ಚಿತ್ರದುರ್ಗ ಜನತೆ ಗಮನಿಸಿ: ಹೊಸವರ್ಷ ಆಚರಣೆಗೆ ಜಿಲ್ಲಾಡಳಿತ ವಿಧಿಸಿರುವ ಈ ನಿಯಮಗಳನ್ನು ಪಾಲಿಸಿ
ಚಿತ್ರದುರ್ಗ, ಡಿಸೆಂಬರ್ 29: ಹೊಸ ವರ್ಷದ ಸಂಭ್ರಮಾಚರಣೆಗೆ ಷರತ್ತುಗಳನ್ನು ವಿಧಿಸಲಾಗಿದ್ದು, ಮಾರ್ಗಸೂಚಿಯನ್ವಯ ಆಚರಣೆ ಡಿಸೆಂಬರ್ 31 ಹಾಗೂ ಜನವರಿ 01ರ ಮಧ್ಯರಾತ್ರಿ 01 ಗಂಟೆಯೊಳಗಾಗಿ ಮುಕ್ತಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಹೇಳಿದರು.
ಈ ಬಗ್ಗೆ ಮಾತನಾಡಿದ ದಿವ್ಯಪ್ರಭು ಜಿ.ಆರ್.ಜೆ. ತಪ್ಪದೇ ಎಲ್ಲರೂ ಮಾಸ್ಕ್ ಧರಿಸಬೇಕು, ಅಲ್ಲದೆ ಎಲ್ಲ ಹೊಟೇಲ್, ಪಬ್, ಬಾರ್ ಅಂಡ್ ರೆಸ್ಟೋರೆಂಟ್ಸ್, ಕ್ಲಬ್ಸ್ ಇತ್ಯಾದಿಗಳು ಕೂಡ ಮಧ್ಯರಾತ್ರಿ 01 ಕ್ಕೆ ಮುಚ್ಚಬೇಕು. ದೊಡ್ಡ ಪ್ರಮಾಣದ ಗುಂಪು ಸೇರುವ ಸಭೆಯನ್ನು ಆದಷ್ಟು ಮಧ್ಯಾಹ್ನದ ಸಮಯದಲ್ಲಿ ಮತ್ತು ಹೊರಾಂಗಣ ಪ್ರದೇಶದಲ್ಲಿ ಹಮ್ಮಿಕೊಳ್ಳಬೇಕು. ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಸೇರಿಸುವಂತಿಲ್ಲ ಹಾಗೂ ಹೋಟೆಲ್, ಪಬ್, ರೆಸ್ಟೋರೆಂಟ್‍ಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಾಗಿ ಆಸನ ವ್ಯವಸ್ಥೆ ಮಾಡುವಂತಿಲ್ಲ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಸಮಾರಂಭಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಬಳಸುವುದು ಮತ್ತು ಬಂದವರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಸಮಾರಂಭ ಆಯೋಜಕರು, ಸಿಬ್ಬಂದಿ ಬೂಸ್ಟರ್ ಡೋಸ್ ತೆಗೆದುಕೊಳ್ಳುವುದು, ಎರಡು ಡೋಸ್ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ. ಸಿನಿಮಾ ಮಂದಿರ ಪ್ರವೇಶಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಬೇಕು, ಉಲ್ಲಂಘನೆ ಕಂಡುಬಂದಲ್ಲಿ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯ ಎಲ್ಲಾ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೋವಿಡ್ ಟೆಸ್ಟ್ ಮಾಡಬೇಕು, ಪಾಸಿಟಿವ್ ಬಂದ ಎಲ್ಲ ಪ್ರಕರಣಗಳನ್ನು ಜಿನೋಟಿಕ್ ಸೀಕ್ವೆನ್ಸ್ ಪರೀಕ್ಷೆಗೆ ಕಳುಹಿಸಿಕೊಡಬೇಕು, ಇದರಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸುವಂತಿಲ್ಲ. ಖಾಸಗಿ ಆಸ್ಪತ್ರೆಯವರೂ ಕೂಡ ಜ್ವರ, ಶೀತ ಹಾಗೂ ಕೆಮ್ಮು ರೋಗಗಳ ಪ್ರಕರಣಗಳನ್ನು ಟೆಸ್ಟ್‌ಗೆ ಒಳಪಡಿಸಬೇಕು. ಟೆಸ್ಟ್ ವರದಿಗಳನ್ನು 24 ಗಂಟೆಗಳ ಒಳಗಾಗಿ ನೀಡಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದರು.
ಇನ್ನು ಸೋಂಕಿನ ಲಕ್ಷಣಗಳನ್ನು ಹೋಂದಿರುವವರನ್ನು ಪರೀಕ್ಷೆ ಮಾಡಲು ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಈ ವೇಳೆ ಉಪಸ್ಥಿತರಿದ್ದ ಡಿಹೆಚ್‍ಒ ಡಾ. ರಂಗನಾಥ್ ಪ್ರತಿಕ್ರಿಯಿಸಿ, "ಕೊರೊನಾ ಸೋಂಕಿನ ಮಾದರಿಗಳನ್ನು ಪರೀಕ್ಷಿಸುವ ಮೂರು ಪ್ರಯೋಗಾಲಯ ಯೂನಿಟ್‌ಗಳು ನಮ್ಮಲ್ಲಿವೆ. ದಿನಕ್ಕೆ ಗರಿಷ್ಟ 4 ಸಾವಿರ ಮಾದರಿಗಳನ್ನು ಟೆಸ್ಟ್ ಮಾಡುವ ಸಾಮರ್ಥ್ಯವಿದೆ" ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications