ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ 97 ಜನರಿಗೆ ಕೋವಿಡ್ ಸೋಂಕು ದೃಢ: ಒಟ್ಟು ಪ್ರಕರಣಗಳೆಷ್ಟು?

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಆಗಸ್ಟ್ 31: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 97 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,610 ಕ್ಕೆ ಏರಿಕೆಯಾಗಿದೆ.

Recommended Video

Foreign ಹೋಗೋ ಪ್ಲಾನ್ ಇದ್ರೆ ಮರೆತುಬಿಡಿ | Oneindia Kannada

ಚಿತ್ರದುರ್ಗ ತಾಲ್ಲೂಕಿನಲ್ಲಿ 23, ಹಿರಿಯೂರು-05, ಚಳ್ಳಕೆರೆ-11, ಮೊಳಕಾಲ್ಮುರು 26, ಹೊಸದುರ್ಗ 11 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 21 ಸೇರಿದಂತೆ ಒಟ್ಟು 97 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 207 ಮಂದಿಗೆ ಕೊರೊನಾ ಪಾಸಿಟಿವ್ಚಿಕ್ಕಮಗಳೂರು ಜಿಲ್ಲೆಯಲ್ಲಿ 207 ಮಂದಿಗೆ ಕೊರೊನಾ ಪಾಸಿಟಿವ್

ಭಾನುವಾರದ ವರದಿಯಲ್ಲಿ ಒಬ್ಬರು ಮೃತಪಟ್ಟಿದ್ದು, ಜಿಲ್ಲೆಯ ಹಲವೆಡೆ ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

New 97 Coronavirus Infection Cases Reported In Chitradurga District On Sunday

ಭಾನುವಾರ ಒಟ್ಟು 792 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಇದುವರೆಗೆ 35 ಜನ ಕೋವಿಡ್ ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 1,712 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 863 ಸಕ್ರಿಯ ಪ್ರಕರಣಗಳು ಇವೆ.

ಸದ್ಯ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 603 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 20,190 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ 38,203 ಜನರ ಮಾದರಿ ಸಂಗ್ರಹಿಸಲಾಗಿದೆ.

33,999 ಜನರ ವರದಿ ನೆಗೆಟಿವ್ ಬಂದಿದ್ದು, ಉಳಿದ 1,163 ಜನರ ವರದಿ ಬರುವುದು ಬಾಕಿ ಇದೆ. 431 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

English summary
Sunday's report on the Covid-19 virus in Chitradurga district has confirmed that 97 people have been infected, bringing the total number of infected people to 2,610.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X