ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಾವಣಿ ಸಿಮೆಂಟ್ ಕುಸಿತ, ರೋಗಿಯ ತಲೆಗೆ ಗಾಯ.!
ಚಿತ್ರದುರ್ಗ, ಅಕ್ಟೋಬರ್, 24: ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಜನತೆ ತತ್ತರಿಸಿದ್ದಾರೆ. ಅಲ್ಲದೆ ಅಪಾರ ಬೆಳೆ, ಮನೆ ಹಾನಿಯಾಗಿದೆ. ಇದಲ್ಲದೆ, ಚಿತ್ರದುರ್ಗ ನಗರದ ಸಾರ್ವಜನಿಕ ಜಿಲ್ಲಾಸ್ಪತ್ರೆಯಲ್ಲಿ ಛಾವಣಿ ಸಿಮೆಂಟ್ ಕುಸಿದು ಬಿದ್ದಿದ್ದು, ಅದೃಷ್ಟಾವತ್ ಬಹುದೊಡ್ಡ ದುರಂತವೊಂದು ತಪ್ಪಿದೆ.
ಹೌದು..ಜಿಲ್ಲೆಯಲ್ಲಿ ಮೇಲ್ಭಾಗದ ಛಾವಣಿಯ ಸಿಮೆಂಟ್ ಕುಸಿದು ರೋಗಿ ಇದ್ದ ಬೆಡ್ ಮೇಲೆ ಬಿದ್ದಿದ್ದು, ರೋಗಿಯ ತಲೆಗೆ ಗಾಯವಾಗಿದೆ. ಗಾಯಗೊಂಡವರನ್ನು ಆಂಧ್ರಪ್ರದೇಶ ಮೂಲದ ಲಕ್ಷ್ಮಕ್ಕ ಎಂದು ಗುರುತಿಸಲಾಗಿದೆ. ಲಕ್ಷ್ಮಕ್ಕ ಅವರು ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಡ್ ಮೇಲೆ ಮಲಗಿದ್ದಾಗ ಛಾವಣಿಯ ಸಿಮೆಂಟ್ ಕೆಳಗೆ ಬಿದ್ದಿದೆ. ಅದೃಷ್ಟವಶಾತ್ ರೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಛಾವಣಿ ಸಿಮೆಂಟ್ ಬಿದ್ದಿದ್ದರಿಂದ ಆಸ್ಪತ್ರೆಯಲ್ಲಿ ಕ್ಷಣ ಕಾಲ ಆತಂಕ ಸೃಷ್ಟಿಯಾಗಿತ್ತು. ಜಿಲ್ಲಾಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೋತುಬಿದ್ದ ವಿದ್ಯುತ್ ಲೈನ್‌ಗೆ ಇಬ್ಬರು ಬಲಿ: ಜೋತುಬಿದ್ದ ವಿದ್ಯುತ್ ಲೇನ್‌ನಿಂದಾಗಿ ಜಮೀನಿಗೆ ತೆರಳುತ್ತಿದ್ದ ರೈತರು ಧಾರುಣವಾಗಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಚಾಮರಾಜನಗರ ತಾಲೂಕಿನ ಅಯ್ಯನಪುರ ಗ್ರಾಮದ ನಾಗೇಂದ್ರ(45) ಮಲ್ಲೇಶ (48) ಮೃತ ರೈತರು. ಬುಧವಾರ ರಾತ್ರಿ ತಮ್ಮ ಜಮೀನಿಗೆ ಅಯ್ಯನಪುರ ಗ್ರಾಮದ ಅಯ್ಯನಪುರ-ಇತ್ತಲಗುಡ್ಡೆ ಮಾರ್ಗದ ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುವಾಗ ಜೋತುಬಿದ್ದಿದ್ದ ವಿದ್ಯುತ್ ಲೇನ್ ಕುತ್ತಿಗೆಗೆ ಬಿಗಿದು ವಿದ್ಯುತ್ ಪ್ರವಹಿಸಿ ಇಬ್ಬರೂ ಸ್ಥಳದಲ್ಲೇ ಅಸುನೀಗಿದ್ದಾರೆ.
