ವಾರಕ್ಕೊಮ್ಮೆ ಮಕ್ಕಳಿಗೆ ರಾಗಿಮುದ್ದೆ ಭಾಗ್ಯ!

ಚಿತ್ರದುರ್ಗ, ಜು. 11 : ಚಿತ್ರದುರ್ಗ ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳ ಶಾಲೆಗಳಲ್ಲಿ ಮಕ್ಕಳಿಗೆ ಇನ್ನು ಮುಂದೆ ವಾರದಲ್ಲಿ ಒಂದು ದಿನ ರಾಗಿಮುದ್ದೆ ನೀಡಲಾಗುತ್ತದೆ. ಶಿಕ್ಷಣ ಇಲಾಖೆ ಈ ಕುರಿತು ಚಿಂತನೆ ನಡೆಸಿದ್ದು, ಪ್ರತಿ ವಿದ್ಯಾರ್ಥಿಗೆ 150 ಗ್ರಾಂ ತೂಕದ ರಾಗಿಮುದ್ದೆ ದೊರೆಯಲಿದೆ.

ಶಿಕ್ಷಣ ಇಲಾಖೆ ಸರ್ಕಾರಿ ಮತ್ತು ಅನುದಾನಿತ ಶಾಲೆಯ ಮಕ್ಕಳಿಗೆ ವಾರದಲ್ಲಿ ಒಂದು ದಿನ ರಾಗಿಮುದ್ದೆ ನೀಡುವ ಯೋಜನೆಯನ್ನು ಶೀಘ್ರದಲ್ಲೇ ಆರಂಭಿಸಲಿದೆ. ಮೊದಲ ಹಂತದಲ್ಲಿ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ರಾಗಿಮುದ್ದೆ ನೀಡಲಾಗುತ್ತದೆ. [ಬಿಸಿಯೂಟದ ಜೊತೆ ಮಕ್ಕಳಿಗೆ ತಣ್ಣಗಿನ ಮಜ್ಜಿಗೆ!]

Ragi Mudde

ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ ರಾಗಿಯನ್ನು ಹೆಚ್ಚು ಉಪಯೋಗಿಸುವ ಏಳು ಜಿಲ್ಲೆಗಳ ಮಕ್ಕಳಿಗೆ ಮುದ್ದೆಭಾಗ್ಯ ದೊರೆಯಲಿದೆ. ಮೊದಲು 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮುದ್ದೆ ನೀಡಲು ಚಿಂತನೆ ನಡೆಸಿದ್ದು, ನಂತರ 1 ರಿಂದ 8 ರವರೆಗಿನ ವಿದ್ಯಾರ್ಥಿಗಳಿಗೆ ಯೋಜನೆ ವಿಸ್ತರಣೆಯಾಗಲಿದೆ.

ವಾರದಲ್ಲಿ ಒಂದು ದಿನ ಪ್ರತಿ ವಿದ್ಯಾರ್ಥಿಗೆ 150 ಗ್ರಾಂ ತೂಕದ ರಾಗಿಮುದ್ದೆ ನೀಡಲು ಇಲಾಖೆ ಸಿದ್ಧತೆ ನಡೆಸಿದೆ. ರಾಗಿಯನ್ನು ಹೆಚ್ಚಾಗಿ ಉಪಯೋಗಿಸುವ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ಚಿತ್ರದುರ್ಗದಿಂದ ಇದು ಆರಂಭವಾಗಲಿದೆ. [ಬಿಸಿಯೂಟಕ್ಕೆ ಇನ್ಮುಂದೆ ಚಪಾತಿ, ಪೂರಿ]

ರಾಗಿ ಮುದ್ದೆ ಭಾಗ್ಯ ಯಾವ ಜಿಲ್ಲೆಗೆ : ಚಿತ್ರದುರ್ಗದಲ್ಲಿ ಆರಂಭವಾಗುವ ನಂತರದ ದಿನಗಳಲ್ಲಿ ಮೈಸೂರು, ಮಂಡ್ಯ, ಶಿವಮೊಗ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ವಿಸ್ತರಣೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+