ಚಿತ್ರದುರ್ಗದಲ್ಲಿ ಇಂದು 253 ಜನರಿಗೆ ಕೋವಿಡ್ ಸೋಂಕು ದೃಢ: 7,946ಕ್ಕೆ ಏರಿಕೆ

ಚಿತ್ರದುರ್ಗ, ಅಕ್ಟೋಬರ್ 6: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ಗೆ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 253 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7,946ಕ್ಕೆ ಏರಿಕೆಯಾದಂತಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕೋವಿಡ್ ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 338 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 1,230 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು.

ಜಿಲ್ಲೆಯಲ್ಲಿ ಇದುವರೆಗೆ 37 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 7,805 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 634 ಸಕ್ರಿಯ ಪ್ರಕರಣಗಳು ಇವೆ.

New 253 Coronavirus Cases Reported In Chitradurga District On Today

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 65,219 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 70,977 ಜನರ ಮಾದರಿ ಸಂಗ್ರಹಿಸಲಾಗಿದ್ದು, 62,421 ಜನರ ವರದಿ ನೆಗೆಟಿವ್ ಬಂದಿದೆ,

ಉಳಿದ 141 ಜನರ ವರದಿ ಬರುವುದು ಬಾಕಿ ಇದೆ. 469 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Recommended Video

      ಶಾಲಾ ಕಾಲೇಜುಗಳು ಪುನರಾರಂಬದ ಬಗ್ಗೆ Sriramulu ಹೇಳಿದ್ದೇನು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+