ಚಿತ್ರದುರ್ಗದಲ್ಲಿ ಕಾರು- ಬೈಕ್ ಅಪಘಾತ; ಬೈಕ್ ಸವಾರ ಸಾವು
ಚಿತ್ರದುರ್ಗ, ಆಗಸ್ಟ್ 06: ಕಾರು ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಭೀಮನಬಂಡೆ ಗೇಟ್ ಬಳಿ ನಿನ್ನೆ ತಡ ರಾತ್ರಿ ನಡೆದಿದೆ.
Recommended Video
ರಸಗೊಬ್ಬರ ಮತ್ತು ಬಾಂಬ್ ಬಳಕೆಯಲ್ಲಿ ಬಳಸುವ ಅಮೋನಿಯಂ ನೈಟ್ರೇಟ್ ಸ್ಪೋ | Oneindia Kannada
ತಾಲೂಕಿನ ಮಸ್ಕಲ್ ಗ್ರಾಮದ ನರಸಿಂಹ ರಾಜು (30) ಅಪಘಾತದಲ್ಲಿ ಮೃತಪಟ್ಟವರು. ಮೃತ ನರಸಿಂಹ ರಾಜು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸಂಬಂಧಿಕರ ಮದುವೆ ಇದ್ದ ಕಾರಣ ಊರಿಗೆ ಬಂದಿದ್ದರು. ಹಿರಿಯೂರಿನಲ್ಲಿ ಸಂಬಂಧಿಕರ ಮದುವೆಗೆ ಹೋಗಿ ವಾಪಸ್ ಮನೆಗೆ ಹಿಂದಿರುಗಿ ಬರುವಾಗ ಅಪಘಾತ ಸಂಭವಿಸಿದೆ.

ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.












Click it and Unblock the Notifications