ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸೋತಿದೆ: ಬಿಎಸ್ ವೈ

Posted By: Nayana
Subscribe to Oneindia Kannada

ಚಿತ್ರದುರ್ಗ, ಜನವರಿ 09 : ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ, ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ನಿರಂತರವಾಗಿದೆ. ರಾಜ್ಯ ಸರ್ಕಾರ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿರುವ ಕಾರಣ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಜತೆಗೆ ಹೆಣ್ಣು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಇದಕ್ಕೊಂದು ಅಂತ್ಯ ಕಾಣಿಸುವತ್ತ ಸರ್ಕಾರ ಯೋಚನೆ ಮಾಡುತ್ತಿಲ್ಲ ಎಂದರು.

ಚಿತ್ರದುರ್ಗ ಜಿಲ್ಲೆಗೆ ಕಾಂಗ್ರೆಸ್ ಸರಕಾರ ನೀಡಿದ್ದೇನು?

ಕಾಂಗ್ರೆಸ್ ಶಾಸಕರ ಬೆಂಬಲಿಗರಿಂದ ಹೊಸದುರ್ಗದ ಬಳಿ ವೇದಾವತಿ ನದಿಯಲ್ಲಿ ಅಕ್ರಮ ಮರಳು ಧಂದೆ ನಡೆಯುತ್ತಿದೆ, ಚಿತ್ರದುರ್ಗ ಜಿಲ್ಲೆಯ ರಸ್ತೆಗಳು ಹಾಳಾಗಿ ಹೋಗಿವೆ, ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ, ನೀರಾವರಿ ಯೋಜನೆಗಳಿಗೆ ಸಂಭವಿಸಿದಂತೆ ನೆರೆ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸದೆ ಎಲ್ಲದರಲ್ಲೂ‌ ರಾಜಕೀಯ ಮಾಡುತ್ತಿದ್ದಾರೆ, ನಾನು ಹಿಂದು ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಮೀನು ತಿಂದು ಧರ್ಮಸ್ಥಳಕ್ಕೆ ಹೋಗುತ್ತಾರೆ,

State govt fails to maintain law and order

3515ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರೈತರ ಪರವಾಗಿ ನಿಲ್ಲುವ ಯಾವುದೇ ಪ್ರಾಮಾಣಿಕ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಿಲ್ಲ,ವಿಜಯಪುರ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ದಲಿತರ ವಿಜಯಪುರ ಚಲೋ ತಡೆಯುವುದು ತಪ್ಪು, ಶಾಂತಿಯುತ ಹೋರಾಟಕ್ಕೆ ಅವಕಾಶ ಕೊಡಬೇಕು, ನಾವು ಧರ್ಮವನ್ನು ಮುಂದಿಟ್ಟುಕೊಂಡು ಪರಿವರ್ತನಾ ಯಾತ್ರೆ ಮಾಡುತ್ತಿಲ್ಲ,

ಗೋಡ್ಸೆ ಅನುಯಾಯಿ ಆದಿತ್ಯನಾಥ್ ರಿಂದ ನಮಗೆ ಪಾಠ ಬೇಡ: ಸಿದ್ದರಾಮಯ್ಯ

ಜನರ ಸಾಮಾಜಿಕ ಸಮಸ್ಯೆ ಗಳನ್ನು ಮುಂದಿಟ್ಟುಕೊಂಡು ಯಾತ್ರೆ ನಡೆಸುತ್ತಿದ್ದೇವೆ, ಸಿದ್ದರಾಮಯ್ಯ ಹುಚ್ಚನಂತೆ ಮಾತನಾಡುತ್ತಾರೆ. ಯೋಗಿ ಆದಿತ್ಯನಾಥ್ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ, ಗೋಮಾಂಸ ಮಾತ್ರವಲ್ಲ, ಅವರು ತಿನ್ನದೆ ಇರುವುದು ಏನಿದೆ ಎಂದು‌ ಸಿದ್ದರಾಮಯ್ಯ ವಿರುದ್ದ ಕಿಡಿ ಕಾರಿದ ಯಡಿಯೂರಪ್ಪ, ನನ್ನನ್ನು ಜೈಲಿಗೆ ಹೋಗಿ ಬಂದವನು ಎಂದು ಹೇಳಿದ್ದೇ ಹೇಳಿದರೆ ಜನ ಬಡಿಗೆ ತೆಗೆದುಕೊಳ್ಳುತ್ತಾರೆ, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ನಾವು ಜವಬ್ದಾರರಲ್ಲ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
State BJP president BS Yeddyurappa accused state government that failed to maintain law and order situation in the state as many girls and women rape cases increased drastically.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