ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಕ್ ಡೌನ್ ಉಲ್ಲಂಘಿಸಿ ಜೈಲು ಸೇರಬೇಡಿ; ಎಸ್ಪಿ ರಾಧಿಕಾ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಏಪ್ರಿಲ್ 08: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಆದೇಶಿಸಿರುವ ಲಾಕ್ ಡೌನ್ ಉಲ್ಲಂಘಿಸಿದರೆ ಎರಡು ವರ್ಷ ಜೈಲು ಶಿಕ್ಷೆಯಾಗುತ್ತದೆ, ಹೀಗಾಗಿ ನಾಗರಿಕರು ಎಚ್ಚರವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಎಚ್ಚರಿಕೆ ನೀಡಿದ್ದಾರೆ.

ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, "ನಾಗರಿಕರು ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಹೊರಗೆ ಬರಬೇಕು. ಅನಗತ್ಯವಾಗಿ ತಿರುಗಾಡಿ ಕಾನೂನು ಉಲ್ಲಂಘನೆ ಮಾಡಬಾರದು. ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಉದ್ದೇಶ. ಜನರು ಅವರ ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು. ಮನೆಯಲ್ಲೇ ಇದ್ದು ಅವರ ಮತ್ತು ಕುಟುಂಬದ ಆರೋಗ್ಯ ಕಾಪಾಡಿಕೊಳ್ಳಬೇಕು" ಎಂದು ಸಲಹೆ ನೀಡಿದರು.

ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯ ಜನ: ಡಿಸಿ ವಿನೋತ್ ಪ್ರಿಯಾ ಸ್ಪಷ್ಟನೆನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಜಿಲ್ಲೆಯ ಜನ: ಡಿಸಿ ವಿನೋತ್ ಪ್ರಿಯಾ ಸ್ಪಷ್ಟನೆ

ಮನೆಯಿಂದ ಹೊರಗೆ ಬಂದು ಅನಗತ್ಯವಾಗಿ ಕೇಸ್ ಹಾಕಿಸಿಕೊಳ್ಳಬೇಡಿ. ಲಾಕ್ ಡೌನ್ ಪೂರ್ಣಗೊಂಡ ಮೇಲೆ ಸಮಸ್ಯೆ ಅನುಭವಿಸಬೇಕಾಗುತ್ತದೆ. ಸೀಜ್ ಮಾಡಿದ ವಾಹನಗಳನ್ನು ಬಿಡಿಸಿಕೊಳ್ಳುವುದು ಸಹ ತುಂಬಾ ಕಷ್ಟ. ಹಾಗಾಗಿ ಇದರ ಕಡೆ ಸಾರ್ವಜನಿಕರು ಗಮನ ಹರಿಸಬೇಕು ಎಂದು ತಿಳಿವಳಿಕೆ ಹೇಳಿದರು.

SP Radhika Warned People Not To Break Lockdown Rules

ಜಿಲ್ಲೆಯ ವಿವಿಧೆಡೆ ಸುಮಾರು 32 ಚೆಕ್ ಪೋಸ್ಟ್ ತೆರೆಯಲಾಗಿದ್ದು, ಹೊರಗಿನಿಂದ ಬರುವ ವಾಹನಗಳಿಗೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಜಿಲ್ಲೆಯಿಂದ ಹೊರ ಹೋಗುವ ಮತ್ತು ಒಳಬರುವ ಎಲ್ಲ ವಾಹನಗಳ ಬಗ್ಗೆ ಎಚ್ಚರ ವಹಿಸಲಾಗಿದ್ದು, ಲಾಕ್‌ಡೌನ್ ಉಲ್ಲಂಘನೆ ಮಾಡಿ ತಿರುಗಾಡುತ್ತಿದ್ದವರ ಬಗ್ಗೆ ನಾಗರಿಕರೇ ಇಲಾಖೆಗೆ ಮಾಹಿತಿ ನೀಡಬಹುದು ಎಂದು ಚಿತ್ರದುರ್ಗ ಪೊಲೀಸ್ ಇಲಾಖೆ ತಿಳಿಸಿದೆ.

English summary
Today SP Radhika warned people not to break lockdown in chitradurga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X