ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀಮಂತರು ಬಿಪಿಎಲ್ ಕಾರ್ಡ್ ತ್ಯಜಿಸಲಿ, ಇಲ್ಲಾ ಕಾನೂನು ಕ್ರಮ ಎದುರಿಸಲಿ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 05: ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವೆ ಜೊಲ್ಲೆ ಅವರು, ಬಡತನ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ಇರುವುದು, ಅದನ್ನು ಅಕ್ರಮವಾಗಿ ಯಾರಾದರೂ ಶ್ರೀಮಂತರು ಹೊಂದಿದ್ದರೆ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದರು.

ಬಿಪಿಎಲ್, ಎಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ಈ ಸುದ್ದಿಬಿಪಿಎಲ್, ಎಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ಈ ಸುದ್ದಿ

ಪಡಿತರ ಚೀಟಿ ವಿತರಣೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರೆ, ಅವರನ್ನು ಅಮಾನತು ಮಾಡಲಾಗುವುದು ಎಂದರು. ಗರ್ಭಿಣಿ ಮಹಿಳೆಯರ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ತೆಗೆದುಕೊಳ್ಳಲಾಗುವುದೆಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

Rich People Leave The BPL Card, Otherwise Face Legal Action

ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ರದ್ದು ಕುರಿತು ಮಾತನಾಡಿದ ಅವರು, ಇದರ ಬಗ್ಗೆ ಮಾತನಾಡುವಷ್ಟು ದೊಡ್ಡವಳು ನಾನಲ್ಲ, ಪಕ್ಷದ ಹಿರಿಯ ನಾಯಕರು ಅಗತ್ಯ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಉತ್ತರಿಸಿದರು.

ಪೌರತ್ವ ತಿದ್ದಪಡಿ ಕಾಯ್ದೆ ಮತ್ತು ಎನ್ಆರ್ಸಿ ಬಗ್ಗೆ ವಿರೋಧ ಪಕ್ಷಗಳು ಅನಗತ್ಯ ಗೊಂದಲ ಮೂಡಿಸುತ್ತವೆ ಮತ್ತು ಜಾತಿ, ಧರ್ಮಗಳ ನಡುವೆ ಜಗಳ ಸೃಷ್ಟಿಸುತ್ತಿದ್ದಾರೆ ಎಂದರು.

ಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಕಾಂಗ್ರೆಸ್ ಪಕ್ಷ ಕೇವಲ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ದೇಶದ ಹಿತದೃಷ್ಟಿಯಿಂದ ಜಾರಿಗೆ ತಂದಿರುವ ಈ ಪೌರತ್ವ ಕಾಯ್ದೆಯನ್ನು ಎಲ್ಲರೂ ಒಪ್ಪಿಕೊಳ್ಳಬೇಕೆಂದು ಮನವಿ ಮಾಡಿದರು.

English summary
The rich people in the state also have a BPL card, let them return a BPL card. Otherwise, legal action would be initiated, Minister of Women and Child Welfare and Food, Shashikala Jolle said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X