ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ; ಇಬ್ಬರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಆಗಸ್ಟ್ 09; ಕೋವಿಡ್ ಭೀತಿಯ ನಡುವೆಯೇ ನಡೆದಿದ್ದ ಕರ್ನಾಟಕದ ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ರಾಜ್ಯದಲ್ಲಿ 157 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಚಳ್ಳಕೆರೆ ಪಟ್ಟಣದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಟಾಪರ್ ಆಗಿದ್ದಾರೆ. ಹಿರಿಯೂರು ನಗರದ ರಾಷ್ಟ್ರೀಯ ಅಕಾಡೆಮಿ ಶಾಲೆಯ ವಿದ್ಯಾರ್ಥಿ ಭರತ್ ಯು. ಮತ್ತು ಚಳ್ಳಕೆರೆ ನಗರದ ವಾಸವಿ ಇಂಗ್ಲಿಷ್ ಶಾಲೆಯ ವಿದ್ಯಾರ್ಥಿನಿ ಮುಕ್ತ ಬಿ. ಎಂ. 625 ಕ್ಕೆ 625 ಅಂಕ ಪಡೆದಿದ್ದಾರೆ.

ಶಿವಮೊಗ್ಗ; ಸರ್ಕಾರಿ ಶಾಲೆಯಲ್ಲಿ ಓದಿದ ಈತ ರಾಜ್ಯಕ್ಕೆ ಟಾಪರ್ ಶಿವಮೊಗ್ಗ; ಸರ್ಕಾರಿ ಶಾಲೆಯಲ್ಲಿ ಓದಿದ ಈತ ರಾಜ್ಯಕ್ಕೆ ಟಾಪರ್

ಇಬ್ಬರು ವಿದ್ಯಾರ್ಥಿಗಳು ಖಾಸಗಿ ಶಾಲೆಯ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಾಗಿದ್ದಾರೆ. ಹಿರಿಯೂರಿನ ವಿದ್ಯಾರ್ಥಿ ಭರತ್ ತಾಯಿ ಶಿಕ್ಷಕಿಯಾದರೆ, ತಂದೆ ವೈದ್ಯರು. ಇನ್ನು ಮುಕ್ತ ಬಿ. ಎಂ. ತಾಯಿ ಅಪರ್ಣಾ ಮತ್ತು ತಂದೆ ತಿಪ್ಪೇಸ್ವಾಮಿ ಸಹ ಶಿಕ್ಷಕರಾಗಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಚೆಕ್ ಮಾಡೋದು ಹೇಗೆ? ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಚೆಕ್ ಮಾಡೋದು ಹೇಗೆ?

SSLC Exam Two Students Of Chitradurga Bagged 625 Markes

ವಿದ್ಯಾರ್ಥಿನಿ ಮುಕ್ತ ಬಿ. ಎಂ.ಗೆ ಸ್ವಲ್ಪ ಕಣ್ಣಿನ ತೊಂದರೆ ಇದ್ದರೂ 625 ಅಂಕ ಪಡೆದು ಸಾಧನೆ ಮಾಡಿರುವುದು ವಿಶೇಷವಾಗಿದೆ. ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಮಾಧ್ಯಮಗಳ ಜೊತೆ ಮಾತನಾಡಿ ಸಂತಸ ಹಂಚಿಕೊಂಡಿದ್ದಾರೆ.

ಚಿತ್ರದಲ್ಲೇ ಎಸ್‌ಎಸ್‌ಎಲ್‌ಸಿ ಪಠ್ಯ ತೋರಿಸಿ ದಾಖಲೆ ಬರೆದ ಮಂಗಳೂರಿನ ಬಾಲೆಚಿತ್ರದಲ್ಲೇ ಎಸ್‌ಎಸ್‌ಎಲ್‌ಸಿ ಪಠ್ಯ ತೋರಿಸಿ ದಾಖಲೆ ಬರೆದ ಮಂಗಳೂರಿನ ಬಾಲೆ

ಕೋವಿಡ್ ಸಂದರ್ಭದಲ್ಲೂ ಏಳುಬೀಳುಗಳ ನಡುವೆಯೂ ವಿದ್ಯಾರ್ಥಿಗಳ ಸಾಧನೆಗೆ ತಾಲೂಕಿನ ಎಲ್ಲಾ ಶಿಕ್ಷಕರು ನೀಡಿದ ಶಿಕ್ಷಣ ನಿರಂತರವಾಗಿ ಕಲಿಕೆಯಲ್ಲಿ ಕುಂಠಿತವಾಗದಂತೆ ಹಾಗೂ ಮಾರ್ಗದರ್ಶನದ ಜೊತೆಗೆ ವಿದ್ಯಾರ್ಥಿಗಳ ಪರಿಶ್ರಮದಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ಚಳ್ಳಕೆರೆ ಬಿಇಓ ಸುರೇಶ್ ಹಾಗೂ ಹಿರಿಯೂರಿನ ಬಿಇಓ ನಾಗಭೂಷಣ್ ಹೇಳಿದ್ದಾರೆ.

