ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಾಳೆ ನೇರ ಫೋನ್‍ಇನ್ ಕಾರ್ಯಕ್ರಮ

ಚಿತ್ರದುರ್ಗ, ಏಪ್ರಿಲ್ 20: ಲಾಕ್ ಡೌನ್ ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಮತ್ತು ಶೈಕ್ಷಣಿಕ ಚಟುವಟಿಕೆ ಕುರಿತಂತೆ ವಿದ್ಯಾರ್ಥಿಗಳಿಗಾಗಿ ಚಿತ್ರದುರ್ಗದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೆ.ರವಿಶಂಕರ್ ರೆಡ್ಡಿ ಅವರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮವನ್ನು ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ನಾಳೆ ಬೆಳಿಗ್ಗೆ 10.30 ರಿಂದ 12 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಲಾಕ್ ಡೌನ್ ಸಮಯದಲ್ಲಿ ಮಾಹಿತಿ ತಂತ್ರಜ್ಞಾನ ಬಳಕೆ ಮಾಡಿಕೊಂಡು ಯಾವ ರೀತಿ ಓದಬೇಕು, ಉತ್ತಮ ಫಲಿತಾಂಶ ಪಡೆಯಲು ಏನು ಮಾಡಬೇಕು? ಪರೀಕ್ಷಾ ಭಯ ನಿವಾರಣೆ ಮಾಡುವುದು ಹೇಗೆ? ವಿಷಯವಾರು ಸಿದ್ಧತೆ ಹೇಗೆ ಮಾಡಿಕೊಳ್ಳಬೇಕು? ಮಾಹಿತಿ ಸಂಗ್ರಹಿಸುವ ವಿಧಾನಗಳಾವುವು? ಹೀಗೆ ಪರೀಕ್ಷಾ ತಯಾರಿಗೆ ಸಂಬಂಧಿಸಿದಂತೆ ಪೂರಕ ಆಪ್ ಗಳು, ವೆಬ್ ಸೈಟ್, ಬ್ಲಾಗ್ ಸ್ಪಾಟ್ ಗಳು ಇತ್ಯಾದಿ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಸಾರ್ವಜನಿಕರು, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

Phone In Programme In Chitradurga For SSLC Students

ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೆ.ರವಿಶಂಕರ್ ರೆಡ್ಡಿ, ಐಮಂಗಲ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಪ್ರಾಂಶುಪಾಲ ಆರ್.ರಮೇಶ್ ಹಾಗೂ ವಿಷಯಾವಾರು ಸಂಪನ್ಮೂಲ ವ್ಯಕ್ತಿಗಳು ಫೋನ್‍ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ವಿದ್ಯಾರ್ಥಿಗಳು ಮತ್ತು ಪೋಷಕರು 9480841217, 9986912507, 9448999336 ಈ ದೂರವಾಣಿ ಸಂಖ್ಯೆಗಳಿಗೆ ಫೋನ್ ಮಾಡಿ ಮಾಹಿತಿ ಪಡೆಯಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+