ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಪ್ರತಿಭಟನೆ
ಚಿತ್ರದುರ್ಗ, ಜುಲೈ 15: ಸಾಸ್ವೆಹಳ್ಳಿ ಏತ ನೀರಾವರಿ ಎರಡನೇ ಹಂತದ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ, ಅಖಂಡ ಕರ್ನಾಟಕ ರೈತ ಸಂಘದ ಸಾವಿರಾರು ರೈತರು ಒನಕೆ ಓಬವ್ವ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.
"ನಾವು ನೀರಿಗಾಗಿ ನಿರಂತರ ಹೋರಾಟ ನಡೆಸಿಕೊಂಡು ಬರುತ್ತಿದ್ದೇವೆ. ಮೊದಲು ರೈತರು ಸಂಘಟಿತರಾಗಬೇಕು. ಮುಂದೊಂದು ದಿನ ನೀರು ಬರುತ್ತದೆಂದು ಸುಮ್ಮನೆ ಕೂತರೆ ಪ್ರಯೋಜನವಿಲ್ಲ. ಹಿರಿಯೂರಿನ ವಾಣಿವಿಲಾಸ ಸಾಗರಕ್ಕೂ ನೀರು ಬರಬೇಕು. ರಾಜಕಾರಣಿಗಳೇ, ಜನರಿಗೆ ನೀವು ನೀಡಿರುವ ವಾಗ್ದಾನ ಪೂರೈಸಿಕೊಳ್ಳುವುದಕ್ಕಾದರೂ ನೀರು ಕೊಡಿ" ಎಂದು ಆಗ್ರಹಿಸಿದರು.
"ನಾನು ನೀರಿಗಾಗಿ ಬೀದಿಗಿಳಿದು ಹೋರಾಡೋಣ ಎಂದು ಕರೆದಾಗ ನೀವ್ಯಾರೂ ಬರಲಿಲ್ಲ. ಈಗ ಸಮಯ ಬಂದಿದೆ. ನೀರಿಗಾಗಿ ಸರ್ಕಾರಕ್ಕೆ ಹಕ್ಕೊತ್ತಾಯ ಮಾಡೋಣ. ಇಲ್ಲವಾದಲ್ಲಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸೋಣ. ಇದಕ್ಕೆ ನಿಮ್ಮೆಲ್ಲರ ಬೆಂಬಲ ಇರಬೇಕು. ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರದಿಂದ ತತ್ತರಿಸಿವೆ. ಸಾಂಘಿಕ ಹೋರಾಟ ಮಾಡೋಣ. ರೈತರೆಲ್ಲಾ ಒಟ್ಟಾಗಿದ್ದರೆ ಖಂಡಿತ ನೀರು ಬಂದೇ ಬರುತ್ತದೆ" ಎಂದು ಆತ್ಮಸ್ಥೈರ್ಯ ತುಂಬಿದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಸದಸ್ಯೆ ಜಯಪ್ರತಿಭಾ, ತಾ.ಪಂ.ಅಧ್ಯಕ್ಷ ಡಿ.ಎಂ.ಲಿಂಗರಾಜು, ರೈತ ಮುಖಂಡರಾದ ಬಸ್ತಿಹಳ್ಳಿ ಸುರೇಶ್‌ಬಾಬು, ಮಂಜಣ್ಣ, ರವಿಕುಮಾರ್, ನಾಗರಾಜ್, ಎಂ.ಬಿ.ತಿಪ್ಪೇಸ್ವಾಮಿ, ಸಿ.ಆರ್.ತಿಮ್ಮಣ್ಣ, ಭೀಮರೆಡ್ಡಿ, ಕುರುಬರಹಳ್ಳಿ ಶಿವಣ್ಣ ಮುಂತಾದವರು ವೇದಿಕೆಯಲ್ಲಿದ್ದರು. ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications