ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ ಕೊರೊನಾ ಪಾಸಿಟಿವ್ ಪತ್ತೆ ಇಲ್ಲ: ಡಿಎಚ್ಒ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 07: ಚಿತ್ರದುರ್ಗ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ (ಕೋವಿಡ್-19) ಸಂಬಂಧಿಸಿದಂತೆ ಇದುವರೆಗೂ ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್-19 ಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು. ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಇಲ್ಲಿಯವರೆಗೂ 259 ವ್ಯಕ್ತಿಗಳನ್ನು ಆರೋಗ್ಯ ಇಲಾಖೆಯಿಂದ ನೋಂದಣಿ ಮಾಡಿಕೊಳ್ಳಲಾಗಿದೆ ಎಂದರು.

ಇದರಲ್ಲಿ 213 ವ್ಯಕ್ತಿಗಳು 14 ದಿನಗಳ ಹೋಮ್ ಕ್ವಾರಂಟೈನ್ ನಿಂದ ಬಿಡುಗಡೆ ಹೊಂದಿದ್ದು, 14 ದಿನಗಳ ಕಾಲ ಮನೆಯಲಿಯೇ ಇದ್ದು, ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಪ್ರತಿದಿನವೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಹೋಮ್ ಕ್ವಾರಂಟೈನ್ ಮುಗಿಸಿದ 213 ವ್ಯಕ್ತಿಗಳಿಗೆ ಯಾವುದೇ ರೋಗ ಲಕ್ಷಣಗಳಿಲ್ಲ ಎಂಬುದಾಗಿ ಪ್ರಮಾಣ ಪತ್ರ ವಿತರಿಸಲಾಗಿದೆ ಎಂದು ಹೇಳಿದರು.

No Corona Positive Detection In Chitradurga: DHO

213 ವ್ಯಕ್ತಿಗಳ ಗಂಟಲು ದ್ರವ ಮತ್ತು ರಕ್ತ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಎಲ್ಲರ ವರದಿಯೂ ಕೂಡ ನೆಗಟಿವ್ ಎಂದು ವರದಿಯಾಗಿದ್ದು, ಯಾವುದೇ ಸೋಂಕು ಇಲ್ಲವೆಂದು ಪತ್ತೆಯಾಗಿದೆ. 36 ಮಂದಿ ಸುಮಾರು 28 ದಿನಗಳ ಕ್ವಾರಂಟೈನ್ ಮುಗಿಸಿದ್ದಾರೆ. ಆರೋಗ್ಯ ಇಲಾಖೆಯು ವಿವಿಧ ಹಂತದಲ್ಲಿ ಎಲ್ಲ ರೀತಿಯ ಮಾನಿಟರಿಂಗ್ ಮಾಡಲಾಗಿದೆ ಎಂದು ವಿವರಿಸಿದರು.

ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳಿಗೆ ರ‍್ಯಾಪಿಡ್ ರೆಸ್ಪಾನ್ಸ್ ಟೀಂ (ತ್ವರಿತ ಚಿಕಿತ್ಸಾ ತಂಡಗಳ) ಮೂಲಕ ಪ್ರತಿಯೊಂದು ತಂಡದಲ್ಲಿ 7 ರಿಂದ 8 ಸದಸ್ಯರು ಮನೆಗಳಿಗೆ ಭೇಟಿ ನೀಡಿ ಅವರನ್ನು ನಿಗಾವಹಿಸಿ ಪ್ರತಿದಿನದ ಮಾಹಿತಿಯನ್ನು ನೀಡುತ್ತಿದ್ದಾರೆ ಎಂದರು.

ಹೋಂಮ್ ಕ್ವಾರಂಟೈನ್ ನಲ್ಲಿ ಇರುವ ವ್ಯಕ್ತಿಗಳು ಎಲ್ಲರೂ ಆರೋಗ್ಯವಾಗಿದ್ದಾರೆ. ಆರೋಗ್ಯ ಇಲಾಖೆ ವತಿಯಿಂದ ಕೇವಲ 23 ಮಂದಿ ನಿಗಾದಲ್ಲಿದ್ದಾರೆ, ಇಲ್ಲಿಯವರೆಗೆ ಗಂಟಲು ಮಾದರಿ ಪರೀಕ್ಷೆ ಮಾಡಿಸಿದ ಸಂದರ್ಭದಲ್ಲಿ ಯಾವುದೇ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ ಎಂದು ಡಿಎಚ್ಒ ಡಾ.ಪಾಲಾಕ್ಷ ಹೇಳಿದರು.

English summary
District Health Officer Dr.Palaksha said that no positive cases have been reported so far for coronavirus infection in Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X