ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಕಣ್ಮರೆಯಾಗಿದ್ದ ರಾಮನ ವಿಗ್ರಹ ವೇದಾವತಿ ನದಿಯಲ್ಲಿ ಪತ್ತೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 14 : ನೂರಾರು ವರ್ಷಗಳ ಇತಿಹಾಸ ಹೊಂದಿದ್ದ ಶ್ರೀರಾಮನ ದೇವಸ್ಥಾನ ಧ್ವಂಸಗೊಳಿಸಿದ ಬಳಿಕ ಕಣ್ಮರೆಯಾಗಿದ್ದ ವಿಗ್ರಹ ಇದೀಗ ವೇದಾವತಿ ನದಿಯಲ್ಲಿ ಪತ್ತೆಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಕೂಡ್ಲಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಜಮೀನಿನಲ್ಲಿ ನೂರಾರು ವರ್ಷದ ಶ್ರೀರಾಮನ ದೇವಸ್ಥಾನವಿತ್ತು. ಈ ಜಮೀನನ್ನು ಬೆಂಗಳೂರು ಮೂಲದ ಜಮೀನು ಮಾಲೀಕ ಖರೀದಿಸಿದ್ದರು. ಆದರೆ ಜಾಮೀನು ಮಾಲೀಕ ಕಳೆದ ನವೆಂಬರ್ 17 ರಂದು ದೇವಸ್ಥಾನವನ್ನು ನೆಲಸಮ ಮಾಡಿ, ದೇವರ ವಿಗ್ರಹವನ್ನು ವೇದವತಿ ನದಿಯಲ್ಲಿ ಬಿಸಾಡಿದ್ದ ಘಟನೆ ನಡೆದಿತ್ತು. ಈ ಘಟನೆಗೆ ಜಮೀನು ಮಾಲೀಕನ ವಿರುದ್ಧ ಸ್ಥಳೀಯರು ಹಾಗೂ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ಮಕರ ಸಂಕ್ರಾಂತಿ ವಿಶೇಷ ಪುಟ

ಇನ್ನು ಕೂಡ್ಲಹಳ್ಳಿ ಗ್ರಾಮದ ಜಮೀನನ್ನು ಖರೀದಿಸಿದ್ದ ಬೆಂಗಳೂರಿನ ವಿಮಲ್ ರಾಜನ್ ಎನ್ನುವ ವ್ಯಕ್ತಿ ರಾತ್ರೋರಾತ್ರಿ ದೇವಸ್ಥಾನವನ್ನು ಕೆಡವಿ ನೆಲಸಮ ಮಾಡಿದ್ದರು. ಬಳಿಕ ದೇವಾಲಯದ ವಿಗ್ರಹ ಕಣ್ಮರೆಯಾಗಿದ್ದು, ವಿಮಲ್ ರಾಜನ್ ವಿಗ್ರಹವನ್ನು ವೇದಾವತಿ ನದಿಯಲ್ಲಿ ಬಿಸಾಡಿದ್ದರು ಎಂದು ಹೇಳಲಾಗಿತ್ತು. ಘಟನೆ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

Sri Rama Idol Found In Chitradurga Vedavathi River

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಹಿರಿಯೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗೆಟ್ಟಿದ್ದರು. ಪ್ರಕರಣವನ್ನು ಚುರುಕುಗೊಳಿಸಿದ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆ ನಡೆಸಿ, ದೇವರ ವಿಗ್ರಹ ಪತ್ತೆಗೆ ಕಾರ್ಯಚರಣೆ ಕೈಗೊಂಡಾಗ ಕೊನೆಗೂ ವಿಗ್ರಹವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Sri Rama Idol Found In Chitradurga Vedavathi River

ಶುಕ್ರವಾರ ವೇದಾವತಿ ನದಿಯಲ್ಲಿ ವಿಗ್ರಹ ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆಯ ವೃತ್ತ ನಿರೀಕ್ಷಕ ಆನಂದ್ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿ ಶ್ರೀರಾಮನ ವಿಗ್ರಹವನ್ನು ನದಿಯಿಂದ ಮೇಲೆ ತೆಗೆದು ಪೊಲೀಸ್ ಠಾಣೆಗೆ ತಂದಿಡಲಾಗಿದೆ. ಮುಂದಿನ ದಿನಗಳಲ್ಲಿ ಅದೇ ಜಾಗದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು ಎಂದು ತಿಳಿದು ಬಂದಿದೆ.

English summary
Ancient idol of lord rama found in Vedavati river at chitradurga. Sri Rama temple demolishing at Hiriyur taluk Kundalahalli village.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X