ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಕೆ.ಎಸ್.ಈಶ್ವರಪ್ಪಗೆ ಟಿಕೆಟ್ ಸಿಗುವುದು ಖಚಿತವಾಗಿಲ್ಲ'

|
Google Oneindia Kannada News

Recommended Video

ಕೆ ಎಸ್ ಈಶ್ವರಪ್ಪಾಗೆ ಟಿಕೆಟ್ ಸಿಗೋದು ಪಕ್ಕಾ ಆಗಿಲ್ಲ ಅಂದ್ರು ಸಿದ್ದರಾಮಯ್ಯ | Oneindia Kannada

ಚಿತ್ರದುರ್ಗ, ಮಾರ್ಚ್ 15 : 'ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಗೆ ವಿಧಾನಸಭೆ ಚುನಾವಣೆ ಟಿಕೆಟ್ ಖಚಿತವಾಗಿಲ್ಲ. ಬಿ.ಎಸ್.ಯಡಿಯೂರಪ್ಪ ಅವರು ಸುಳ್ಳು ಹೇಳಿಕೊಂಡು ತಿರುಗುತ್ತಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಗುರುವಾರ ಹೊಸದುರ್ಗದಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದೇ ಕೆಲಸ. ಕೆ.ಎಸ್.ಈಶ್ವರಪ್ಪಗೆ ಟಿಕೆಟ್ ಸಿಕ್ಕಿದೆ ಎಂದು ಯಡಿಯೂರಪ್ಪ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ' ಎಂದರು.

ಈಶ್ವರಪ್ಪಗೆ ಮತ್ತಷ್ಟು ಕಗ್ಗಂಟಾದ ಶಿವಮೊಗ್ಗ ನಗರ ಟಿಕೆಟ್ಈಶ್ವರಪ್ಪಗೆ ಮತ್ತಷ್ಟು ಕಗ್ಗಂಟಾದ ಶಿವಮೊಗ್ಗ ನಗರ ಟಿಕೆಟ್

Siddaramaiah fires at Amit Shah and Yogi Adityanath

'ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದು ಭಾಷಣ ಬಿಗಿಯುವ ಬದಲು ತಮ್ಮ ರಾಜ್ಯದಲ್ಲಿ ಏನಾಗುತ್ತಿದೆ? ಎಂದು ನೋಡಿಕೊಳ್ಳಲಿ' ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಹುದ್ದೆಗೇರಲು ಈಶ್ವರಪ್ಪ ಸೂಪರ್ ಮಾಸ್ಟರ್ ಪ್ಲಾನ್ಮುಖ್ಯಮಂತ್ರಿ ಹುದ್ದೆಗೇರಲು ಈಶ್ವರಪ್ಪ ಸೂಪರ್ ಮಾಸ್ಟರ್ ಪ್ಲಾನ್

ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಪಕ್ಷಗಳಿಗೆ ಶುಭಾಶಯಗಳನ್ನು ತಿಳಿಸಿದ ಸಿದ್ದರಾಮಯ್ಯ, 'ಬಿಜೆಪಿಯೇತರ ಪಕ್ಷಗಳು ಒಂದಾಗಿದೆ. ಆದ್ದರಿಂದ, ಗೆಲುವು ಸಿಕ್ಕಿದೆ' ಎಂದು ಹೇಳಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

'ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಕರ್ನಾಟಕದ ಜನರಿಗೆ ಬಂದು ಮುಖ ತೋರಿಸಲು ನೈತಿಕತೆ ಇಲ್ಲ. ಯಾರು ಬಂದು ಪ್ರಚಾರ ನಡೆಸಿದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ' ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.

ಯೋಗಿ ಆದಿತ್ಯನಾಥ್ ಕರ್ನಾಟಕದ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ. ಈಗಾಗಲೇ 3 ಬಾರಿ ಅವರು ರಾಜ್ಯದಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಆಗ ಸಿದ್ದರಾಮಯ್ಯ ಟ್ವಿಟರ್ ಮೂಲಕವೇ ತಿರುಗೇಟು ಕೊಟ್ಟಿದ್ದರು.

English summary
Karnataka Chief Minister Siddaramaiah attacked on BJP National President Amit Shah and Uttar Pradesh Chief Minister Yogi Adityanath and said that both leaders have no moral rights to criticize Karnataka government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X