Breaking: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ, ರದ್ದು ಮಾಡಿಲ್ಲ: ಸಿಎಂ ಬೊಮ್ಮಾಯಿ
ಚಿತ್ರದುರ್ಗ, ಜೂ.4: ಪಠ್ಯ ಪುಸ್ತಕ ಸಮಿತಿ ವಿಸರ್ಜನೆ ಆಗಿದೆ ಆದರೆ ರದ್ದು ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ದೇವರ ಕೊಟ್ಟ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, " ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ. ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆ ಎಂದು ತಿಳಿಸಿದರು.
ಇನ್ನು ಬಸವಣ್ಣನವರು ರಚಿಸಿದ ಹಲವಾರು ಅತ್ಯುತ್ತಮ ವಚನಗಳಿವೆ. ಬಸವಣ್ಣನವರ ಪಠ್ಯದಲ್ಲಿ ಒಂದು ಲೈನ್ ವ್ಯತ್ಯಾಸವಾಗಿದೆ. ಉಳಿದಂತೆ ಬರಗೂರು ಸಮಿತಿ ರಚಿಸಿದ್ದ ಪಠ್ಯದಲ್ಲಿ ಇದ್ದಂತೆ ಇದೆ ಎಂದರು. ಬಸವಣ್ಣನವರ ಪಠ್ಯದ ವ್ಯತ್ಯಾಸ ಸರಿಪಡಿಸಲಾಗುವುದು. ನಾನಾ ಮಠಗಳ ಸ್ವಾಮೀಜಿಗಳ ಜೊತೆಗೆ ಚರ್ಚಿಸಿ ಅವರಿಗೆ ಇರುವ ಊಹಾ ಪೋಹಗಳನ್ನು ಸರಿ ಪಡಿಸಿದ್ದೇವೆ. ಆದಷ್ಟು ಶೀಘ್ರದಲ್ಲಿ ಮಕ್ಕಳಿಗೆ ಪಠ್ಯ ಪುಸ್ತಕ ಒದಗಿಸುತ್ತೇವೆ.

Recommended Video
ಹೆಡಗೇವಾರ್ ಭಾಷಣದ ಪಠ್ಯ ಕೈ ಬಿಡುವುದಿಲ್ಲ, ಅದರಲ್ಲಿ ತಪ್ಪೇನಿದೆ ಎಂದು ಸಿಎಂ ಸಮರ್ಥಿಸಿಕೊಂಡರು. ಮಂದಿರ ಮಸೀದಿ ವಿವಾದ ವಿಚಾರದ ಪ್ರಶ್ನೆಗೆ ಉತ್ತರಿಸಲು ಸಿಎಂ ನಿರಾಕರಿಸಿದರು.












Click it and Unblock the Notifications