• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿತ್ರದುರ್ಗ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಬಂಧನ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 27: ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಹೋಬಳಿಯ ಇಸಾಮುದ್ರ ಗ್ರಾಮದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಚಿತ್ರದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದೇ ತಿಂಗಳ ಜುಲೈ 23 ರಂದು 13 ವರ್ಷದ ಬಾಲಕಿ ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಬಾಲಕಿಯನ್ನು ಮೆಕ್ಕೆಜೋಳ ಹೊಲದಲ್ಲಿ ಬಲವಂತವಾಗಿ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಘಟನೆ ನಡೆದಿತ್ತು. ಈ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅದರಂತೆ ಪ್ರಕರಣವನ್ನು ಕೈಗೆತ್ತಿಕೊಂಡ ಚಿತ್ರದುರ್ಗ ಜಿಲ್ಲಾ ವರಿಷ್ಠಾಧಿಕಾರಿ ರಾಧಿಕಾ. ಜಿ., 6 ಜನ ಸಿಪಿಐ, 15 ಪಿಎಸ್ಐ ಹಾಗೂ ಇತರೆ 50 ಜನ ಸಿಬ್ಬಂದಿಗೊಂಡ ತಂಡವನ್ನು ರಚಿಸಿದ್ದರು. ಇನ್ನು ಕೊಲೆ ಆರೋಪಿಯ ಜಾಡು ಹಿಡಿದು ಬೆನ್ನತ್ತಿದ ಪೊಲೀಸ್ ಸಿಬ್ಬಂದಿಗಳು ಮಂಗಳವಾರ 1 ಗಂಟೆ ಸಮಯದಲ್ಲಿ ಇಸಾಮುದ್ರ ಗ್ರಾಮದ ನಾಗರಾಜ (24) ವರ್ಷ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Chitradurga: Police Detain Accused Who Raped Minor Girl in Issamudra Village
   ಸಿಎಂ ಆಗ್ತಿಂದ್ದಂತೆ ವಿರೋಧಪಕ್ಷಕ್ಕೆ ಟಾಂಗ್ ಕೊಟ್ಟ ಬಸವರಾಜ್ ಬೊಮ್ಮಾಯಿ | Oneindia Kannada

   ಪ್ರಕರಣದ ಆರೋಪಿಯನ್ನು ಪತ್ತೆ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿ, ಸೂಕ್ತ ಬಹುಮಾನವನ್ನು ಘೋಷಿಸಿದ್ದಾರೆ.

   English summary
   Rape And Murder Case: Chitradurga Police arrest accused who raped minor girl in Issamudra Village Of Bharamasagara Hobli.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X