Get Updates
Get notified of breaking news, exclusive insights, and must-see stories!

ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆಗೆ ಸಿದ್ಧತೆ ಹೇಗಿದೆ? ಜಿಲ್ಲಾಧಿಕಾರಿಗಳ ಪ್ರಮುಖ ಸೂಚನೆಗಳೇನು?

ಚಿತ್ರದುರ್ಗ, ಸೆಪ್ಟೆಂಬರ್‌, 19: ನಗರದಲ್ಲಿ ಹಿಂದೂ ವಿಶ್ವ ಪರಿಷತ್ ಹಾಗೂ ಭಜರಂಗದಳದಿಂದ ಏರ್ಪಡಿಸಿರುವ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಸೆಪ್ಟೆಂಬರ್‌ 28ರಂದು ನಡೆಯಲಿದೆ. ಈ ಶೋಭಾಯಾತ್ರೆಗೆ ಸುಮಾರು 3 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಹಾಗಾದರೆ ಈ ಬೃಹತ್‌ ಮೆರವಣಿಗೆ ಎಷ್ಟು ಗಂಟೆಯಿಂದ ಆರಂಭವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮುಂಬೈ ಬಿಟ್ಟರೆ ದೇಶದಲ್ಲಿಯೇ ಎರಡನೇ ಅತೀ ದೊಡ್ಡ ಹಿಂದೂ ಮಹಾಗಣಪತಿ ಮೆರವಣಿಗೆ ನಡೆಯುವುದು ಕೋಟೆನಾಡು ಚಿತ್ರದುರ್ಗದಲ್ಲಿ. ಈ ಬಾರಿಯ ಮೆರವಣಿಗೆ ಸೆಪ್ಟೆಂಬರ್ 28ರಂದು ನಡೆಯಲಿದ್ದು, ಇದಕ್ಕೆ ಲಕ್ಷಾನುಗಟ್ಟಲೇ ಜನರು ಭಾಗವಹಿಸುವ ನಿರೀಕ್ಷೆಯಿದೆ. ಇನ್ನು ಅಂದು ಬೆಳಗ್ಗೆ 11 ಗಂಟೆಗೆ ಮೆರವಣಿಗೆಯು ಆರಂಭ ಆಗಲಿದ್ದು, ಅದೇ ದಿನ ರಾತ್ರಿ 9 ಗಂಟೆಗೆ ಗಣೇಶ ವಿಸರ್ಜನೆ ಮಾಡಲಾಗುತ್ತದೆ.

Preparations for Hindu Mahaganapati Visarjana in Chitradurga Important Instructions by DC

ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಿಗೆ ಈಗಾಗಲೇ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆಗೆ ಜಿಲ್ಲೆ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 3,00,000 ಜನ ಭಾಗವಹಿಸುವ ನಿರೀಕ್ಷೆಯಿದೆ. ಶಾಂತಿ ಹಾಗೂ ಸುವ್ಯವಸ್ಥೆಯಿಂದ ಮೆರವಣಗೆ ನಡೆಯಲು ಅನುವಾಗುವಂತೆ ಪೊಲೀಸ್ ಇಲಾಖೆಯಿಂದ ಈಗಾಗಲೇ ಸೂಕ್ತ ಬಂದೋಬಸ್ತ್‌ ಕ್ರಮ ಕೈಗೊಳ್ಳಲಾಗಿದೆ.

ಸಂಘಟಕರು ಬೆಳಗ್ಗೆ 11 ಗಂಟೆಗೆ ಸರಿಯಾಗಿ ಮೆರವಣಿಗೆಯನ್ನು ಪ್ರಾರಂಭಿಸಿ ರಾತ್ರಿ 9 ಗಂಟೆಯೊಳಗೆ ಮೆರವಣಿಗೆ ಮುಕ್ತಾಯ ಆಗುವಂತೆ ನೋಡಿಕೊಳ್ಳಬೇಕು ಎಂದರು. ನಗರದ ಬಿ.ಡಿ ರಸ್ತೆ ಹಾಗೂ ಹೊಳಲ್ಕೆರೆ ರಸ್ತೆಯಲ್ಲಿ ಸುಗಮವಾಗಿ ಮೆರವಣಿಗೆ ಹಾದು ಹೋಗುವಂತೆ ನಗರಸಭೆಯಿಂದ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು. ಪೊಲೀಸರು ವೀಕ್ಷಣೆಗೆ ಅನುಕೂಲವಾಗುವಂತೆ ವಾಚ್‌ಟವರ್ ನಿರ್ಮಿಸಬೇಕು. ಸ್ವಚ್ಛತೆ, ಕುಡಿಯುವ ನೀರು ಹಾಗೂ ಸಂಚಾರಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ರಸ್ತೆಯಲ್ಲಿ ತಗ್ಗು, ಗುಂಡಿಗಳು ಇದ್ದರೇ, ತಕ್ಷಣವೇ ಮುಚ್ಚುವ ಕೆಲಸ ಮಾಡಬೇಕು. ಮೆರವಣಿಗೆ ಸಾಗುವ ರಸ್ತೆ ಹಾಗೂ ಅಸು ಪಾಸಿನ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಮೇಲೆ ಸಾರ್ವಜನಿಕರು ಹತ್ತಿ ನಿಲ್ಲದಂತೆ ನಿರ್ಬಂಧ ವಿಧಿಸಬೇಕು. ಮೆರವಣಿಗೆ ವೇಳೆ ಹಠಾತ್ ಅನಾರೋಗ್ಯಕ್ಕೆ ತುತ್ತಾದವರನ್ನು ಆರೈಕೆ ಮಾಡಲು ಮೆರವಣಿಗೆ ಸಾಗುವ ಹಾದಿಯಲ್ಲಿ ಸೇಫ್ ಹೌಸ್‌ಗಳನ್ನು ಗುರುತಿಸಬೇಕು ಎಂದು ಸೂಚನೆ ನೀಡಿದರು.

