ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಮ ಮಂದಿರ ಭೂಮಿ ಪೂಜೆಗೆ ಕರ್ನಾಟಕದ 8 ಗಣ್ಯರಿಗೆ ಆಹ್ವಾನ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಆಗಸ್ಟ್ 03: ಹಿಂದೂಗಳ ಪಾಲಿನ ಆರಾಧ್ಯದೈವ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಮಂದಿರ ನಿರ್ಮಾಣ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ಸಿಗುವ ಮುಹೂರ್ತ ನಿಗದಿಯಾಗಿದೆ.

Recommended Video

SpaceX and NASA completes space mission successfully | Oneindia Kannada

ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ಸೇರಿದಂತೆ ಕರ್ನಾಟಕದ 8 ಗಣ್ಯರನ್ನು ಆಹ್ವಾನಿಸಲಾಗಿದೆ.

ರಾಮಮಂದಿರ ಭೂಮಿ ಪೂಜೆ ಕರ್ನಾಟಕದ ಕೊಡುಗೆಯೇನು?ರಾಮಮಂದಿರ ಭೂಮಿ ಪೂಜೆ ಕರ್ನಾಟಕದ ಕೊಡುಗೆಯೇನು?

ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ ಶುರುವಾಗಿದ್ದು, ಭರದಿಂದ ಸಿದ್ದತೆಗಳು ನಡೆಯುತ್ತಿವೆ. ಆಯೋಧ್ಯೆಯ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದ ಗಣ್ಯರನ್ನು ಸಹ ಆಹ್ವಾನಿಸಲಾಗಿದೆ.

Ram Mandir Land Worship: Invites For 8 Dignitaries Of Karnataka State

ನಮ್ಮ ಕರ್ನಾಟಕದ ಎಂಟು ಗಣ್ಯರನ್ನು ವಿಶೇಷವಾಗಿ ಆಹ್ವಾನಿಸಲಾಗಿದ್ದು, ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿಗೆ ಆಹ್ವಾನ ನೀಡಲಾಗಿದೆ ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.

ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಆಹ್ವಾನಿಸಲಾದ ಎಂಟು ಮಂದಿ ವಿಶೇಷ ಆಹ್ವಾನಿತರ ಪಟ್ಟಿ ಇಲ್ಲಿದೆ. ಅದರಲ್ಲಿ ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮಿಜಿ ಕೂಡ ಒಬ್ಬರಾಗಿದ್ದಾರೆ.

ಆಶುಭ ಗಳಿಗೆಯಲ್ಲಿ ರಾಮ ಮಂದಿರ ಶಿಲಾನ್ಯಾಸ: ದಿಗ್ವಿಜಯ್ ಸಿಂಗ್ಆಶುಭ ಗಳಿಗೆಯಲ್ಲಿ ರಾಮ ಮಂದಿರ ಶಿಲಾನ್ಯಾಸ: ದಿಗ್ವಿಜಯ್ ಸಿಂಗ್

1. ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ (ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿ)

2. ಇಸ್ಕಾನ್ ದೇವಸ್ಥಾನದ ಮಧು ಪಂಡಿತ ದಾಸ್

3. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ

4. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ

5. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ

6. ಸುತ್ತೂರು ಮಠದ ಶ್ರೀಗಳು

7. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ

8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ

English summary
8 dignitaries of Karnataka, including the Udupi Pejawar Math Vishwa Prasanna Swamiji, have been invited to the Bhoomi Pooja for the construction of a magnificent Ram Mandir in Ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X