ಹೊಸದುರ್ಗ: ಡೆತ್ ನೋಟ್ ಬರೆದಿಟ್ಟು ಲಾಡ್ಜ್‌ನಲ್ಲಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
ಚಿತ್ರದುರ್ಗ, ಆಗಸ್ಟ್, 06: ಬ್ಯಾಂಕ್ ಉದ್ಯೋಗಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. ಜಿಲ್ಲೆಯ ಹೊಸದುರ್ಗದ ಖಾಸಗಿ ಲಾಡ್ಜ್‌ನಲ್ಲಿ ಐಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಎಂ.ಸಂತೋಷ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸದುರ್ಗದ ಖಾಸಗಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ ಸಂತೋಷ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅಪಘಾತದಲ್ಲಿ ಯುವಕ ಸಾವು: ಹುಟ್ಟಹಬ್ಬದ ಆಚರಣೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ನಡೆದ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಗಿನ ಜಾವ ತಾಲೂಕಿನ ಬಬ್ಬೂರು ಗ್ರಾಮದ ಲಕ್ಕಪ್ಪ ಎಂಬುವರ ಮನೆಯ ಸಮೀಪ ನಡೆದಿದೆ. ತಾಲೂಕಿನ ಬಬ್ಬೂರು ಗ್ರಾಮದ ಯುವಕ ಡಿ.ವಿ.ತಿಪ್ಪೇಸ್ವಾಮಿ (27) ಮೃತ ರ್ದುದೈವಿ.

ಸೋಮವಾರ ಮೃತನ ಹುಟ್ಟು ಹಬ್ಬವಿದ್ದ ಕಾರಣ ಸ್ನೇಹಿತರ ಜೊತೆಯಲ್ಲಿ ಊಟಕ್ಕಾಗಿ ಬಬ್ಬೂರು ಗ್ರಾಮದ ಹೊರಭಾಗದಲ್ಲಿದ್ದ ವೈಟ್ ವಾಲ್‌ಗೆ ಹೋಗಿದ್ದನು. ಬಳಿಕ ಊಟ ಮುಗಿಸಿಕೊಂಡು ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಬೈಕ್ ಮೂಲಕ ವಾಪಸ್ ಮನೆಗೆ ಬರುವಾಗ ರಸ್ತೆಯಲ್ಲಿದ್ದ ಮಣ್ಣಿನ ಗುಡ್ಡೆಗೆ ಬೈಕ್ ಡಿಕ್ಕಿ ಹೊಡೆದ ಕಾರಣ ರಸ್ತೆಯಲ್ಲಿ ಬಿದ್ದಿದೆ. ಈ ವೇಳೆ ತಲೆ ಹಾಗೂ ಇತರ ಭಾಗಕ್ಕೆ ತೀವ್ರವಾದ ಪೆಟ್ಟು ಬಿದ್ದ ಕಾರಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸದ್ಯ ಈ ಪ್ರಕರಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ವಿದ್ಯಾರ್ಥಿ ಆತ್ಮಹತ್ಯೆ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರೆದಿದ್ದು, ಇತ್ತ ಕೋಟೆ ನಾಡು ಚಿತ್ರದುರ್ಗದಲ್ಲೂ ಸಹ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹಾಸನ ಮೂಲದ ವಿದ್ಯಾರ್ಥಿ ಮನೋಜ್(22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.
ಬಸವೇಶ್ವರ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಫ್ಯಾನ್‌ಗೆ ಸೀರೆಯಿಂದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಕಾಲೇಜಿನ 2ನೇ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಓದುವ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ವಿದ್ಯಾರ್ಥಿ ಆತ್ಮಹತ್ಯೆ: ಹಿರಿಯೂರು ತಾಲೂಕಿನ ಉಡುವಳ್ಳಿ ಬಳಿ ಇರುವ ನವೋದಯ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗಷ್ಟೇ ನಡೆದಿತ್ತು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹೊಳಲ್ಕೆರೆ ತಾಲ್ಲೂಕಿನ ಕೆಂಗುಂಟೆ ಗ್ರಾಮದ ಪ್ರೇಮ್ ಸಾಗರ್ (13) ವರ್ಷ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು 8ನೇ ತೆರಿಗೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಸೀನಿಯರ್ ವಿದ್ಯಾರ್ಥಿಗಳು ರೇಗಿಸುತ್ತಿದ್ದರು ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications