Breaking: ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

ಚಿತ್ರದುರ್ಗ, ಸೆಪ್ಟೆಂಬರ್ 01: ಪೋಕ್ಸೋ ಕಾಯ್ದೆ ಪ್ರಕರಣ ಹಿನ್ನಲೆಯಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ( ನಾಳೆಗೆ) ಮುಂದೂಡಲಾಗಿದೆ.

ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಸ್ವಾಮೀಜಿ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಚಿತ್ರದುರ್ಗದ ಜಿಲ್ಲಾ 1ನೇ ಹೆಚ್ಚುವರಿ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡು ಶರಣರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನನ್ನು ಶುಕ್ರವಾರಕ್ಕೆ ಮುಂದೂಡಿಕೆ ಮಾಡಿದೆ.

ಗುರುವಾರ ಬೆಳಿಗ್ಗೆ 11ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಅರ್ಜಿಯನ್ನು ನ್ಯಾಯಾಧೀಶರು ಕೈಗೆತ್ತಿಕೊಂಡರು. ಸಂತ್ರಸ್ತ ಬಾಲಕಿಯರನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದವರನ್ನು ಮಾತ್ರ ಉಳಿಸಿಕೊಂಡರು. ಬೆಳಿಗ್ಗೆ 11.40 ಸರಿಯಾಗಿ ವಿಚಾರಣೆ ಆರಂಭವಾಯಿತು.

ಸಂತ್ರಸ್ತ ಬಾಲಕಿಯರ ಪರವಾಗಿ ಹೈಕೋರ್ಟ್ ವಕೀಲ ಶ್ರೀನಿವಾಸ್ ಹಾಗೂ ಕಾನೂನು ಸೇವಾ ಪ್ರಾಧಿಕಾರದ ವಕೀಲರು ಹಾಜರಾದರು. ಸಂತ್ರಸ್ತ ಬಾಲಕಿಯರು ಹಾಗೂ ಅವರ ತಂದೆಯ ಅಭಿಪ್ರಾಯ ಪರಿಗಣಿಸಿ ಜಾಮೀನು ತಕರಾರು ಅರ್ಜಿ ಸಲ್ಲಿಕೆಗೆ ಒಂದು ದಿನ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಲಾಯಿತು.

ಮುರುಘಾ ಶ್ರೀಗಳು ಯಾವ ಗ್ರೌಂಡ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೋ ಪರಿಶೀಲಿಸಿ ನಾಳೆ ತಕರಾರು ಅರ್ಜಿ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

Pocso case: Murugha Mutt Seer Bail Plea Application Hearing Postponed to Sept 2

ಮಠಕ್ಕೆ ಬಂದೋಬಸ್ತ್
ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ದೂರಿನ ಕುರಿತಂತೆ ಚಿತ್ರದುರ್ಗ ಮುರುಘಾ ಮಠಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಮಠಕ್ಕೆ ಆಗಮಿಸುವ ಪ್ರತಿಯೊಬ್ಬರನ್ನು ಪರಿಶೀಲಿಸಿ ಪೊಲೀಸರು ಒಳಗೆ ಬಿಡುತ್ತಿದ್ದಾರೆ.

ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಎಸ್‌ಕೆ ಬಸವರಾಜು
ಇನ್ನು ಮಾಜಿ ಶಾಸಕ ಹಾಗೂ ಮುರುಘಾ ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಕೂಡ ತಮ್ಮ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿರುವ ಹಿನ್ನಲೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದುರ್ಗದ 1ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಎಸ್.ಕೆ. ಬಸವರಾಜನ್ ಮತ್ತು ಪತ್ನಿ ಸೌಭಾಗ್ಯ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಬಸವರಾಜನ್ ವಿರುದ್ಧ ಅತ್ಯಾಚಾರ ಹಾಗೂ ಕಿರುಕುಳದ ಆರೋಪ ಮಾಡಿ ಮಠದ ಹಾಸ್ಟೆಲ್ ವಾರ್ಡನ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+