಗ್ರಹಿಸಲಾಗಿದ್ದು, 40,978 ಜನರ ವರದಿ ನೆಗೆಟಿವ್ ಬಂದಿದೆ, ಉಳಿದ 1,187 ಜನರ ವರದಿ ಬರುವುದು ಬಾಕಿ ಇದೆ. 443 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+