ಚಿತ್ರದುರ್ಗದ ಹಿರಿಯೂರಿನಲ್ಲಿ ಮುಂದುವರಿದ ಪ್ರತಿಭಟನೆ
ಹಿರಿಯೂರು, ಜುಲೈ 3: ಕಳೆದ ಇಪ್ಪತ್ತು ದಿನಗಳಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು, ಇಂದು ಕೂಡ ವಕೀಲರ ಸಂಘ, ಜನಪರ ಸಂಘಟನೆ, ರೈತ ಸಂಘ, ಕನ್ನಡ ಪರಿಷತ್, ಕರವೇ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಸೇರಿ 'ಭದ್ರಾ ಕಾಮಗಾರಿ ಪೂರ್ಣಗೊಳಿಸಿ ವಿವಿ ಸಾಗರಕ್ಕೆ ನೀರು ಹರಿಸಿ' ಎಂದು ಉಪವಾಸ ಸತ್ಯಾಗ್ರಹವನ್ನು ಹಿರಿಯೂರು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ನಡೆಸುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಬಹುಮುಖ್ಯ ಯೋಜನೆಯಾದ ಭದ್ರಾ ಮೇಲ್ದಂಡೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, 2015ರಲ್ಲಿ ವಿವಿ ಸಾಗರಕ್ಕೆ ಬರಬೇಕಿದ್ದ ಭದ್ರಾ ನೀರು ಇನ್ನೂ ಬಂದಿಲ್ಲ. ಸದ್ಯಕ್ಕೆ ನೀರು ಹರಿದು ಬರುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಇದಕ್ಕಾಗಿ, ತ್ವರಿತಗತಿಯಲ್ಲಿ ನೀರು ಹರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

ಇಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾಮಣಪ್ಪ ಎರಡನೇ ಬಾರಿಗೆ ಕಾಮಗಾರಿ ವೀಕ್ಷಣೆಗೆ ತೆರಳಿದ್ದಾರೆ.











Click it and Unblock the Notifications