ಏಪ್ರಿಲ್ 8 ರಂದು ಕೋಟೆನಾಡು ಚಿತ್ರದುರ್ಗದಲ್ಲಿ ಮೋದಿ ಪ್ರಚಾರ
ಚಿತ್ರದುರ್ಗ, ಮಾರ್ಚ್ 31: ಮಧ್ಯ ಕರ್ನಾಟಕ ಚಿತ್ರದುರ್ಗದಲ್ಲಿ ಏಪ್ರಿಲ್ 8 ರಂದು ಬಿಜೆಪಿಯಿಂದ ಆಯೋಜಿಸಿರುವ ಬೃಹತ್ ರಾಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುತ್ತಿದ್ದು, ಮತದಾರರನ್ನು ಉದ್ದೇಶಿಸಿ ಸುಮಾರು ಒಂದು ಗಂಟೆಯ ಕಾಲ ಮಾತನಾಡಲಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈಗಾಗಲೇ ನಗರದ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲು ಬಿಜೆಪಿ ಸಕಲ ಸಿದ್ಧತೆಯಲ್ಲಿ ತೊಡಗಿದೆ. ಜೊತೆಗೆ ಅಕ್ಕ ಪಕ್ಕದ ಜಿಲ್ಲೆಗಳಾದ ತುಮಕೂರು, ದಾವಣಗೆರೆ, ಬಳ್ಳಾರಿ, ಚಿಕ್ಕಮಗಳೂರು ಜಿಲ್ಲೆಯವರು ಸಹ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಇದೆ.
ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ಪರ ಮತ ಯಾಚನೆ ಮಾಡುವುದು ಖಚಿತವಾಗಿದ್ದು, ಏ. 8 ರಂದು ಚಿತ್ರದುರ್ಗಕ್ಕೆ ಆಗಮಿಸಿ ಮಧ್ಯಾಹ್ನ 1 ಗಂಟೆಗೆ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮೈತ್ರಿ ಅಭ್ಯರ್ಥಿ ಚಂದ್ರಪ್ಪ ನವರಿಗೆ ಟಾಂಗ್ ಕೊಡಲು ಸಿದ್ಧವಾಗಿದ್ದಾರೆ ಎನ್ನಲಾಗಿದೆ.

ರಾಲಿಯಲ್ಲಿ ಸ್ಥಳೀಯ ಬಿಜೆಪಿ ಶಾಸಕರಾದ ಕೆ. ಪೂರ್ಣಿಮಾ ಶ್ರೀನಿವಾಸ್, ಜಿ.ಎಚ್. ತಿಪ್ಪಾರೆಡ್ಡಿ, ಗೂಳಿಹಟ್ಟಿ ಡಿ. ಶೇಖರ್, ಚಂದ್ರಪ್ಪ ಮತ್ತು ಶ್ರೀರಾಮುಲು ಸೇರಿದಂತೆ ಬಿಜೆಪಿ ಅಭ್ಯರ್ಥಿ ಎ. ನಾರಾಯಣ ಸ್ವಾಮಿ ಕೂಡ ಭಾಗವಹಿಸಲಿದ್ದಾರೆ.












Click it and Unblock the Notifications