ಚಿತ್ರದುರ್ಗದಲ್ಲಿ ಸಿಡಿಲು ಬಡಿದು ಏಳು ಜನ ಕಾರ್ಮಿಕರಿಗೆ ಗಾಯ
ಚಿತ್ರದುರ್ಗ, ಏಪ್ರಿಲ್ 22: ತೋಟದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಸಿಡಿಲು ಬಡಿದು ಏಳು ಜನ ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಸಿಹಿನೀರು ಕಟ್ಟೆ ಗ್ರಾಮದಲ್ಲಿ ನಡೆದಿದೆ.
ಚಂದ್ರಾಬಾಯಿ(45), ರತ್ನಾಬಾಯಿ(45) ಈ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಮಹಿಳೆಯರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಣ್ಣಪುಟ್ಟ ಗಾಯಗೊಂಡಿರುವ ಉಳಿದ ಐದು ಮಂದಿ ಗಾಯಾಳುಗಳನ್ನು ಹೊಳಲ್ಕೆರೆ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಾಯಂಕಾಲ ಮಳೆ ಬರುವ ಸಂದರ್ಭದಲ್ಲಿ ಅಡಿಕೆ ತೋಟದಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.












Click it and Unblock the Notifications