Shakti Yojana: ಹಿರಿಯೂರು ಬಳಿ ಲಾರಿಗೆ KSRTC ಬಸ್ ಡಿಕ್ಕಿ, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಚಿತ್ರದುರ್ಗ, ಜೂನ್, 12: ಭಾನುವಾರ (ಜೂನ್ 11) ರಾಜ್ಯಾದ್ಯಂತ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ. ಆದರೆ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿರುವ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಭಾನುವಾರ ಚಿತ್ರದುರ್ಗ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಮಹಿಳೆಯ ಉಚಿತ ಪ್ರಯಾಣದ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಜಿಲ್ಲಾ ಸಚಿವ ಡಿ.ಸುಧಾಕರ್ ಅವರು ಚಾಲನೆ ನೀಡಿದ್ದರು. ಕೆಎಸ್ಆರ್‌ಟಿಸಿ ಬಸ್‌ಗೆ ಸಿಂಗಾರಗೊಳಿಸಿ ಚಿತ್ರದುರ್ಗದಿಂದ ಹಿರಿಯೂರು ಮಾರ್ಗವಾಗಿ ಬೆಂಗಳೂರಿಗೆ ತೆರಳುವ ಬಸ್‌ಗೆ ಚಾಲನೆ ನೀಡಲಾಗಿದೆ. ಚಾಲನೆ ನೀಡುತ್ತಿದ್ದಂತೆಯೇ ಚಿತ್ರದುರ್ಗದಿಂದ ತೆರಳುವಾಗ ಜವಗೊಂಡನಹಳ್ಳಿ ಬಳಿ ಬಸ್ ಅಪಘಾತಕೀಡಾಗಿದೆ.

ಮುಂದೆ ಚಲಿಸುತ್ತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆಯರ ಉಚಿತ ಬಸ್ ಪ್ರಯಾಣಿಕೆ ಚಾಲನೆ ನೀಡಿದ ಕೆಲವೇ ಗಂಟೆಗಳಲ್ಲಿ ಈ ಅವಘಡ ಸಂಭವಿಸಿದ್ದು, ಅಪಘಾತಕ್ಕೀಡಾಗಿರುವ ಬಸ್ ಮುಂಭಾಗದಲ್ಲಿ ಡ್ಯಾಮೇಜ್ ಆಗಿದೆ ಎಂದು ತಿಳಿದುಬಂದಿದೆ. ಇನ್ನು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.












Click it and Unblock the Notifications