• search
 • Live TV
ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಲಾ ಪ್ರಾರಂಭೋತ್ಸವಕ್ಕೆ ಎತ್ತಿನಗಾಡಿಯಲ್ಲಿ ಶಾಲೆಗೆ ಬಂದ ಮಕ್ಕಳು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ 16 : ರಾಜ್ಯಾದ್ಯಂತ ಸೋಮವಾರ ಶಾಲಾ ಪ್ರಾರಂಭೋತ್ಸವಕ್ಕೆ ಸರ್ಕಾರ ವಿದ್ಯುಕ್ತವಾಗಿ ಚಾಲನೆ ದೊರೆತಿದ್ದು, ಇತ್ತ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಸಹ ಮಕ್ಕಳು ಎತ್ತಿನಗಾಡಿಯಲ್ಲಿ ಶಾಲೆಗೆ ಬಂದು ಎಲ್ಲರ ಗಮನ ಸೆಳೆದರು‌.

ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಗ್ಗನಡು ಗ್ರಾಮದಲ್ಲಿ ಗ್ರಾಮದ ದೇವರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಚಾಲನೆ ನೀಡಿ, ಎತ್ತಿನಗಾಡಿಯಲ್ಲಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬಂದರು.

ಚಿತ್ರದುರ್ಗ; ಆಲಿಕಲ್ಲು ಮಳೆ ಆರ್ಭಟ, ಅಪಾರ ಬೆಳೆ ನಷ್ಟಚಿತ್ರದುರ್ಗ; ಆಲಿಕಲ್ಲು ಮಳೆ ಆರ್ಭಟ, ಅಪಾರ ಬೆಳೆ ನಷ್ಟ

ಇನ್ನು ಕಾರ್ಯಕ್ರಮ ಕುರಿತು ಮಾತನಾಡಿದ ಶಾಸಕಿ ಕೆ. ಪೂರ್ಣಿಮಾ ಕಳೆದ ಎರಡು ವರ್ಷಗಳಿಂದ ಕೊರೋನಾ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡವು. ಕೋವಿಡ್ ಹಿನ್ನೆಲೆಯಲ್ಲಿ ಕಲಿಕಾ ನಷ್ಟ ಸರಿದೂಗಿಸಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ವರ್ಷ ಕಲಿಕಾ ಚೇತರಿಕೆ ವರ್ಷ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಪೋಷಕರು ಕನ್ನಡ ಭಾಷೆಯ ಶಾಲೆಗಳ ಬಗ್ಗೆ ಕೀಳರಿಮೆ ಬೇಡ, ಕನ್ನಡ ಭಾಷೆಗೆ ಒತ್ತು ನೀಡಬೇಕು. ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಕನ್ನಡ ಭಾಷೆಗೆ ಆದ್ಯತೆ ನೀಡಿ ಎಂದರು.

ರಾಜ್ಯದಲ್ಲಿ ಸರ್ಕಾರದಿಂದ ಈ ವರ್ಷ 7 ಸಾವಿರ ಕೊಠಡಿಗಳನ್ನು ಕೊಡಲು ಸರ್ಕಾರ ಮುಂದಾಗಿದೆ. ನಾನು ಸಹ ಶಿಕ್ಷಣ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದೇನೆ. ಬಗ್ಗನಡು ಶಾಲೆಗೆ ಶೀಘ್ರದಲ್ಲೇ ಬೋರ್ ವೆಲ್ ಕೊರೆಸಿ ನಂತರ ವೈಯಕ್ತಿಕವಾಗಿ ಒಂದು ತಿಂಗಳೊಳಗೆ ಸ್ಮಾರ್ಟ್ ಕ್ಲಾಸ್ ಕೊಡಲಾಗುತ್ತದೆ ಎಂದು ಭರವಸೆ ನೀಡಿದರು.

ಹೂ ನೀಡಿ ಸ್ವಾಗತ :

ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದಲ್ಲಿ ಸಹ ವಿದ್ಯಾರ್ಥಿಗಳಿಗೆ ಶಿಕ್ಷಕರು ಹೂವು ನೀಡಿ ಸ್ವಾಗತಿಸಲಾಯಿತು. ಉಳಿದಂತೆ ತಾಲ್ಲೂಕಿನ ಇತರೆ ಗ್ರಾಮೀಣ ಭಾಗದ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಮಕ್ಕಳನ್ನು ಸ್ವಾಗತಿಸಿದರು.

Chitradurga students come to schools in bullock carts

ಚಳ್ಳಕೆರೆಯಲ್ಲಿ ಸ್ವಾಗತ:

ಚಳ್ಳಕೆರೆ ತಾಲೂಕಿನ ಚಿಕ್ಕ ಉಳ್ಳಾರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತಿಸಿದರು. ಉಳಿದಂತೆ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲೂ ಸಹ ಶಾಲಾ ಪ್ರಾರಂಭೋತ್ಸವಕ್ಕೆ ಅದ್ದೂರಿ ಚಾಲನೆ ದೊರೆತಿದೆ.

ಹಬ್ಬದ ವಾತಾವರಣ:
ಶಾಲಾ ಪ್ರಾರಂಭೋತ್ಸವಕ್ಕೆ ಹಿಂದೂ ಸರ್ಕಾರಿ ಶಾಲೆಗಳಲ್ಲಿ ಹಬ್ಬದ ವಾತಾವರಣ ‌ಸೃಷ್ಠಿಯಾಗಿತ್ತು. ಬಾಳೆ ಕಂದು, ಮಾವಿನ ಸೋಪ್ಪು, ಹೀಗೆ ತಳಿರು ತೋರಣಗಳಿಂದ ಸಿಂಗರಿಸಿ, ವಿವಿಧ ವಾದ್ಯಗಳೊಂದಿಗೆ ಮಕ್ಕಳನ್ನು ಶಾಲೆಗೆ ಅದ್ದೂರಿಯಾಗಿ ಕರೆತರಲಾಯಿತು.

ಒಟ್ಟಾರೆಯಾಗಿ ಮಕ್ಕಳ ಶಿಕ್ಷಣಕ್ಕೆ ಈ ವರ್ಷ ಹೆಚ್ಚು ಆದ್ಯತೆ ನೀಡಿರುವ ಸರ್ಕಾರ ಬೇಸಿಗೆಯ ರಜೆಯನ್ನು 15 ದಿನಗಳ ಕಡಿತ ಮಾಡಿ ಇಂದು ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಶಾಲಾ ಮಕ್ಕಳು ಶಾಲೆ ಕಡೆಗೆ ಮುಖ ಮಾಡಿದ್ದಾರೆ.

   ಪಂಜಾಬ್ ತಂಡಕ್ಕೆ ಲಕ್ಕಿ ಚಾರ್ಮ್ ಈತ !! | Oneindia Kannada
   English summary
   The government has show the green signal for the school opening across the state on Monday, and even children in Chitradurga district are found in festive mood.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X