ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

By ಹಿರಿಯೂರು ಪ್ರತಿನಿಧಿ
|
Google Oneindia Kannada News

ಹಿರಿಯೂರು, ಮೇ.05: ಎಲ್ಲ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಇಂದು ಮಂಗಳವಾರ ಹಿರಿಯೂರಿನಲ್ಲಿ ಮಾನವ ಸರಪಳಿ ನಿರ್ಮಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಂತರ ತಾಲೂಕು ಕಚೇರಿಗೆ ತೆರಳಿದ ವಿದ್ಯಾರ್ಥಿಗಳು, ಸರ್ಕಾರವು ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು, ಗ್ರಾಮೀಣ ಭಾಗದಿಂದ ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ನಗರ ಸಾರಿಗೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು.

ಗಾಯಗೊಂಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಿದ ಎಸ್‌.ಆರ್‌.ಪಾಟೀಲ ಗಾಯಗೊಂಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಿದ ಎಸ್‌.ಆರ್‌.ಪಾಟೀಲ

ರಾಜ್ಯದಲ್ಲಿ ಕೆಲವು ಗ್ರಾಮೀಣ ಭಾಗಗಳು ಸಾರಿಗೆ ವ್ಯವಸ್ಥೆಯಿಂದ ವಂಚಿತವಾಗಿದ್ದು, ಅಂತಹ ಪ್ರದೇಶಗಳಿಗೆ ಕೂಡಲೇ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ವಿವಿಧ ಬೇಡಿಕೆಗಳುಳ್ಳ ಮನವಿ ಪತ್ರವನ್ನು ವಿದ್ಯಾರ್ಥಿಗಳು ತಹಸೀಲ್ದಾರ್ ಅವರಿಗೆ ಸಲ್ಲಿಸಿದರು.

Students were protest in hiriyur on tuesday

ಹಿಂದಿನ ರಾಜ್ಯ ಸರ್ಕಾರ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ (ಎಸ್ ಸಿ/ ಎಸ್ ಟಿ) ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿದ್ದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಅನುಕೂಲಕರವಾಗಿತ್ತು.

ಆದರೆ ಇಂದಿನ ರಾಜ್ಯ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಹೇಳಿತ್ತು. ಆದರೆ ಈಗ ಮಾತನ್ನು ಬದಲಿಸಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ವಿದ್ಯಾರ್ಥಿ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ತಮ್ಮ ಅಧಿಕಾರಕ್ಕಾಗಿ ದೆಹಲಿ ಟು ಕರ್ನಾಟಕ, ಕರ್ನಾಟಕ ಟು ದೆಹಲಿ ಅಂತ ಓಡಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Students were protest in hiriyur on tuesday

ಸರ್ಕಾರ ವಿದ್ಯಾರ್ಥಿಗಳ ಮಧ್ಯೆ ಜಾತಿ ಎಂಬ ವಿಷ ಬೀಜ ಬಿತ್ತುವ ಮೂಲಕ ಕೆಲ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ವಂಚನೆ ಮಾಡುತ್ತಿದೆ. ಇಂದಿನ ದಿನಗಳಲ್ಲಿ ಶಿಕ್ಷಣ ಮಾರಾಟ ಮಾಡುವ ವ್ಯವಸ್ಥೆಯಾಗಿದೆ. ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದ್ದು, ಇದರಿಂದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ.

ನಾವು ಕಟ್ಟುವ ಶುಲ್ಕದಿಂದ ಸರ್ಕಾರ ಮೋಜು ಮಸ್ತಿ ಮಾಡುತ್ತಿದೆ. ವಿದ್ಯಾರ್ಥಿಗಳು ಈ ದೇಶದ ಸಂಪತ್ತು. ನಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

English summary
Students were protest in hiriyur on tuesday. They demanding a free bus pass for poor students of all class.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X