• search
  • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವೈರಲ್ ಆಯ್ತು ಚಿತ್ರದುರ್ಗದಲ್ಲಿ ಕರ್ತವ್ಯ ಮರೆತು ಪೇದೆ ಮಾಡಿದ ಎಣ್ಣೆ ಪಾರ್ಟಿ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಮೇ 05: ಲಾಕ್ ಡೌನ್ ಮಧ್ಯೆಯೂ ಪೊಲೀಸ್ ಪೇದೆಯೊಬ್ಬರು ಕರ್ತವ್ಯ ಮರೆತು ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಿತ್ರದುರ್ಗ ತಾಲೂಕಿನ ಪಲ್ಲವಗೆರೆ ಗ್ರಾಮದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ರಾಜು ಚವ್ಹಾಣ್ ಕುಡಿದು ಪಾರ್ಟಿ ಮಾಡಿದ್ದಾರೆ. ಅವರನ್ನು ಲಾಕ್ ಡೌನ್ ಹಿನ್ನೆಲೆಯಲ್ಲಿ ಭರಮಸಾಗರದ ಚೆಕ್ ಪೋಸ್ಟ್ ಗೆ ಪರಿಶೀಲನೆಗಾಗಿ ನೇಮಕ ಮಾಡಲಾಗಿತ್ತು. ಆದರೆ ಕರ್ತವ್ಯವನ್ನು ಮರೆತು ಈ ರೀತಿ ವರ್ತಿಸಿರುವುದು ಈಗ ಸುದ್ದಿಯಾಗಿದೆ.

ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಯಾಗಿದ್ದು, ನಿನ್ನೆಯಿಂದ ಬಾರ್ ಗಳು ಓಪನ್ ಆಗಿವೆ. ಎಲ್ಲೆಡೆ ಮದ್ಯ ಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಇಂಥ ಸಮಯದಲ್ಲಿ ಕರ್ತವ್ಯ ಪಾಲನೆ ಮಾಡಬೇಕಾದ ಪೊಲೀಸ್ ಪೇದೆ ರಾಜು ಎಲ್ಲವನ್ನೂ ಮರೆತು ಸ್ನೇಹಿತರೊಂದಿಗೆ ಎಣ್ಣೆ ಪಾರ್ಟಿ ನಡೆಸಿದ್ದಾರೆ. ಈರುಳ್ಳಿ ಜಮೀನಿನ ಮರದ ಕೆಳಗೆ ಕುಳಿತು ಗ್ರಾಮದ ಸ್ನೇಹಿತರ ಜೊತೆ ಪೊಲೀಸ್ ಸಮವಸ್ತ್ರದಲ್ಲಿಯೇ ಎಣ್ಣೆ ಪಾರ್ಟಿ ಮಾಡಿರುವ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

English summary
The video of police constable having alcohol party with friends went viral in chitradurga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X