• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಜೊತೆಗೆ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆ

|

ಚಿತ್ರದುರ್ಗ, ನವೆಂಬರ್ 13: ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜಿನ ಜೊತೆಗೆ ಪ್ಯಾರಾ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವುದಾಗಿ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ ಸುಧಾಕರ್ ಭರವಸೆ ನೀಡಿದ್ದಾರೆ.

ಶುಕ್ರವಾರ ಚಿತ್ರದುರ್ಗ ಜಿಲ್ಲಾಸ್ಪತ್ರೆ ಆವರಣದಲ್ಲಿ ನೂತನವಾಗಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಡಾ.ಕೆ ಸುಧಾಕರ್, ಮೆಡಿಕಲ್ ಕಾಲೇಜಿನ ಜೊತೆಯಲ್ಲೇ ಎಲ್ಲಾ ಮಾದರಿಯ ಅರೆ ವೈದ್ಯಕೀಯ ಕೋರ್ಸ್ ಆರಂಭಕ್ಕೂ ಕ್ರಮ ಕೈಗೊಳ್ಳುತ್ತೇವೆ, ಮುಂದಿನ 30 ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಸಲುವಾಗಿ ರಾಜ್ಯ ಸರ್ಕಾರದಿಂದಲೇ ಸಂಪೂರ್ಣ ಅನುದಾನ ಮಂಜೂರು ಮಾಡಲಿದ್ದು, ಕೇಂದ್ರ ಸರ್ಕಾರದಿಂದ ಯಾವುದೇ ಅನುದಾನ ಮಂಜೂರಾಗಿಲ್ಲ ಎಂದು ಹೇಳಿದರು.

ಚಿತ್ರದುರ್ಗಕ್ಕೆ ದೀಪಾವಳಿ ಗಿಫ್ಟ್: ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್

ಚಿತ್ರದುರ್ಗದಲ್ಲಿ ನೂತನ ಮೆಡಿಕಲ್ ಕಾಲೇಜು ಸ್ಥಾಪನೆ ಪ್ರಸ್ತಾವನೆ ಬಂದಿದ್ದು, ನಿನ್ನೆಯೇ ಅನುಮೋದನೆ ದೊರೆತಿದೆ. ಸಿಎಂ ಬಿಎಸ್ ಯಡಿಯೂರಪ್ಪನವರು ಈಗಾಗಲೇ 50 ಕೋಟಿ ಅನುದಾನ ಮಂಜೂರಿಗೆ ಸಿಎಂ ಆದೇಶ ನೀಡಿದ್ದಾರೆ ಎಂದರು. ಕೊರೊನಾ ಲಸಿಕೆ ಲಭ್ಯತೆಯ ಬಗ್ಗೆ ಮಾತನಾಡಿ ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ಯಶಸ್ಸಿನ ಬಗ್ಗೆ ಪ್ರತಿಷ್ಠಿತ ಸಂಸ್ಥೆಗಳು ಸ್ಪಷ್ಟನೆ ನೀಡಿವೆ. ಮಾರ್ಚ್ ಏಪ್ರಿಲ್ ಒಳಗೆ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

   ಗನ್ ಇಟ್ಕೊಂಡು ಓಡಾಡಿ ಅಂತ ರವಿ ಬೆಳಗೆರೆಗೆ ಹೇಳಿದ್ದೆ ನಾನು | H Vishwanath | Oneindia Kannada

   ಮೆಡಿಕಲ್ ಕಾಲೇಜು ಸ್ಥಾಪನೆಗೆ ಸ್ಥಳ ಪರಿಶೀಲನೆ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಪೂರ್ಣಿಮಾ ಕೆ.ಶ್ರೀನಿವಾಸ್, ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಡಿಸಿ ಕವಿತಾ ಎಸ್.ಮನ್ನಿಕೇರಿ ಸೇರಿದಂತೆ ರಾಜಕೀಯ ಮುಖಂಡರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

   English summary
   Para Medical College will be built along with Medical College in chitradurga informed medical education minister K Sudhakar
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X