Murugha Shree : ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ಚಿತ್ರದುರ್ಗ, ಸೆಪ್ಟೆಂಬರ್ 12: ಮಠದ ಪ್ರೌಢಶಾಲೆಯ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯವು ಮಂಗಳವಾರಕ್ಕೆ ಮುಂದೂಡಲಾಗಿದೆ.
ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದ್ದು, ಮಂಗಳವಾರ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಮುರುಘಾ ಶ್ರೀ ಜಾಮೀನಿಗೆ ಮಂಗಳವಾರ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಪೋಕ್ಸೋ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ ಪರಮಶಿವಯ್ಯ ಮತ್ತು ಬಸವಾದಿತ್ಯ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.

ಜಯದೇವ ಆಸ್ಪತ್ರೆಗೆ ದಾಖಲಾಗಲು ಮನವಿ
ಹೃದಯ ಸಂಬಂಧಿ ಖಾಯಿಲೆ ಇರುವುದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಕೋರ್ಟ್‌ಗೆ ಮಂಗಳವಾರ ಮನವಿ ಮಾಡುವ ಸಾಧ್ಯತೆಯಿದೆ. ಈಗಾಗಲೇ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚಿಸಿತ್ತು. ಇದೀಗ ಆಂಜಿಯೋಗ್ರಾಮ್ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ಗೆ ಮಾಡುವಂತೆ ಮನವಿ ಮಾಡಲಾಗಿದ್ದು, ಆಸ್ಪತ್ರೆಗೆ ಶಿಫ್ಟ್ ಬಗ್ಗೆಯೂ ಮಂಗಳವಾರ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಮುರುಘಾಶ್ರೀ ಆರೋಗ್ಯ ವರದಿಗಳ ಆಧಾರದ ಮೇಲೆ ಕೋರ್ಟ್ ಸೂಚನೆ ನೀಡಲಿದೆ ಎನ್ನಲಾಗುತ್ತಿದೆ.
ಸೆಪ್ಟೆಂಬರ್ 7ರಂದು ಸ್ವಾಮೀಜಿಗೆ ಹೃದಯ ಸಂಬಂಧಿ ಸಮಸ್ಸೆ ಬಗ್ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಸೇರಿಸಲು ಮನವಿ ಮಾಡಲಾಗಿತ್ತು. ಇದಕ್ಕೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು
ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನ ಪೋಕ್ಸೋ ಪ್ರಕರಣದ 2ನೇ ಆರೋಪಿ ಹಾಸ್ಟಲ್ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನವನ್ನು ನೀಡಲಾಗಿದ್ದು. ಆರೋಪಿ ರಶ್ಮಿಗೆ ಸೆಪ್ಟೆಂಬರ್ 14ರ ವರೆಗೂ ನ್ಯಾಯಾಂಗ ಬಂಧನ ಮುಂದುವರೆದಿದೆ.












Click it and Unblock the Notifications