P. Thippeswamy: ರಂಗಭೂಮಿಯಲ್ಲಿ ಸುರ್ಧೀಘ ಸೇವೆ: ಚಳ್ಳೆಕೆರೆಯ ಪಿ. ತಿಪ್ಪೇಸ್ವಾಮಿಗೆ ರಾಜ್ಯೋತ್ಸವ ಪ್ರಶಸ್ತಿ
ಚಿತ್ರದುರ್ಗ, ಅಕ್ಟೋಬರ್ 31 : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ನೀಡುವ 2023ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಚಳ್ಳೆಕೆರೆಯ ಪಿ. ತಿಪ್ಪೇಸ್ವಾಮಿ ಆಯ್ಕೆಯಾಗಿದ್ದಾರೆ. ರಂಗಭೂಮಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಿ. ತಿಪ್ಪೇಸ್ವಾಮಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ದಿವಂಗತ ವೀರಣ್ಣ-ವೀರಮ್ಮನವರ ಏಕೈಕ ಪುತ್ರನಾಗಿ ಚಳ್ಳಕೆರೆಯಲ್ಲಿ ಜನನ 1946 ರಲ್ಲಿ ಜನಿಸಿದರು. ಬಾಲ್ಯದಿಂದಲೂ ನಾಟಕ-ಸಂಗೀತದತ್ತ ಒಲವು. ಬಿ.ಎ. ಪದವಿಯ ನಂತರ ಬಿ.ಇಡಿ. ಶಿಕ್ಷಣವನ್ನು ಪೂರೈಸಿ ಚಳ್ಳಕೆರೆಯ ಕಾಟಪ್ಪನಹಟ್ಟಿಯಲ್ಲಿನ ಕಾಟಂಲಿಂಗೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ 1973 ರಿಂದ 2004 ರವರೆಗೆ ಸೇವೆ ಸಲ್ಲಿಸಿ ನಿವೃತ್ತರಾದರು.

ವೃತ್ತಿಯೊಂದಿಗೆ ಸಾಹಿತ್ಯ-ಸಂಗೀತಗಳ ಪ್ರವೃತ್ತಿಯೂ ಬೆಳೆಯಿತು. ನಾಟಕಗಳ ಗೀಳು ಹಾರ್ಮೋನಿಯಂ ಕಲಿಯುವಂತೆ ಮಾಡಿತು. ಅದು ಕ್ಯಾಸಿಯೋ ಕೀಬೋರ್ಡ್ ಹಂತದವರೆಗೂ ಬೆಳೆಸಿತು. 1975 ರಲ್ಲಿ ಕಾಟಂಲಿಂಗೇಶ್ವರ ನಾಟಕ ಸಂಘದ ಸ್ಥಾಪನೆ. ಇದು ಜಿಲ್ಲೆಯಾದ್ಯಂತ ನೂರಾರು ನಾಟಕಗಳ ಪ್ರದರ್ಶನ, ನಿರ್ದೇಶನಕ್ಕೆ ಕಾರಣವಾಯಿತು.
ಮರಡಿಹಳ್ಳಿ ಸೀತಾರಾಮರೆಡ್ಡಿ ವಿರಚಿತ 'ರಾಜಾವೀರ ಮದಕರಿನಾಯಕ' ನಾಟಕ ಇವರಿಗೆ ಖ್ಯಾತಿಯನ್ನು ತಂದುಕೊಟ್ಟಿದ್ದಲ್ಲದೇ, ನೂರಾರು ಪ್ರಯೋಗಗಳನ್ನು ಕಂಡಿತು. ಇದು ದೆಹಲಿಯಲ್ಲೂ ಪ್ರದರ್ಶನವಾಯಿತು. ತಮ್ಮ ಮ್ಯಾಸಬೇಡ ಬುಡಕಟ್ಟು ಸಮುದಾಯದ ಸಾಂಸ್ಕೃತಿಕ ವೀರರಾದ ಗಾದಿರಿ ಪಾಲನಾಯಕ ಮತ್ತು ಜಗಲೂರು ಪಾಪನಾಯಕ ನಾಟಕ ರಚನೆಗೆ ಅಗತ್ಯವಾದ ಮೂಲದ್ರವ್ಯವನ್ನು ಒದಗಿಸಿ ಕಾಲುವೇಹಳ್ಳಿ ಗಾದಿರಪ್ಪ ಎಂಬುವವರಿಂದ ನಾಟಕಗಳನ್ನು ಬರೆಯಿಸುವಲ್ಲಿ, ಅವುಗಳನ್ನು ರಂಗಭೂಮಿಗೆ ತರುವಲ್ಲಿ, ಬುಡಕಟ್ಟು ಸಮುದಾಯಕ್ಕೆ ಅವರ ಚರಿತ್ರೆಯನ್ನು ತಿಳಿಸುವಲ್ಲಿ ಇವರದು ಪ್ರಮುಖ ಪಾತ್ರ.
