'ಜೀವನದಲ್ಲಿ ನಂಬಿಕೆಯೇ ಇಲ್ಲ'; ಸೆಲ್ಫಿ ವಿಡಿಯೋ ಮಾಡಿ ಯುವಕ ಸಾವು
ಚಿತ್ರದುರ್ಗ, ಜೂನ್ 21: ಯುವಕನೊಬ್ಬ, ನನಗೆ ಜೀವನದಲ್ಲಿ ನಂಬಿಕೆ ಇಲ್ಲ, ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಪವನ್ (22) ಆತ್ಮಹತ್ಯೆಗೆ ಶರಣಾದ ಯುವಕ. ಈತ ಕೆಲ ದಿನಗಳ ಹಿಂದೆ ಅನಾಥ ಎಂದು ಹೇಳಿಕೊಂಡು ಚಿತ್ರದುರ್ಗದ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ.
ಇದೀಗ ತನಗೆ ಯಾರೂ ಇಲ್ಲ, ನನ್ನ ಅಕ್ಕ, ಭಾವ ಒಳ್ಳೆಯವರು. ನನ್ನ ಸ್ವಂತ ಮಗನಂತೆ ನೋಡಿಕೊಂಡರು. ಆದರೆ ನನಗೆ ಜೀವನದಲ್ಲಿ ನಂಬಿಕೆ ಇಲ್ಲ. ಹಾಗಾಗಿ ಮುಂದಿನ ಜನ್ಮದಲ್ಲಿ ಒಳ್ಳೆಯವನಾಗಿ ಹುಟ್ಟುತ್ತೇನೆ ಎಂದು ಸೆಲ್ಫಿ ವಿಡಿಯೋ ಮಾಡಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಸಂಬಂಧ ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications