Chitradurga Bus Accident: ಹೊಸ ತಿರುವು ಪಡೆದುಕೊಂಡ ಚಿತ್ರದುರ್ಗ ಬಸ್ ಅಗ್ನಿ ದುರಂತ ಪ್ರಕರಣ
Chitradurga Bus Accident: ಚಿತ್ರದುರ್ಗ ಬಸ್ ಅಗ್ನಿ ದುರಂತ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಸಂಬಂಧ ಇದೀಗ ಶಾಕಿಂಗ್ ಮಾಹಿತಿಯೊಂದು ಬಹಿರಂಗವಾಗಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಚಿತ್ರದುರ್ಗ ಬಸ್ ಅಗ್ನಿ ದುರಂತ ಸಂಬಂಧ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿತ್ತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ದುರಂತ ನಡೆದಿದ್ದು, ಈ ವೇಳೆ ಬಸ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿತ್ತು. ತನಿಖೆಯ ವೇಳೆ ಅಪಘಾತಕ್ಕೆ ಒಳಗಾದ ಬಸ್‌ನೊಳಗೆ ಆಯಿಲ್ ಬಾಕ್ಸ್‌ಗಳು ಪತ್ತೆ ಆಗಿದ್ದು, ಇದು ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಪ್ರಕರಣಕ್ಕೆ ಹೊಸ ತಿರುವು: ಈ ಆಯಿಲ್ ಬಾಕ್ಸ್ ಇದ್ದ ಕಾರಭ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಿಣ ಮಾಡಲು ಕಷ್ಟ ಆಗಲು ಪ್ರಮುಖ ಕಾರಣ ಆಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಬಸ್‌ನಲ್ಲಿ ಇಷ್ಟು ದೊಡ್ಡ ಪ್ರಮಾಣದ ಆಯಿಲ್ ಬಾಕ್ಸ್‌ಗಳು ಹೇಗೆ ಬಂದವು ಮತ್ತು ಇವುಗಳ ಸಾಗಣೆಗೆ ಅನುಮತಿ ನೀಡಲಾಗಿತ್ತಾ? ಎಂಬ ಬಗ್ಗೆ ತನಿಖೆ ಮುದುವರೆದಿದೆ. ಈ ಘಟನೆ ಇದೀಗ ಸಾರ್ವಜನಿಕ ಸಾರಿಗೆಯಲ್ಲಿ ಸುರಕ್ಷತಾ ಮಾನದಂಡಗಳ ಬಗ್ಗೆ ಅನುಮಾನ ಹುಟ್ಟುಹಾಕಿದೆ.
ಪ್ರಯಾಣಿಕರ ಸುರಕ್ಷತೆ ಬಗ್ಗೆ ಆತಂಕ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಳಿ ನಡೆದ ಸೀ ಬರ್ಡ್ ಬಸ್ ದುರಂತದ ಬೆನ್ನಲ್ಲೇ, ಅದೇ ಕಂಪನಿಯ ಮತ್ತೊಬ್ಬ ಚಾಲಕನ ನಿರ್ಲಕ್ಷ್ಯ ಇದೀಗ ಬಟಾಬಯಲಾಗಿದೆ. ಪ್ರಯಾಣಿಕರ ಸುರಕ್ಷತೆ ಬಗ್ಗೆ ಆತಂಕ ಮೂಡಿಸುವಂತಹ ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮದ್ಯಪಾನ ಮಾಡಿ ಬಸ್ ಚಾಲನೆ: ಬೆಂಗಳೂರಿನಿಂದ ಗೋವಾಕ್ಕೆ ಹೊರಟಿದ್ದ ಖಾಸಗಿ ಸೀ ಬರ್ಡ್ ಬಸ್ ಅನ್ನು ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದ ಚಾಲಕ ಇದೀಗ ಪೊಲೀಸರ ತಗ್ಲಾಕೊಂಡಿದ್ದಾನೆ. ಉಪ್ಪಾರಪೇಟೆ ಸಂಚಾರಿ ಪೊಲೀಸರ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಈತ ತಗ್ಲಾಕೊಂಡಿದ್ದಾನೆ.
ಹೊಸ ವರ್ಷಾಚರಣೆ ಹಿನ್ನೆಲೆ ಬೆಂಗಳೂರು ನಗರದಾದ್ಯಂತ ತೀವ್ರ ತಪಾಸಣೆ ನಡೆಯುತ್ತಿದ್ದ ವೇಳೆ, ಅನುಮಾನಾಸ್ಪದವಾಗಿ ಬಸ್ ಅನ್ನು ತಡೆಯಲಾಯಿತು. ತಪಾಸಣೆ ವೇಳೆ ಚಾಲಕ ಮದ್ಯಪಾನ ಮಾಡಿರುವುದು ದೃಢಪಟ್ಟಿದ್ದು, ತಕ್ಷಣವೇ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಬ್ಬ ಚಾಲಕನ ವ್ಯವಸ್ಥೆ: ಬಳಿಕ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಪೊಲೀಸರು ತಕ್ಷಣವೇ ಬೇರೆ ಚಾಲಕನ ವ್ಯವಸ್ಥೆ ಮಾಡಿ ಬಸ್ ಅನ್ನು ಗೋವಾಕ್ಕೆ ಕಳುಹಿಸಿದ ಘಟನೆ ನಡೆದಿದೆ. ಈ ಘಟನೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಖಾಸಗಿ ಬಸ್ಗಗಳ ಮೇಲಿನ ನಿಗಾವನ್ನು ಮತ್ತಷ್ಟು ಹೆಚ್ಚಿಸುವ ಅಗತ್ಯ ಇದೆ ಅಂತಲೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಯಾಕಂದ್ರೆ, ಜೀವ ಹೋದ್ರೆ ಮತ್ತೆ ಬಾರದು. ಆದ್ದರಿಂದ ಎಲ್ಲಾ ಬಸ್ ಚಾಲಕರಿಗೂ ತಪಾಸಣೆ ನಡೆಸಬೇಕು ಎನ್ನುವ ಮಾತುಗಳು ಕೇಳಿಬರುತ್ತಿವೆ.
ಬಸ್ ಅಂದಮೇಲೆ ಒಬ್ಬರು, ಇಬ್ಬರು ಪ್ರಯಾಣ ಮಾಡುವುದಿಲ್ಲ.ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಪ್ರಯಾಣ ಮಾಡುತ್ತಾರೆ. ಎಲ್ಲರೂ ಚಾಲಕನ ಮೇಲೆ ನಂಬಿಕೆ ಇಟ್ಟು ಬಸ್ ಹತ್ತುತ್ತಾರೆ. ಆದರೆ, ಅವರು ಮದ್ಯ ಸೇವನೆ ಮಾಡಿಬಂದರೆ, ಹೇಗೆ ಗೊತ್ತಾಗುತ್ತದೆ. ಆದ್ದರಿಂದ, ಪ್ರಯಾಣಿಕರ ಹಿತದೃಷ್ಟಿಯಿಂದ ಪೊಲೀಸರು ಹೀಗೆಯೇ ಎಲ್ಲಾ ವಾಹನಗಳನ್ನು ತಪಾಸಣೆ ಮಾಡಿ ಮುಂದೆ ಬಿಡಬೇಕು ಎನ್ನುವ ಒತ್ತಾಯಗಳು ಕೇಳಿಬಂದಿವೆ.












Click it and Unblock the Notifications