ಆರೋಗ್ಯ ಇಲಾಖೆಯಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌ವೊಂದನನ್ನು ಮೀಸಲಿರಿಸಿ, ಅಗತ್ಯ ವೈದ್ಯರನ್ನು ನೇಮಿಸಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ 4 ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಬೇಕು. ಬೆಸ್ಕಾಂ ಅಧಿಕಾರಿಗಳು ಮೆರವಣಿಗೆ ವೇಳೆ ವಿದ್ಯುತ್ ಅಡಚಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಸಾಗುವ ಹಾದಿಯಲ್ಲಿ ವಿದ್ಯುತ್ ತಂತಿಗಳನ್ನು ಎತ್ತರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.

3,000 ಪೊಲೀಸ್ ಸಿಬ್ಬಂದಿ ನೇಮಕ: ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಶೋಭಾಯಾತ್ರೆ ಬಂದೋಬಸ್ತ್ ಕಾರ್ಯಕ್ಕೆ 14 ಡಿವೈಸ್‌ಪಿ, 33 ಸಿಪಿಐ, 112 ಪಿಎಸ್‌ಐ, 167 ಎಎಸ್‌ಐ, 1997 ಪೊಲೀಸ್ ಕಾನ್ಸ್‌ಟೇಬಲ್, 658 ಗೃಹ ರಕ್ಷಕರು ಸೇರಿ 3,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಇದರೊಂದಿಗೆ 15 ಕೆಎಸ್‌ಆರ್‌ಪಿ, 11 ಡಿಎಆರ್, 4 ಕ್ಯೂಆರ್‌ಟಿ ತುಕಡಿಗಳನ್ನು ನಿಯೋಜಿಸಲಾಗುವುದು.

81 ಕಡೆ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. 20 ವಿಡಿಯೋಗ್ರಾಫರ್‌ಗಳು ಮೆರವಣಿಗೆ ಚಿತ್ರೀಕರಣವನ್ನು ಮಾಡಲಿದ್ದಾರೆ. 9 ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗುವುದು. ಪಟಾಕಿ ಬಳಕೆಗೆ ಅವಕಾಶವಿಲ್ಲ. ಮೆರವಣಿಗೆಯಲ್ಲಿ ಡಿಜೆ ಬಳಸಲು ಪೊಲೀಸ್ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು.

ಹೊರ ಜಿಲ್ಲೆಗಳಿಂದ ಆಗಮಿಸುವ ಪೊಲೀಸ್ ಸಿಬ್ಬಂದಿಗೆ ತಂಗಲು ನಗರದ ಹಾಸ್ಟೆಲ್‌ಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ ಬಂಡಾರು ಸಭೆಯಲ್ಲಿ ತಿಳಿಸಿದರು.

ಸೆಪ್ಟೆಂಬರ್‌ 27 ಹಾಗೂ 28ರಂದು ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧಕ್ಕೆ ಆದೇಶಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಗೆ ಕೋರಿಕೆ ಸಲ್ಲಿಸಲಾಗಿದೆ. ಶೋಭಾಯಾತ್ರೆಯ ದಿನ ಬಿ.ಡಿ.ರಸ್ತೆಯಲ್ಲಿ ವಾಹನಗಳ ಓಡಾಟ ನಿರ್ಬಂಧಿಸಿ, ಬದಲಿ ಮಾರ್ಗದಲ್ಲಿ ಬಸ್ ಹಾಗೂ ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ ಆದೇಶ ಹೊರಡಿಸಲು ಕೋರಿಕೆ ಸಲ್ಲಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ ಬಂಡಾರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+