ಈ ಜಿಲ್ಲೆಗೆ ಇಂದಿನಿಂದ ಜೂನ್‌ 10ರವರಗೆ ಶಾಂತಿಸಾಗರದ ನೀರು ಪೂರೈಕೆ ಸ್ಥಗಿತ: ಕಾರಣ ಏನೆಂದು ತಿಳಿಯಿರಿ

ಚಿತ್ರದುರ್ಗ, ಜೂನ್‌, 07: ದಾವಣಗೆರೆ ಜಿಲ್ಲೆಯ ಸಮೀಪದಲ್ಲಿರುವ ಶಾಂತಿಸಾಗರದ ಜಾಕ್‍ವೆಲ್ ಘಟಕದಲ್ಲಿ ಹೆಚ್.ಟಿ.ಯಾರ್ಡ್ ದುರಸ್ಥಿ ಹಾಗೂ ಮುಖ್ಯ ಕೊಳವೆ ಮಾರ್ಗ ಮಧ್ಯದಲ್ಲಿ ಪೈಪ್‍ಲೈನ್ ದುರಸ್ಥಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದ ಜನರಿಗೆ ನಾಲ್ಕು ದಿನಗಳ ಕಾಲ ಕುಡಿಯುವ ನೀರಿನ ಅಭಾವ ಉಂಟಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಿತ್ರದುರ್ಗ ನಗರಕ್ಕೆ ಹೆಚ್ಚಾಗಿ ಕುಡಿಯುವ ನೀರು ಸರಬರಾಜು ಆಗುವುದೇ ಶಾಂತಿಸಾಗರ ಕೆರೆಯಿಂದ. ಆದರೆ ಪೈಪ್‍ಲೈನ್ ದುರಸ್ಥಿ ಕಾರ್ಯ ಹಿನ್ನೆಲೆ ಈ ಕೆರೆಯ ನೀರಿನ ಸರಬರಾಜು ಇಂದಿನಿಂದ ನಾಲ್ಕು ದಿನಗಳ ಕಾಲ ತಾತ್ಕಲಿವಾಗಿ ಅಂದರ ಜೂನ್‌ 10ರವರೆಗೆ ಸ್ಥಗಿತಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

ShantiSagara lakes water supply stop to Chitradurga district from today till June 10

ಆದ್ದರಿಂದ ಸಾರ್ವವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಬೇಕು. ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಮನವಿ ಮಾಡಿದ್ದಾರೆ.

ಕೆರೆ ನೀರನ್ನೇ ಖಾಲಿ ಮಾಡಿಸಿದರು

ಹಾಗೆಯೆ ಇದೀಗ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಇದರ ಪರಿಣಾಮ ಕುಡಿಯುವ ನೀರಿನ ಅಭಾವ ಎದುರಾಗಿದೆ. ಇದರಿಂದ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಎಲ್ಲಿ ನೋಡಿದರೂ ನೀರಿಗಾಗಿ ಹಾಹಾಕಾರ. ಹಲವಾರು ಕಡೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಹುಬ್ಬಳ್ಳಿ ತಾಲೂಕಿನ ಈ ಊರಿನಲ್ಲಿ ಮಾತ್ರ ಜನರು ಕೆರೆ ನೀರು ಖಾಲಿ ಮಾಡಿಸುತ್ತಿದ್ದಾರೆ. ಜನರು ಈ ನಿರ್ಧಾರ ತೆಗೆದುಕೊಂಡಿದ್ದು ಯಾಕೆ ಎನ್ನುವ ವಿವರವನ್ನು ಇಲ್ಲಿ ಗಮನಿಸಿ.

ಇತ್ತೀಚೆಗಷ್ಟೇ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಕೆರೆಯಲ್ಲಿ ಬಿದ್ದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ. ಆದ್ದರಿಂದ ಇಲ್ಲಿನ ಜನರು ಅಧಿಕಾರಿಗಳು ಬೇಡ ಬೇಡ ಅಂದರೂ ಕೆರೆಯಲ್ಲಿ ನೀರಿರುವುದು ಬೇಡವೇ ಬೇಡ ಎನ್ನುತ್ತಿದ್ದರು. ಹೀಗೆ ಜನರ ಒತ್ತಡಕ್ಕೆ ಮಣಿದ ಗ್ರಾಮ ಪಂಚಾಯತಿ ಅಧಿಕಾರಿಗಳು ಕೆರೆ ನೀರನ್ನು ಯಂತ್ರಗಳ ಮೂಲಕ ಹೊರ ಹಾಕಿದ್ದರು. 500ಕ್ಕೂ ಹೆಚ್ಚು ಮನೆಗಳಿರುವ 3,500ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಉಮಚಗಿಯಲ್ಲಿ ವ್ಯಕ್ತಿಯೋರ್ವನ ಆತ್ಮಹತ್ಯೆಯಿಂದ ಇಂತಹದೊಂದು ನಿರ್ಧಾರಕ್ಕೆ ಜನರು ಮುಂದಾಗಿದ್ದರು.

ಇನ್ನು ಮಲ್ಲಿಗವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಉಮಚಗಿ ಗ್ರಾಮಕ್ಕೆ ಹೊಂದಿಕೊಂಡಿರುವ ಕೆರೆಯಲ್ಲಿ ಸಾಲ ಬಾಧೆ ತಾಳದೆ ಶಂಕರಪ್ಪ ಹುರಳಿ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದ. ಆತ್ಮಹತ್ಯೆ ಮಾಡಿಕೊಂಡ ನಾಲ್ಕು ದಿನಗಳ ನಂತರ ಕೆರೆಯಲ್ಲಿ ಶವ ತೇಲಿತ್ತು. ಕೊಳೆತ ಸ್ಥಿತಿಯಲ್ಲಿ ಸ್ಥಿತಿಯಲ್ಲಿ ಶವ ಸಿಕ್ಕಿದ್ದರಿಂದ ನೀರು ಕಲುಷಿತಗೊಂಡಿದೆ ಎಂದು ಜನರು ಹೇಳಿದ್ದರು. ಆಗ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ನೀರು ಕಲುಷಿತಗೊಂಡಿಲ್ಲ ಅಂದರೂ ಕೇಳದ ಜನ ಕೆರೆ ನೀರನ್ನು ಖಾಲಿ ಮಾಡಿಸುವಂತೆ ಪಟ್ಟುಹಿಡಿದಿದ್ದರು.

ಒಟ್ಟಿನಲ್ಲಿ ಗ್ರಾಮಸ್ಥರ ಪಟ್ಟಿಗೆ ಮಣಿದ ಗ್ರಾಮ ಪಂಚಾಯಿತಿ ಯಂತ್ರಗಳ ಮೂಲಕ ಹಗಲು- ರಾತ್ರಿ ನೀರು ಹೊರ ಹಾಕುವ ಕೆಲಸ ಮಾಡುತ್ತಿದ್ದಾರೆ. ಐದಾರು ದಿನಗಳ ನಂತರ ಕೆರೆ ಸಂಪೂರ್ಣ ಖಾಲಿಯಾಗುವ ನಿರೀಕ್ಷೆ ಇದೆ. ಸಾವನ್ನಪ್ಪಿದ ಅನಿಷ್ಟದಿಂದಾಗಿ ಕೆರೆ ಕಲುಷಿತಗೊಂಡಿದೆ. ಬೇರೆ ಊರಿಗೆ ಹೋಗಿ ನೀರು ತಂದರೂ ಪರವಾಗಿಲ್ಲ. ನೀರು ಖಾಲಿ ಮಾಡಿಸಲೇಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿರುವುದು ವಿಪರ್ಯಾಸಕರ ಸಂಗತಿಯಾಗಿದೆ.

ಕುಡಿಯುವ ನೀರಿಗಾಗಿ ಪರದಾಟ

ಇನ್ನು ಕುಡಿಯುವ ನೀರಿಗಾಗಿ ಪರದಾಟ ಮತ್ತೊಂದೆಡೆ ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಕುಡಿಯುವ ನೀರಿಗಾಗಿ ದಿನವೂ ಜನರು ಸರ್ಕಸ್ ಮಾಡುತ್ತಿದ್ದಾರೆ. ಅದೆಷ್ಟೋ ಮನವಿ ಮಾಡಿದರೂ ಕುಡಿಯುವ ನೀರನ್ನು ಪಡೆಯಲು ಜನರಿಗೆ ಸಾಧ್ಯವಾಗುತ್ತಿಲ್ಲ. ಜಲಮಂಡಳಿಯ ಜವಾಬ್ದಾರಿಯನ್ನು ಖಾಸಗೀಕರಣದ ಮೂಲಕ ಎಲ್ ಆ್ಯಂಡ್ ಟಿ ಕಂಪನಿಗೆ ನೀಡಿದೆ. ಆದರೆ ಜನರ ಭವಣೆ ಮಾತ್ರ ಕಡಿಮೆ ಆಗಿಲ್ಲ. ಆದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ ಮಾತನ್ನು ಮಾತ್ರ ಪಾಲಿಕೆ ಇನ್ನೂ ಕೈ ಬಿಟ್ಟಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+