ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಪೂರ್ಣಿಮಾ ಶ್ರೀನಿವಾಸ್‌: ಗೊಲ್ಲ ಸಮುದಾಯದಲ್ಲಿ ಮೂಡದ ಒಮ್ಮತ

ಚಿತ್ರದುರ್ಗ, ಅಕ್ಟೋಬರ್ 10: ಅಕ್ಟೋಬರ್ 20ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಬನ್ನಿ ಎಂದು ಬೆಂಬಲಿಗರನ್ನು ಕರೆದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಬಿಜೆಪಿಗೆ ಗುಡ್ ಬೈ ಹೇಳುತ್ತಿದ್ದಾರೆ.

ಹಿರಿಯೂರು ತಾಲೂಕಿನ ಬೀರೇನಳ್ಳಿ ಗ್ರಾಮದ ಸಮೀಪವಿರುವ ತಮ್ಮ ತೋಟದ ನಿವಾಸದಲ್ಲಿ ಗೊಲ್ಲ ಸಮುದಾಯದವರ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ನಮ್ಮ ಕುಟುಂಬ ಮೂಲತಃ ಕಾಂಗ್ರೆಸ್‌ ಆಗಿದ್ದು, ನನ್ನ ತಂದೆ ಎ. ಕೃಷ್ಣಪ್ಪ ಅವರು ಕಾಂಗ್ರೆಸ್ ಪಕ್ಷದಲ್ಲಿ ಶಾಸಕರಾಗಿ, ಸಚಿವರಾಗಿದ್ದರು. ಕಾರಣಾಂತರಗಳಿಂದ ಅನ್ಯ ಪಕ್ಷದೊಂದಿಗೆ ಹೋಗಬೇಕಾದ ಅನಿವಾರ್ಯತೆ ಬಂತು ಅಷ್ಟೇ ಎಂದರು.

poornima-srinivas-invited-supporters

ಇತ್ತೀಚಿಗಷ್ಟೇ ನಡೆದ ವಿಧಾನಸಭಾ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದರು. ಜೊತೆಗೆ ಬೆಂಗಳೂರಿನ ಕೆ.ಆರ್ ಪುರಂ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದಿದ್ದರು. ಆದರೆ ನಾವು ಹೋಗಿರಲಿಲ್ಲ. ಇತ್ತೀಚಿಗೆ ಯಾಕೋ ಬಿಜೆಪಿ ಪಕ್ಷದಲ್ಲಿ ಇರುವುದು ಸೂಕ್ತವಲ್ಲ ಎನ್ನಿಸಿತು. ಮೂಲ ಮಾತೃ ಪಕ್ಷಕ್ಕೆ ಹೋಗಬೇಕು ಅನ್ನಿಸಿತು ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗಿದೆ. ಅಕ್ಟೋಬರ್ 20ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನ ಸೇರುತ್ತಿದ್ದೇನೆ ಎಂದು ಕೆ ಪೂರ್ಣಿಮಾ ತಿಳಿಸಿದರು.

poornima-srinivas-invited-supporters

ಮುಂಬರುವ ವರ್ಷದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿ ಇಲ್ಲದ ಕಾರಣ ಡಿ.ಟಿ ಶ್ರೀನಿವಾಸ್ ಅವರೇ ಸೂಕ್ತ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಅದಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪತಿ ಡಿ.ಟಿ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡಲಿದ್ದಾರೆ. ಅವರು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.

ಇನ್ನು ಗೊಲ್ಲ ಸಮುದಾಯದ ಮುಖಂಡರು ಸಭೆಗೆ ಗೈರಾಗುವ ಮೂಲಕ ಈ ದಂಪತಿ ನಡೆಗೆ ಆಕ್ರೋಶ ಹೊರ ಹಾಕಿದ್ದಾರೆ. ಪಕ್ಷದಿಂದ ಪಕ್ಷಕ್ಕೆ ಜಿಗಿಯುವ ಮೂಲಕ ಸಮುದಾಯವನ್ನು ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ಕ್ಷೇತ್ರದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಮುದಾಯ ಮುಖಂಡರ ಜೊತೆ ಸಮಾಲೋಚನೆ ಚರ್ಚಿಸದೆ ತೀರ್ಮಾನ ತೆಗೆದುಕೊಂಡಿರುವುದು ಬೇಸರ ತಂದಿದೆ. ಈಗಾಗಲೇ ಬಿಜೆಪಿ ಪಕ್ಷದಿಂದ ಕಾಲು ಹೊರಗಡೆ ಇಟ್ಟಿದ್ದಾರೆ. ಅವರಿಗೆ ಯಾರು ಹೇಳಿದರು ನಿಲ್ಲುವುದಿಲ್ಲ. ಅವರು ಹೋಗಲಿ, ನಾವು ಬಿಜೆಪಿ ಪಕ್ಷದಲ್ಲೇ ಇರುತ್ತವೆ ಎಂದು ಸಭೆ ಮುಗಿದ ಬಳಿಕ ಕೆಲವರು ಮಾತನಾಡಿಕೊಳ್ಳುತ್ತಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+