ಚಿತ್ರದುರ್ಗ ಜಿಲ್ಲೆಯಲ್ಲಿ 70 ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ, ಆಗಸ್ಟ್ 26: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಇಂದಿನ ವರದಿಯಲ್ಲಿ 70 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2206 ಕ್ಕೆ ಏರಿಕೆಯಾದಂತಾಗಿದೆ.

Recommended Video

      ಹಣದ ದುರಾಸೆಗೆ ಜೀವ ತೆಗೆದ pvt hospital | Oneindia Kannada

      ಚಿತ್ರದುರ್ಗ ತಾಲ್ಲೂಕಿನಲ್ಲಿ-04, ಹಿರಿಯೂರು-03, ಚಳ್ಳಕೆರೆ-32, ಮೊಳಕಾಲ್ಮುರು-18 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 13 ಸೇರಿದಂತೆ ಒಟ್ಟು 70 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

      ಜಿಲ್ಲೆಯ ಹಲವೆಡೆ ಕೋವಿಡ್ ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 40 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

      New 70 Coronavirus Infection Cases Reported In Chitradurga District

      ಇಂದು ಒಟ್ಟು 593 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಇದುವರೆಗೆ 34 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1562 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಸದ್ಯ 609 ಸಕ್ರಿಯ ಪ್ರಕರಣಗಳಿವೆ.

      ಸದ್ಯ ಜಿಲ್ಲೆಯಲ್ಲಿ ಒಟ್ಟು 555 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 16,298 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

      ಈವರೆಗೆ 35,009 ಜನರ ಮಾದರಿ ಸಂಗ್ರಹಿಸಲಾಗಿದ್ದು, 31,381 ಜನರ ವರದಿ ನೆಗೆಟಿವ್ ಬಂದಿದೆ, ಉಳಿದ 1004 ಜನರ ವರದಿ ಬರುವುದು ಬಾಕಿ ಇದೆ. 418 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+