ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಫೆ.27ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ; 1.50 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಗುರಿ

|
Google Oneindia Kannada News

ಚಿತ್ರದುರ್ಗ, ಫೆಬ್ರವರಿ 26: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇದೇ ಫೆಬ್ರವರಿ 27ರಿಂದ ಮಾರ್ಚ್ 2ರವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಚಿತ್ರದುರ್ಗ ಜಿಲ್ಲೆಯ ಐದು ವರ್ಷದೊಳಗಿನ 1,50,054 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಫೆ.27 ಅನ್ನು 'ಪೋಲಿಯೋ ಭಾನುವಾರ' ಎಂದು ಘೋಷಣೆ ಮಾಡಲಾಗಿದೆ ಎಂದರು.

ಬೆಂಗಳೂರು: ಫೆ. 27ರಿಂದ ಮಾರ್ಚ್ 3ರವರೆಗೆ ಪಲ್ಸ್ ಪೋಲಿಯೋ ಅಭಿಯಾನಬೆಂಗಳೂರು: ಫೆ. 27ರಿಂದ ಮಾರ್ಚ್ 3ರವರೆಗೆ ಪಲ್ಸ್ ಪೋಲಿಯೋ ಅಭಿಯಾನ

ಹುಟ್ಟಿದ ಮಗುವಿನಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಲಾವುದು. ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ, ಭಾನುವಾರದಂದು ಪುನಃ ಪೋಲಿಯೋ ಲಸಿಕೆಯನ್ನು ತಪ್ಪದೇ ಹಾಕಿಸಬೇಕು. ಪೋಲಿಯೋ ಬೂತ್ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

Chitradurga: Pulse Polio Drive From February 27 to March 2

ಫೆಬ್ರವರಿ 27ರಂದು ಲಸಿಕಾ ಕೇಂದ್ರಗಳಲ್ಲಿಯೇ ಪೋಲಿಯೋ ಲಸಿಕೆ ಹಾಕಲಾಗುವುದು. ನಂತರದ ದಿನಗಳಲ್ಲಿ ಫೆ.28ರಿಂದ ಮಾರ್ಚ್ 02 ರವರೆಗೆ ಮನೆ ಮನೆಗೆ ಭೇಟಿ ನೀಡುವುದರ ಮೂಲಕ ಲಸಿಕೆ ಹಾಕಲಾಗುವುದು ಎಂದರು.

ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ರಂಗನಾಥ್ ಮಾತನಾಡಿ, "2014ರಲ್ಲಿ ಭಾರತ ಪೋಲಿಯೋ ಮುಕ್ತ ಭಾರತ ಎಂದು ಘೋಷಣೆಯಾಗಿದೆ. ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜೊತೆಯಲ್ಲಿಯೇ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಸಿಕೊಂಡು ಬರಲಾಗಿದೆ. ನೆರೆಯ ಪಾಕಿಸ್ತಾನ, ಅಪ್ಘಾನಿಸ್ತಾನ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ದಾಖಲಾಗುತ್ತಿರುವ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ಸಂಪೂರ್ಣವಾಗಿ ವೈರಸ್‍ನ್ನು ಹೋಗಲಾಡಿಸಲು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವನ್ನು ವಿಶೇಷವಾಗಿ ಎರಡು ಸುತ್ತಗಳಲ್ಲಿ ಮಾಡಲಾಗುತ್ತಿದೆ,'' ಎಂದರು.

1995ರಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಪ್ರಾರಂಭವಾಯಿತು. 2011ರಲ್ಲಿ ಭಾರತದಲ್ಲಿ ಕೊನೆಯ ಪೋಲಿಯೋ ಪ್ರಕರಣ ದಾಖಲಾದ ನಂತರ 2014ರಲ್ಲಿ ಪೋಲಿಯೋ ಮುಕ್ತ ದೇಶ ಎಂದು ಘೋಷಣೆ ಮಾಡಲಾಯಿತು. 2015ರಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಪೋಲಿಯೋ ಹನಿ ಜೊತೆಗೆ ಐಪಿವಿ ಚುಚ್ಚುಮದ್ದು ಪ್ರಾರಂಭ ಮಾಡಲಾಯಿತು.

2021ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ 1,52,852 ಗುರಿಯಲ್ಲಿ 1,56,132 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿ ಶೇ.102.82ರಷ್ಟು ಸಾಧನೆ ಮಾಡಲಾಗಿದೆ. ಜಿಲ್ಲೆಯ ಐದು ವರ್ಷದೊಳಗಿನ 1,50,054 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, 1091 ಬೂತ್, 71 ಟ್ರಾನ್ಸಿಟ್ ಪಾಯಿಂಟ್ ಮತ್ತು 16 ಮೊಬೈಲ್ ತಂಡಗಳ ಮೂಲಕ ಫೋಲಿಯೋ ಲಸಿಕೆ ಹಾಕಲಾಗುತ್ತದೆ. ಈ ಸಂಬಂಧ ಅನೇಕ ಐಇಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 2355 ವ್ಯಾಕ್ಸಿನೇಟರ್‍ಗಳು, 254 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

Chitradurga: Pulse Polio Drive From February 27 to March 2

ಉಕ್ರೇನ್‌ನಲ್ಲಿ ಸಿಲುಕಿದವರಿಗಾಗಿ ನೋಡಲ್ ಅಧಿಕಾರಿ ನೇಮಕ
ಯುದ್ಧಪಿಡಿತ ಉಕ್ರೇನ್‌ನಲ್ಲಿ ಸಿಲುಕಿರುವವರನ್ನು ಕರೆತರುವ ನಿಟ್ಟಿನಲ್ಲಿ ಕಂದಾಯ ಇಲಾಖೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಡಾ.ಮನೋಜ್ ರಾಜನ್‌ರವರನ್ನು ನೋಡಲ್ ಅಧಿಕಾರಿಗಳನ್ನಾಗಿ ಸರ್ಕಾರ ನೇಮಕ ಮಾಡಲಾಗಿದೆ. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ತೊಂದರೆಯಲ್ಲಿರುವ ಕನ್ನಡಿಗರಿಗೆ ಅಗತ್ಯ ನೆರವು ನೀಡಲಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದಲ್ಲಿ 24*7 ಕೆಲಸ ಮಾಡಲಿರುವ ಸಹಾಯವಾಣಿ 080-1070, 080-22340676 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಚಿತ್ರದುರ್ಗ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಅವರ ಪುತ್ರಿ ಸುನೇಹ ಎಂಬುವರು ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು, ಉಕ್ರೇನ್‍ನಲ್ಲಿ ಸಿಲುಕಿರುವ ಸುನೇಹ ಅವರೊಂದಿಗೆ ವಿಡಿಯೋ ಕಾಲ್‌ನಲ್ಲಿ ಈಗಾಗಲೇ ಮಾತನಾಡಿದ್ದು, ಪ್ರದೇಶದ ಮಾಹಿತಿ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ರಂಗನಾಥ್, ಆರ್‍ಸಿಎಚ್ ಅಧಿಕಾರಿ ಡಾ. ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್ ಇದ್ದರು.

Recommended Video

ಭಾರತದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಉಕ್ರೇನ್‌‌ನ್ನು ಯಾಕೆ ಆಯ್ಕೆ ಮಾಡಿಕೊಳ್ತಾರೆ? | Oneindia Kannada

English summary
Chitradurga district Administration to hold pulse-polio drive from February 27 to March 2 across district with 71 planning units and 1091 vaccination booths. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X