Breaking: ಪೋಕ್ಸೋ ಪ್ರಕರಣ: ನವೆಂಬರ್ 8ರವರೆಗೆ ಮುರುಘಾ ಶರಣರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಚಿತ್ರದುರ್ಗ, ನವೆಂಬರ್ 3: ಮಠದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುರುಘಾ ಶರಣರು ಹಾಗೂ ಇನ್ನಿತರ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತಣೆಯಾಗಿದೆ. ಗುರುವಾರ ವಿಚಾರಣೆ ನಡೆಸಿದ ಚಿತ್ರದುರ್ಗ ನ್ಯಾಯಾಲಯ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಅಕ್ಟೋಬರ್ 21ರಂದು 14 ದಿನಗಳ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿತ್ತು. ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಗುರುವಾರಕ್ಕೆ ಮುಕ್ತಾಯವಾದ ಹಿನ್ನಲೆ ಪೊಲೀಸರು ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಶ್ರೀಗಳನ್ನು ಹಾಜರು ಪಡಿಸಿದ್ದರು. ವಿಚಾರಣಗೆ ನಡೆಸಿದ ನ್ಯಾಯಾಲಯ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 8ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಇನ್ನು ಇವರ ಜೊತೆಗೆ ಮಠದ ಪ್ರಕರಣದ 2ನೇ ಆರೋಪಿ ಲೇಡಿ ವಾರ್ಡನ್ ರಶ್ಮಿ ಹಾಗೂ ಪ್ರಕರಣದ ಮೂರನೇ ಆರೋಪಿ ಪರಮಶಿವಯ್ಯ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇವರ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ವಿಸ್ತರಿಸಿ ಆದೇಶ ನೀಡಿದೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದುಕ್ಕಾಗಿ ಆರೋಪಿಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 8 ದಿನಗಳ ಪೊಲೀಸ್ ಕಸ್ಟಡಿಗೆ ವಹಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಗೆ ಮುರುಘಾ ಶರಣರ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಪೊಲೀಸರಿಗೆ ಮನವಿ ಅರ್ಜಿ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಮಧ್ಯಾಹ್ನ 2.45ಕ್ಕೆ ಮುಂದೂಡಿದ್ದು, ಮುರುಘಾ ಶರಣರು ನ್ಯಾಯಾಲದಯಲ್ಲಿಯೇ ಉಳಿದುಕೊಂಡಿದ್ದಾರೆ.
ಇನ್ನು ಮುರುಘಾ ಶರಣರು ಜೈಲು ಸೇರಿರುವ ಹಿನ್ನಲೆಯಲ್ಲಿ ಮುರುಘಾ ಮಠಕ್ಕೆ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿಯನ್ನ ಪ್ರಭಾರ ಪೀಠಾಧ್ಯಕ್ಷರ ನೇಮಕವಾಗಿದೆ. ಪ್ರಸ್ತುತ ಬಸವಪ್ರಭು ಸ್ವಾಮೀಜು ಮಠದ ಧಾರ್ಮಿಕ, ಸೇವಾ, ಪೂಜಾ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications