ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಆಪರೇಷನ್ ಹಸ್ತ' ಮಾಡುವ ಅಗತ್ಯವಿಲ್ಲ ಅಂದ್ರು ಸಿದ್ದರಾಮಯ್ಯ!

|
Google Oneindia Kannada News

ಚಿತ್ರದುರ್ಗ, ಫೆ.3 : 'ಆಪರೇಷನ್ ಹಸ್ತ ಮಾಡುವ ಅನಿವಾರ್ಯತೆ ನಮಗಿಲ್ಲ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಚಿವರನ್ನು ಶಾಸಕರು ಭೇಟಿಯಾಗಿದ್ದಾರೆ' ಇದು ಸಚಿವ ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್ ಶಾಸಕರ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ನೀಡಿರುವ ಸ್ಪಷ್ಟನೆ.

ಚಿತ್ರದುರ್ಗದಲ್ಲಿ ಸೋಮವಾರ ರಾತ್ರಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಜೆಡಿಎಸ್ ಶಾಸಕರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ, ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆಸಲು ಸಚಿವರನ್ನು ಭೇಟಿಯಾಗಿದ್ದಾರೆ ಎಂದು ಹೇಳಿದರು.[ಡಿಕೆಶಿ ಜತೆ ಜೆಡಿಎಸ್ ನಾಯಕರ ರಹಸ್ಯ ಚರ್ಚೆ]

Siddaramaiah

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆಯುವ 'ಆಪರೇಷನ್ ಹಸ್ತ' ನಡೆಸುವ ಅನಿವಾರ್ಯತೆ ಇಲ್ಲ. ಕ್ಷೇತ್ರದ ಬಗ್ಗೆ ಚರ್ಚೆ ನಡೆಸಲು ಸಚಿವರನ್ನು ಭೇಟಿಯಾಗಿದ್ದಾರೆ. ನನ್ನನ್ನು ಹಲವು ಶಾಸಕರು ಭೇಟಿಯಾಗುತ್ತಾರೆ ಇದರಲ್ಲಿ ವಿಶೇಷವೇನಿದೆ? ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

ಭಾನುವಾರ ಮಧ್ಯಾಹ್ನ ಮಾಗಡಿ ಬಳಿಯ ಸಾವನದುರ್ಗ ಬೆಟ್ಟದಲ್ಲಿ ನಾಗಮಂಗಲದ ಜೆಡಿಎಸ್ ಶಾಸಕ ಎನ್. ಚಲುವರಾಯಸ್ವಾಮಿ, ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್, ಮಾಗಡಿ ಶಾಸಕ ಬಾಲಕೃಷ್ಣ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.

ಖಾತೆ ಬದಲಾವಣೆ ಮಾಡೋಲ್ಲ : ಯಾವುದೇ ಸಚಿವರ ಖಾತೆಯನ್ನು ಬದಲಾವಣೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆ ಅಧಿವೇಶನದ ನಂತರ ಸಂಪುಟ ಪುನಾರಚನೆ ಅಥವ ಸಚಿವರ ಖಾತೆಯನ್ನು ಬದಲಾವಣೆ ಮಾಡುವುದಿಲ್ಲ ಎಂದು ಅವರು ಹೇಳಿದರು. [ಜಾರಕಿಹೊಳಿ ರಾಜೀನಾಮೆ ಪ್ರಹಸನ ಅಂತ್ಯ, ಖಾತೆ ಬದಲು]

ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸತೀಶ್ ಜಾರಕಿಹೊಳಿ ಅವರು ಖಾತೆ ಬದಲಾವಣೆ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದರು. ವಿಧಾನಸಭೆ ಅಧಿವೇಶನದ ಬಳಿಕ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ, ಖಾತೆ ಬದಲಾವಣೆ ಮಾಡುವುದಿಲ್ಲ ಎಂದು ಸಿಎಂ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.

English summary
Karnataka Chief Minister Siddaramaiah denied allegations of Operation Hasta. In Chitradurga CM said Janata Dal(Secular) MLAs met energy minister DK Shiva Kumar to discuss about constituency development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X