ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗದಲ್ಲಿ ವಿಷಾಹಾರ ಸೇವಿಸಿ ನವಿಲುಗಳು ಸಾವು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 9: ಆಹಾರ ಅರಸಿಕೊಂಡು ಬಂದಿದ್ದ ನವಿಲುಗಳು ವಿಷಾಹಾರ ಸೇವಿಸಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಜೋಗಿ ಮಟ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ. ಏಳು ಹೆಣ್ಣು ನವಿಲುಗಳು ಇಂದು ಸಾವನ್ನಪ್ಪಿವೆ.

Recommended Video

Susheel Gowda , ದುರಂತದ ಹಿಂದಿನ ಕಾರಣವೇನು | Filmibeat Kannada

ಪ್ರತಿನಿತ್ಯ ನವಿಲುಗಳು ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿ ಆಹಾರವನ್ನು ಹುಡುಕುತ್ತಾ ಬರುತ್ತವೆ. ಇಂದು ವಿಷಾಹಾರ ಸೇವಿಸಿ ಸಾವಿಗೀಡಾಗಿವೆ. ನವಿಲುಗಳಿಗೆ ವಿಷಾಹಾರ ಹಾಕಿರುವ ಶಂಕೆ ವ್ಯಕ್ತಗೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ವಿಷಯ ತಿಳಿದ ವಲಯಾರಣ್ಯಾಧಿಕಾರಿ ಸಂದೀಪ್ ನಾಯಕ್ ಸ್ಥಳಕ್ಕೆ ಸಿಬ್ಬಂದಿ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಾಮರಾಜನಗರ; ವಿಷಾಹಾರ ಸೇವಿಸಿ ಹತ್ತಕ್ಕೂ ಹೆಚ್ಚು ಜಾನುವಾರುಗಳು ಸಾವುಚಾಮರಾಜನಗರ; ವಿಷಾಹಾರ ಸೇವಿಸಿ ಹತ್ತಕ್ಕೂ ಹೆಚ್ಚು ಜಾನುವಾರುಗಳು ಸಾವು

ನವಿಲುಗಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿಕೊಟ್ಟಿದ್ದು, ವಿಷಾಹಾರ ಸೇವಿಸಿ ಮೃತಪಟ್ಟಿರುವುದು ದೃಢಪಟ್ಟಿದೆ. ಮತ್ತೊಂದೆಡೆ, ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ರೈತರು ಜಮೀನಿನಲ್ಲಿ ಬಿತ್ತನೆ ಮಾಡಿದ್ದಾರೆ. ರಾಸಾಯನಿಕ ಸಿಂಪಡಣೆ ಮಾಡಿದ ಕಾಳುಗಳನ್ನು ತಿಂದು ಈ ನವಿಲುಗಳು ಸಾವನ್ನಪ್ಪಿರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ.

 Seven Peacocks Dies By Eating Poisonous Food In Chitradurga

ಒಂದು ವೇಳೆ ಯಾರಾದರೂ ಉದ್ದೇಶಪೂರ್ವಕವಾಗಿ ಹೀಗೆ ಮಾಡಿರುವುದು ತಿಳಿದುಬಂದರೆ ಅಂಥವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವಲಯಾರಣ್ಯಾಧಿಕಾರಿ ತಿಳಿಸಿದ್ದಾರೆ.

English summary
Peacocks came in search of food dies by eating poisonous food in jogi matti forest area of ​​Chitradurga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X