Get Updates
Get notified of breaking news, exclusive insights, and must-see stories!

ರೇಣುಕಾಸ್ವಾಮಿ ಕೊಲೆ ಪ್ರಕರಣ ಸಿಬಿಐಗೆ ವಹಿಸುವ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್

ಚಿತ್ರದುರ್ಗ, ಜೂನ್‌ 18: ಪವಿತ್ರ ಗೌಡ ಹಾಗೂ ನಟ ದರ್ಶನ್ ಮತ್ತು ಗ್ಯಾಂಗ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದಲ್ಲಿ ವಿಚಾರರಣೆ ನಡೆಯುತ್ತಿದೆ. ಮತ್ತೊಂದು ಕಡೆ ಕೊಲೆಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ಮಠಾಧೀಶರು ಸೇರಿದಂತೆ ರಾಜಕೀಯ ಗಣ್ಯರು, ಚಿತ್ರರಂಗದ ಗಣ್ಯರು ಭೇಟಿ ನೀಡುತ್ತಿದ್ದಾರೆ.

ಇಂದು ಗೃಹ ಸಚಿವ ಜಿ. ಪರಮೇಶ್ವರ್ ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿರುವ ಮೃತ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿದರು. ರೇಣುಕಾಸ್ವಾಮಿ ತಂದೆ, ತಾಯಿ ಹಾಗೂ ಪತ್ನಿಯ ಜೊತೆ ಮಾತನಾಡಿದ ಸಚಿವರು ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಸಾಂತ್ವನ ಹೇಳಿದರು.

Renukaswamy Murder Case Not Need To Handed Over To CBI Says Home Minister Parameshwar

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, ರೇಣುಕಾಸ್ವಾಮಿ ಕೊಲೆ ಪ್ರಕರಣ ಕುಟುಂಬದವರಿಗೆ ಅಲ್ಲದೇ ನಮಗೂ ಸಹ ನೋವು ತಂದಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ಸರ್ಕಾರ ಯಾವುದೇ ಮುಲಾಜಿಲ್ಲದೆ, ಯಾರ ಒತ್ತಡಕ್ಕೆ ಮಣಿಯದೆ ತನಿಖೆ ಮಾಡುತ್ತಿದೆ. ಈಗಾಗಲೇ 17 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಕುಟುಂಬದಲ್ಲಿ ಗಂಡನನ್ನು ಕಳೆದುಕೊಂಡ ಅವರ ಪತ್ನಿ ಮದುವೆಯಾಗಿ ಒಂದು ವರ್ಷ ಆಗಿದೆ. ಅವರು ನಮಗೆ ಮನವಿ ಮಾಡಿದ್ದಾರೆ. ಅವರ ಮನವಿಗೆ ನ್ಯಾಯ ಒದಗಿಸಬೇಕು. ಜೀವನ ಸಾಗಿಸಲು ಸರ್ಕಾರಿ ನೌಕರಿ ಕೊಡಬೇಕು ಎಂಬುದು ಅವರ ಆಗ್ರಹವಾಗಿದೆ.

ಇದರ ಬಗ್ಗೆ ಸಿಎಂ ಬಳಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಇದರಲ್ಲಿ ಯಾವುದು ರಾಜಕೀಯ ಮಾಡಬಾರದು. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡಿದ್ದಾರೆ. ಅದನ್ನು ಮಾಧ್ಯಮಗಳ ಮೂಲಕ ಕೇಳಿದ್ದೇನೆ. ಇದರಲ್ಲಿ ರಾಜಕೀಯ ಸಲ್ಲದು. ಎಲ್ಲದಕ್ಕೂ ರಾಜಕೀಯ ಬೆರೆಸುವುದು ಸರಿಯಲ್ಲ ಎಂದರು. ಕಾನೂನು ಇದೆ. ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎನ್ನುವ ಕುಟುಂಬಸ್ಥರ ಮನವಿ ಬಗ್ಗೆ ಮಾತನಾಡಿದ ಗೃಹ ಸಚಿವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಅಗತ್ಯವಿಲ್ಲ. ಈಗಾಗಲೇ ಘಟನೆಯಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಬಹುಬೇಗನೆ ಕ್ರಮ ಕೈಗೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ. ನಮ್ಮ ಪೊಲೀಸರು ಉತ್ತಮವಾಗಿ, ಯಾವುದೇ ಒತ್ತಡಕ್ಕೆ ಮಣಿಯದೆ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.

Renukaswamy Murder Case Not Need To Handed Over To CBI Says Home Minister Parameshwar

ರೇಣುಕಾಸ್ವಾಮಿ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ನೀಡಿದ ಸಚಿವ ಡಿ. ಸುಧಾಕರ್

ಚಿತ್ರದುರ್ಗ ನಗರದಲ್ಲಿರುವ ಮೃತ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಸಾಂತ್ವನ ಹೇಳಿ, ಎರಡು ಲಕ್ಷ ರೂಪಾಯಿ ಹಣದ ಚೆಕ್‌ಅನ್ನು ವೈಯಕ್ತಿಕವಾಗಿ ಧನಸಹಾಯ ವಿತರಣೆ ಮಾಡಿದರು.

ಈ ಕುರಿತು ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಸರ್ಕಾರದ ಪರವಾಗಿ ಮೃತ ರೇಣುಕಾ ಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ ಧೈರ್ಯ ಹೇಳಿದ್ದಾರೆ. ಅಲ್ಲದೇ ಎರಡು ಲಕ್ಷ ರೂಪಾಯಿ ಹಣದ ಚೆಕ್‌ಅನ್ನು ವೈಯಕ್ತಿಕವಾಗಿ ನೀಡಿದ್ದಾರೆ.

ಇನ್ನು ಮೃತ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಕೆಲಸ ಕೊಡುಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರ ಸಹಾನುಭೂತಿ ರೀತಿಯಲ್ಲಿ ತೀರ್ಮಾನ ಮಾಡಲಾಗುತ್ತದೆ. ಮೃತ ರೇಣುಕಾ ಸ್ವಾಮಿ ಕುಟುಂಬದ ಜೊತೆ ಸರ್ಕಾರ ಇರುತ್ತದೆ. ಮುಖ್ಯಮಂತ್ರಿ ಪರವಾಗಿ ನಾನು ಮೃತರ ಮನೆಗೆ ಭೇಟಿ ನೀಡಿದ್ದೇನೆ. ಸಮಯ ಬಂದಾಗ ಮುಖ್ಯಮಂತ್ರಿಗಳು ಸಹ ಅಮೃತ ರೇಣುಕಾ ಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+