ಬೆಳಗ್ಗೆ ಆದರೂ ಮನೆಗೆ ರೈತರು ವಾಪಾಸ್ ಬರದಿದ್ದರಿಂದ ಪರಿಶೀಲಿಸಿದ ವೇಳೆ ವಿದ್ಯುತ್ ತಂತಿಗೆ ಸಿಲುಕಿ ಅಸುನೀಗಿರುವುದು ಬೆಳಕಿಗೆ ಬಂದಿದೆ. ಇನ್ನು ಇದೀಗ ಗ್ರಾಮಸ್ಥರು ಹಾಗೂ ಸ್ಥಳೀಯ ರೈತರು ಸೆಸ್ಕ್ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
120 ಮನೆಗಳು ಭಾಗಶಃ ಹಾನಿ: ಚಿತ್ರದುರ್ಗ ಜಿಲ್ಲೆಯಲ್ಲಿ ಚಿತ್ತೆ ಮಳೆಯ ಅಬ್ಬರಕ್ಕೆ ಜನರು ತತ್ತರಿಸಿದ್ದಾರೆ. ಚಳ್ಳಕೆರೆ, ಮೊಳಕಾಲ್ಮೂರು ಭಾಗದಲ್ಲಿ ಎಗ್ಗಿಲ್ಲದೆ ಮಳೆಯಾಗಿದೆ. ಅನೇಕ ಚೆಕ್ ಡ್ಯಾಂ, ಹಳ್ಳ ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಸೋಮವಾರ ರಾತ್ರಿ ಸುರಿದ ಮಳೆ ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ ಎಂಬುದು ಈ ಕೆಳಗಿದೆ.
ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 25.6 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 36.3 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 22.7 ಹಿರಿಯೂರು ತಾಲ್ಲೂಕು 19.4 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 11.5 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 33.2 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 21.6 ಮಿ.ಮೀ ಮಳೆಯಾಗಿದೆ.
* ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 27.7 ಮಿ.ಮೀ, ನಾಯಕನಹಟ್ಟಿ 60.2 ಮಿ.ಮೀ, ಪರಶುರಾಂಪುರ 29.7 ಮಿ.ಮೀ, ತಳಕು 32.7 ಮಿ.ಮೀ ಮಳೆಯಾಗಿದೆ.
* ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 20.5 ಮಿ.ಮೀ, ಭರಮಸಾಗರ 19.3 ಮಿ.ಮೀ, ಹಿರೇಗುಂಟನೂರು 28.2 ಮಿ.ಮೀ, ತುರುವನೂರು 26.1 ಮಿ.ಮೀ ಮಳೆಯಾಗಿದೆ.
* ಹಿರಿಯೂರು ತಾಲ್ಲೂಕಿನ ಹಿರಿಯೂರು 30.4 ಮಿ.ಮೀ, ಐಮಂಗಲ 14.8 ಮಿ.ಮೀ, ಧರ್ಮಪುರ 17 ಮಿ.ಮೀ, ಜವನಗೊಂಡನಹಳ್ಳಿ 19.7 ಮಿ.ಮೀ ಮಳೆಯಾಗಿದೆ.
* ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 7.7 ಮಿ.ಮೀ, ಬಿ.ದುರ್ಗ 5.6 ಮಿ.ಮೀ, ರಾಮಗಿರಿ 6.8 ಮಿ.ಮೀ, ತಾಳ್ಯ 21.8 ಮಿ.ಮೀ ಮಳೆಯಾಗಿದೆ.
* ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 12.8 ಮಿ.ಮೀ, ಮಾಡದಕೆರೆ 40.3 ಮಿ.ಮೀ, ಮತ್ತೋಡು 44.7 ಮಿ.ಮೀ, ಶ್ರೀರಾಂಪುರ 40.5 ಮಿ.ಮೀ ಮಳೆಯಾಗಿದೆ.
* ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 16.8 ಮಿ.ಮೀ ಹಾಗೂ ದೇವಸಮುದ್ರದಲ್ಲಿ 27 ಮಿ.ಮೀ ಮಳೆಯಾಗಿದೆ.
* 120 ಮನೆಗಳು ಭಾಗಶಃ ಹಾನಿ: ಸೋಮವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 120 ಮನೆಗಳು ಭಾಗಶಃ ಹಾನಿಯಾಗಿದ್ದು, 51 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ, 7 ಸಣ್ಣ ಜಾನುವಾರು ಹಾನಿ ಹಾಗೂ 10 ಹೆಕ್ಟೇರ್ ಕೃಷಿ ಬೆಳೆ ಹಾಗೂ 8 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 35 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ ತಾಲ್ಲೂಕಿನಲ್ಲಿ 40 ಮನೆಗಳು ಹಾಗೂ 7 ಸಣ್ಣ ಜಾನುವಾರು ಹಾನಿ, 50 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ, 10 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 8 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ.
ಹೊಳಲ್ಕೆರೆ 13 ಮನೆಗಳು, ಹೊಸದುರ್ಗ 9 ಮನೆಗಳು ಭಾಗಶಃ ಹಾನಿ ಹಾಗೂ 1 ಮನೆಗೆ ನೀರು ನುಗ್ಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 11 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 12 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಾಹಿತಿ ಲಭ್ಯವಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications