ಜಾತಿ ಕಾರಣಕ್ಕೆ ಕಚೇರಿ ಪ್ರವೇಶ ನಿರಾಕರಣೆ: ಗೂಳಿಹಟ್ಟಿ ಆರೋಪಕ್ಕೆ ಆರ್‌ಎಸ್‌ಎಸ್ ಸ್ಪಷ್ಟನೆ
ಚಿತ್ರದುರ್ಗ, ಡಿಸೆಂಬರ್ 06: ನಾನು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂದು ನಾಗಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಗಡೇವಾರ್ ವಸ್ತು ಸಂಗ್ರಹಾಲಯದ ಒಳಗಡೆ ಬಿಡದೆ ಪ್ರವೇಶ ನಿರಾಕರಿಸಲಾಗಿದೆ ಎನ್ನುವ ಹೊಸದುರ್ಗ ಮಾಜಿ ಸಚಿವ ಗೂಳಿಹಟ್ಟಿ.ಡಿ.ಶೇಖರ್ ಆರೋಪಕ್ಕೆ ಆರ್‌ಎಸ್‌ಎಸ್ ಸ್ಪಷ್ಟನೆ ನೀಡಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷತ್ರಿಯ ಕಾರ್ಯನಿರ್ವಾಹಕ ನಾ.ತಿಪ್ಪೇಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. 'ಹೊಸದುರ್ಗ ಮಾಜಿ ಸಚಿವ ಗೂಳಿಹಟ್ಟಿ ಡಿ ಶೇಖರ್ ಅವರ ಆಡಿಯೋ ಹೇಳಿಕೆಯಲ್ಲಿ ತಮಗೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಕಾರಣಕ್ಕೆ ಮಹಾರಾಷ್ಟ್ರದ ನಾಗಪುರದ ಟ್ಯಾಕ್ಟರ್ ಹೆಗಡೆವಾರ್ ಸ್ಮಾರಕ ಕಟ್ಟಡದಲ್ಲಿ ಪ್ರವೇಶ ನಿರಾಕರಿಸಲಾಯಿತು' ಎಂದು ಆರೋಪಿಸಿದ್ದಾರೆ.

ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯ ಇಲ್ಲ ಇದೊಂದು ನಿರಾಧಾರ ಹಾಗೂ ಹುರುಳಿಲ್ಲದ ಆರೋಪ ಎಂದಿದ್ದಾರೆ.
ಆರ್‌ಎಸ್‌ಎಸ್‌ನ ಯಾವುದೇ ಕಚೇರಿಯಲ್ಲಾಗಲಿ ಅಥವಾ ಈ ರೀತಿ ಸ್ಮಾರಕ ಕಟ್ಟಡಗಳಲ್ಲಾಗಲಿ ಎಲ್ಲರಿಗೂ ಮುಕ್ತ ಅವಕಾಶ ಇದೆ. ಎಲ್ಲ ಜಾತಿ ವರ್ಗದ ಸಾವಿರಾರು ಜನ ನಿತ್ಯ ಬಂದು ಹೋಗುತ್ತಲೇ ಇದ್ದಾರೆ. ಯಾರಿಗೂ ಪ್ರವೇಶ ನಿರಾಕರಣೆ ಪ್ರಶ್ನೆ ಬಂದಿಲ್ಲ. ಇಷ್ಟಾಗಿ ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ತಿಂಗಳು ಮೊದಲು ಈ ಘಟನೆ ನಡೆದಿತ್ತು ಎನ್ನುವ ಗೂಳಿಹಟ್ಟಿ ಶೇಖರ್ ಅವರು ಅನಂತರ ಅನೇಕ ಸಂಘದ ಪ್ರಮುಖರನ್ನು ಭೇಟಿಯಾದರು ಎಲ್ಲಿಯೂ ತಮಗಾದ ಅವಮಾನದ ಬಗ್ಗೆ ಹೇಳಿರಲಿಲ್ಲ.
ಈಗ 10 ತಿಂಗಳ ನಂತರ ಈ ರೀತಿ ಹೇಳಿಕೆ ನೀಡಿರುವುದು ಆಶ್ಚರ್ಯಕರವಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಎಲ್ಲರನ್ನು ಸದಾ ತೆರೆದ ಮನಸ್ಸಿನಿಂದ ಸ್ವಾಗತಿಸುತ್ತದೆ ಎಂದು ನಾ. ತಿಪ್ಪೇಸ್ವಾಮಿ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದಕ್ಕೆ ಆರ್‌ಎಸ್‌ಎಸ್ ವಸ್ತುಸಂಗ್ರಹಾಲಯ ಪ್ರವೇಶ ನಿರಾಕರಣೆ- ಮಾಜಿ ಸಚಿವ ಗೂಳಿಹಟ್ಟಿ ಡಿ ಶೇಖರ್
ನಾನು ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬುದು ಖಚಿತವಾಗಿದ್ದರಿಂದ ನಾಗಪುರದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹೆಗಡೇವಾರ್ ವಸ್ತು ಸಂಗ್ರಹಾಲಯದ ಒಳಗಡೆ ಬಿಡದೆ ಪ್ರವೇಶ ನಿರಾಕರಿಸಲಾಗಿದೆ. ಇದಕ್ಕೆ ಕಾರಣ ಏನು ಎಂದು ಸ್ಪಷ್ಟಪಡಿಸುವಂತೆ ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಅವರಿಗೆ ಮಾಜಿ ಸಚಿವ ಗೂಳಿಹಟ್ಟಿ ಡಿ ಶೇಖರ್ ಪ್ರಶ್ನೆ ಮಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.
ಈ ಕುರಿತಂತೆ ಮಾಜಿ ಸಚಿವ ಗೋಳಿಹಟ್ಟಿ ಶೇಖರ್ ಅವರು ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಅವರಿಗೆ ದೂರವಾಣಿ ಕರೆ ಮಾಡಿ ಕಾರಣ ಕೇಳಿದ್ದಾರೆ. ಸಂತೋಷ್ ಜಿ ನನ್ನ ಸ್ನೇಹಿತರು ನಾಗಪುರಕ್ಕೆ ಕರೆದುಕೊಂಡು ಹೋಗಿದ್ದರು. ಆ ಸಂದರ್ಭದಲ್ಲಿ ನಾಗಪುರದ ಆರ್‌ಎಸ್‌ಎಸ್ ಕಚೇರಿ ಭೇಟಿಯ ಸಂದರ್ಭದಲ್ಲಿ ಪ್ರವೇಶ ನಿರಾಕರಿಸಲಾಗಿತ್ತು.
ಎನ್ನುವ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಮಂಜು ಎಂಬ ಸ್ನೇಹಿತನ ಜೊತೆಗೆ ನಾಗಪುರಕ್ಕೆ ಭೇಟಿ ನೀಡಿದ್ದೆ. ಆಗ ನಾನು ಎಸ್‌ಸಿ ಜನಾಂಗ ಎಂದು ನನ್ನನ್ನು ಒಳಗಡೆ ಬಿಡಲು ನಿರಾಕರಿಸಿದ್ದಾರೆ ಎನ್ನುವುದನ್ನು ಆಡಿಯೋದಲ್ಲಿ ಕೇಳಬಹುದಾಗಿದೆ. ಈ ಆಡಿಯೋ ಇದೀಗ ವೈರಲ್ ಆಗಿದೆ.












Click it and Unblock the Notifications