ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯೂರು ನಗರಸಭೆಯ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ: ಬಿಜೆಪಿಗೆ ಅಭ್ಯರ್ಥಿಯೇ ಇಲ್ಲ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ನವೆಂಬರ್ 4: ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 8ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ಶಂಶುನ್ಸಿಸಾ ಅಧ್ಯಕ್ಷರಾಗಿ ಹಾಗೂ 18 ನೇ ವಾರ್ಡ್ ಸದಸ್ಯ ಬಿ.ಎನ್ ಪ್ರಕಾಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿರಿಯೂರು ನಗರಸಭೆಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಅಧಿಕಾರ ಹಿಡಿದಿದ್ದಾರೆ. ಹಿರಿಯೂರು ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರದ ಶಾಸಕರಿದ್ದು, ಬಿಜೆಪಿಗೆ ಸ್ಪರ್ಧಿಸಲು ಅಭ್ಯರ್ಥಿಯೇ ಇಲ್ಲದಂತಾಗಿರುವುದು, ತೀವ್ರ ಮುಖಭಂಗವಾಗಿದೆ.

ಚಳ್ಳಕೆರೆ ನಗರಸಭೆ ಚುನಾವಣೆ; ಅಧಿಕಾರ ಕಾಂಗ್ರೆಸ್ ತೆಕ್ಕೆಗೆಚಳ್ಳಕೆರೆ ನಗರಸಭೆ ಚುನಾವಣೆ; ಅಧಿಕಾರ ಕಾಂಗ್ರೆಸ್ ತೆಕ್ಕೆಗೆ

ಹಿರಿಯೂರು ನಗರಸಭೆಯಲ್ಲಿ ಒಟ್ಟು 31 ವಾರ್ಡ್ ಗಳಿದ್ದು, 13 ರಲ್ಲಿ ಕಾಂಗ್ರೆಸ್, 9 ರಲ್ಲಿ ಪಕ್ಷೇತರ, 06 ರಲ್ಲಿ ಬಿಜೆಪಿ ಹಾಗೂ 03 ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಜಯ ಗಳಿಸಿದ್ದರು. 31 ಸದಸ್ಯರಲ್ಲಿ ಓರ್ವ ಜೆಡಿಎಸ್ ಹಾಗೂ ಓರ್ವ ಕಾಂಗ್ರೆಸ್ ಸದಸ್ಯ ಮೃತಪಟ್ಟಿದ್ದಾರೆ. ಅಧ್ಯಕ್ಷ ಸ್ಥಾನ ಬಿಸಿಎ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಪುರುಷರಿಗೆ ಮೀಸಲಾಗಿತ್ತು.

 Shamshunnisa Elected As The New President Of Hiriyuru Municipality

ಬುಧವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ 8ನೇ ವಾರ್ಡ್ ನಿಂದ ಗೆದ್ದಿರುವ ಕಾಂಗ್ರೆಸ್ ಬೆಂಬಲಿತ ಶಂಶುನ್ನಿಸಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ 18ನೇ ವಾರ್ಡ್ ನ ಬಿ.ಎನ್ ಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾವುದೇ ನಾಮಪತ್ರಗಳು ಸಲ್ಲಿಕೆ ಆಗದಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಪ್ರಸನ್ನ ಅವರು ಘೋಷಿಸಿದರು.

 Shamshunnisa Elected As The New President Of Hiriyuru Municipality

Recommended Video

Policeರಿಗೆ Justice ಸಿಗಲ್ಲ !! ಇನ್ನು ನಿಮ್ಗೆ!! | Oneindia Kannada

ಸಭೆಯಲ್ಲಿ ಕಾಂಗ್ರೆಸ್ ಪಕ್ಷದ 13 ಸದಸ್ಯರು, ಜೆಡಿಎಸ್ ನಿಂದ ಗೆದ್ದು ಕಾಂಗ್ರೆಸ್ ಸೇರ್ಪಡೆ ಆದ ಇಬ್ಬರು ಸದಸ್ಯರು, ಬಿಜೆಪಿ ಬೆಂಬಲಿತ ಪಕ್ಷೇತರರಾಗಿ ಗೆದ್ದು ಕಾಂಗ್ರೆಸ್ ಸೇರ್ಪಡೆ ಆದ ಓರ್ವ ಸದಸ್ಯೆ ಹಾಗೂ ಪಕ್ಷೇತರ 8 ಸದಸ್ಯರು ಸೇರಿ 23 ಸದಸ್ಯರು ಸಭೆಯಲ್ಲಿ ಹಾಜರಿದ್ದರು. ಗೆಲುವು ಸಾಧಿಸುತಿದ್ದಂತೆ ಪಕ್ಷದ ನಾಯಕರು ಹಾಗೂ ಮುಖಂಡರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

English summary
Elections were held for the position of President and Vice-President of Hiriyuru Municipality in Chitradurga District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X