ಈ ವರ್ಷದ ಫಲಿತಾಂಶದಲ್ಲಿ ಬೆಂಗಳೂರು ಉತ್ತರ ಜಿಲ್ಲೆ ಪ್ರಥಮ ಪಡೆದರೆ, ಬೆಂಗಳೂರು ದಕ್ಷಿಣ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ರಾಮನಗರ ಜಿಲ್ಲೆ ತೃತೀಯ ಸ್ಥಾನ ಗಳಿಸಿದೆ. ಇನ್ನು ಬಳ್ಳಾರಿ ಜಿಲ್ಲೆಗೆ ಕೊನೆಯ ಲಭಿಸಿದೆ. ಚಿತ್ರದುರ್ಗ ಗ್ರೇಡ್ 16ನೇ ಸ್ಥಾನದಲ್ಲಿದೆ.

ಒಟ್ಟು 8,71,443 ಮಕ್ಕಳು ಈ ಬಾರಿ ಪರೀಕ್ಷೆ ಬರೆದಿದ್ದು, 8,71,442 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಂಪ್ಯೂಟರ್ ಮೌಲ್ಯಮಾಪನ ಮಾಡಲಾಗಿದ್ದು ಎಲ್ಲೂ ಲೋಪ ಆಗಿಲ್ಲ. 4,701,50 ವಿದ್ಯಾರ್ಥಿಗಳು, 4,01,281 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು.

'ಎ' + ಗ್ರೇಡ್ 1,28,931, 'ಎ' ಗ್ರೇಡ್ 2,50,317, 'ಬಿ' ಗ್ರೇಡ್ 2,87,684, 'ಸಿ' ಗ್ರೇಡ್ 1,13,610 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇ.9 ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಿ ಪಾಸ್ ಮಾಡಲಾಗಿದೆ. 289 ಮಕ್ಕಳು 623 ಅಂಕವನ್ನು ಪಡೆದಿದ್ದಾರೆ. ಇಬ್ಬರು 622 ಅಂಕ, 449 ಮಂದಿ 621 ಅಂಕ, 20 ಮಕ್ಕಳು 620 ಅಂಕಗಳನ್ನು ಪಡೆದಿದ್ದಾರೆ.

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ನೂತನ ಸಚಿವ ಬಿ. ಸಿ. ನಾಗೇಶ್ ಸೋಮವಾರ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದರೂ ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮಾಹಿತಿ ಕೊಟ್ಟಿದ್ದಾರೆ.

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 25,702 ವಿದ್ಯಾರ್ಥಿಗಳಿಗೆ ಪ್ರಥಮ ಭಾಷೆಯಲ್ಲಿ ಗರಿಷ್ಠ 125 ಅಂಕಗಳಿಗೆ 125 ಅಂಕಗಳನ್ನು ಪಡೆದಿದ್ದಾರೆ. ದ್ವಿತೀಯ ಭಾಷೆಯಲ್ಲಿ 36,628 ಮತ್ತು ತೃತೀಯ ಭಾಷೆಯಲ್ಲಿ 36,776 ವಿದ್ಯಾರ್ಥಿಗಳಿಗೆ 100ಕ್ಕೆ ನೂರು ಅಂಕ ಬಂದಿದೆ.

ಗಣಿತದಲ್ಲಿ 6321, ವಿಜ್ಞಾನ ವಿಷಯದಲ್ಲಿ 3649 ವಿದ್ಯಾರ್ಥಿಗಳು, ಸಮಾಜ ವಿಜ್ಞಾನ ವಿಷಯದಲ್ಲಿ 9367 ವಿದ್ಯಾರ್ಥಿಗಳು ಶೇ 100ರಷ್ಟು ಅಂಕವನ್ನು ಪಡೆದಿದ್ದಾರೆ.

Recommended Video

ನೀರಜ್ ಹೆಸರು ಇಟ್ಕೊಂಡೋರಿಗೆ ಗುಜರಾತಿನಲ್ಲಿ ಹೊಡೀತು ಲಾಟರಿ | Oneindia Kannada

English summary
Two students of Chitradurga district get 625 markes in Karnataka SSLC exam. SSLC exam result announced on August 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X