ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿ ನಿಜಾಮುದ್ದೀನ್ ಮಸೀದಿ ಕಾರ್ಯಕ್ರಮದಲ್ಲಿ ಚಿತ್ರದುರ್ಗದ 8 ಜನ ಭಾಗಿ?

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 01: ಕೊರೊನಾ ಕುರಿತು ದೇಶವನ್ನೇ ಬೆಚ್ಚಿ ಬೀಳಿಸಿರುವ, ದೆಹಲಿಯ ನಿಜಾಮುದ್ದೀನ್ ಮಸೀದಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಚಿತ್ರದುರ್ಗದಿಂದ ಒಂಬತ್ತು ಮಂದಿ ಭಾಗಿಯಾಗಿದ್ದಾರೆಂದು ತಿಳಿದುಬಂದಿತ್ತು. ಇದೀಗ, ಈ ಒಂಬತ್ತು ಮಂದಿ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ, ಆದರೆ ಸಭೆಯಲ್ಲಿ ಭಾಗಿಯಾದವರ ಜತೆ ಸಂಪರ್ಕಕ್ಕೆ ಬಂದಿರುವ ಶಂಕೆ ಇದೆ ಎಂದು ಚಿತ್ರದುರ್ಗ ಜಿಲ್ಲಾ ಡಿಎಚ್ಓ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಇಂಡೋನೇಷ್ಯಾದ 10 ಧರ್ಮ ಗುರುಗಳುಬೆಳಗಾವಿಯಲ್ಲಿ ಇಂಡೋನೇಷ್ಯಾದ 10 ಧರ್ಮ ಗುರುಗಳು

15 ದಿನಗಳ ಹಿಂದೆ ದೆಹಲಿಯ ನಿಜಾಮುದ್ದೀನ್​ನ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ಭಾಗಿಯಾಗಿದ್ದು, ಅದರಂತೆ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಿಂದಲೂ ಭಾಗವಹಿಸಿದ್ದಾರೆ ಎಂದು ಈ ಮುನ್ನ ಹೇಳಲಾಗಿತ್ತು.

No One From Hiriyuru Participate In Dehli NIjamuddin Religious Programme Clarified DHO

ಆದರೆ ಇವರೆಲ್ಲರೂ ಸೌದಿ ಅರೇಬಿಯಾದಿಂದ ಮುಂಬೈ ಮೂಲಕ ಬೆಂಗಳೂರಿಗೆ ಹಿಂದಿರುಗಿದ್ದಾರೆ ಎಂದು ತಿಳಿಸಿದ್ದಾರೆ. ಇವರು ನಿಜಾಮುದ್ದೀನ್ ಧರ್ಮ ಸಭೆಯಲ್ಲಿ ಪಾಲ್ಗೊಂಡವರ ಜತೆ ಸಂಪರ್ಕದಲ್ಲಿರುವ ಶಂಕೆ ವ್ಯಕ್ತವಾಗಿದ್ದು, ಮಾರ್ಚ್ 17ರಂದು ಬೆಂಗಳೂರಿಗೆ ಆಗಮಿಸಿದ್ದರು. ಮಾರ್ಚ್ 22ರಿಂದ ಹಿರಿಯೂರು ಪಟ್ಟಣದಲ್ಲಿ ಇವರನ್ನು ಹೋಂ ಕ್ವಾರಂಟೈನ್ ಇರಿಸಲಾಗಿತ್ತು. ನಿನ್ನೆಯಿಂದ ಚಿತ್ರದುರ್ಗದ ಹಾಸ್ಟೆಲ್ ನಲ್ಲಿ ಹೋಂ ಕ್ವಾರಂಟೈನ್ ಇರಿಸಲಾಗಿದೆ. ರಕ್ತದ ಮಾದರಿ, ಗಂಟಲು ದ್ರವ ಪರೀಕ್ಷೆಗೆ ರವಾನೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಿಜಾಮುದ್ದೀನ್ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮಾಹಿತಿ ನೀಡಿದ್ದ ಡಿಹೆಚ್ಓ ಇದೀಗ ಸ್ಪಷ್ಟನೆ ನೀಡಿದರು.

English summary
No one from hiriyuru participated in nijamuddin religious speech programme which was conducted in dehli clarified chitradurga dho palaksha,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X