ಅಲ್ಲದೆ ಇವರು ತಮ್ಮ ಸಂಗೀತ ಮತ್ತು ನಿರ್ದೇಶನದ ಮೂಲಕ ಹವ್ಯಾಸಿ ಗ್ರಾಮೀಣ ರಂಗಭೂಮಿಯನ್ನು ರೂಪಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ರಕ್ತರಾತ್ರಿ, ಭಕ್ತಸುಧನ್ವ, ಕುರುಕ್ಷೇತ್ರ, ದೇವಿ ಮಹಾತ್ಮ, ದಾನಶೂರ ಕರ್ಣ, ವೀರಾಭಿಮನ್ಯು ಮುಂತಾದ ಪೌರಾಣಿಕ ನಾಟಕಗಳಲ್ಲದೇ, ಇಪ್ಪತ್ತೈದಕ್ಕೂ ಹೆಚ್ಚು ಸಾಮಾಜಿಕ ನಾಟಕಗಳನ್ನು ನಿರ್ದೇಶಿಸಿ, ಸಂಗೀತ ನೀಡಿದ್ದಾರೆ. ಹಗಲೆಲ್ಲಾ ಶಾಲೆಯಲ್ಲಿ ಶಿಕ್ಷಕ, ರಾತ್ರಿಯೆಲ್ಲಾ ಹಳ್ಳಿಯ ರಂಗಭೂಮಿಗಳಲ್ಲಿ ನಿರ್ದೇಶನ ಪಾತ್ರ, ಮೂರು ದಶಕಗಳಿಗೂ ಹೆಚ್ಚು ಕಾಲ ನಿರ್ವಹಿಸಿದವರು.

ಇವರ ಗ್ರಾಮೀಣ ರಂಗಭೂಮಿಯ ಸೇವೆಯನ್ನು ಗುರುತಿಸಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ (2001) ನೀಡಿ ಗೌರವಿಸಿದೆ. ಹಾಗೂ ನಾಟಕ ಆಕಾಡೆಮಿಯ ಸದಸ್ಯತ್ವ (2014) ನೀಡಿ ರಂಗಕಲಾವಿದರ ಸೇವೆ ಮಾಡಲು, ಚಿತ್ರದುರ್ಗ ಜಿಲ್ಲೆಯಾದ್ಯಂತ ರಂಗಚಟುವಟಿಕೆಗಳು ಗರಿಗೆದರಲು ಅವಕಾಶ ಕಲ್ಪಿಸಿತ್ತು.
ಎಪ್ಪತ್ತರ ಇಳಿವಯಸ್ಸಲ್ಲೂ ಬತ್ತದ ಅವರ ಉತ್ಸಾಹ ಜಾನಪದ ರಂಗಭೂಮಿಯ ಮುಮ್ಮೇಳಗಾರರ (ಭಾಗವತರ) ಸಂಘವನ್ನು ಕಟ್ಟಿ ಅವರಿಗೆ ನ್ಯಾಯಯುತವಾಗಿ ದಕ್ಕಬೇಕಾದ ಮಾಸಾಶನ ಹಾದಿ ಸವಲತ್ತುಗಳನ್ನು ಕೊಡಿಸಲು ಸಂಘಟಿತ ಹೋರಾಟ ನಡೆಸಿದ್ದಾರೆ. ಚಳ್ಳಕೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾಗಿ ಎರಡು ಅವಧಿಗೆ (2005-2007, 2008-2010) ಸೇವೆ. ಸಂಚಾಲಕರಗಿ ಜಿಲ್ಲಾ ಜಾನಪದ ಜಾತ್ರೆ (2005-2006), ಕಾಲೇಜು ರಂಗೋತ್ಸವ (2016-2017) ಗಳಲ್ಲಿ ಸೇವೆ.
ಒಟ್ಟಾರೆಯಾಗಿ ಜಾನಪದ ರಂಗ ಚಟುವಟಿಕೆಗಳನ್ನು ಗುರುತಿಸಿ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ (2015-16), ಯಾದಗಿರಿ ಜಿಲ್ಲೆಯಲ್ಲಿ ನಡೆದ ಜಾನಪದೋತ್ಸವದಲ್ಲಿ 'ಜಾನಪದ ಕಲಾಲೋಕ ಪ್ರಶಸ್ತಿ' (2017), 'ಸಿಜಿಕೆ ನಾಟಕೋತ್ಸವದಲ್ಲಿ ಸಿಜಿಕೆ ಪ್ರಶಸ್ತಿ' (2018) ಗಳ ಗೌರವ ಸಂದಿವೆ. ಪ್ರಸ್ತುತ ಮಹತ್ವಾಕಾಂಕ್ಷಿಯ ಕ್ಷೇತ್ರಕಾರ್ಯಾಧಾರಿತ ಕೃತಿ 'ಮ್ಯಾಸ ಬೇಡರ ಮೌಖಿಕ ಕಥನಗಳು' (2019) ಪ್ರಕಟ. ಈ ಕೃತಿಗೆ 2020 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯವರು ಸಂಶೋಧನೆ ಪ್ರಕಾರದಲ್ಲಿ ಅತ್ಯುತ್ತಮ ಕೃತಿಯೆಂದು ಪರಿಗಣಿಸಿ, ಪುಸ್ತಕ ಬಹುಮಾನ ಪ್ರಶಸ್ತಿ ನೀಡಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications