ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಉತ್ಸಾಹದಿಂದ ಶಾಲೆಗೆ ಹೆಜ್ಜೆ ಹಾಕಿದ ವಿದ್ಯಾರ್ಥಿಗಳು; ಮೊದಲ ದಿನ ಹೇಗಿತ್ತು?

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಆಗಸ್ಟ್ 23: ಒಂದೂವರೆ ವರ್ಷದ ಬಳಿಕ ಹಾಗೂ ಕೊರೊನಾ ಮೂರನೇ ಅಲೆ ಭೀತಿಯ ನಡುವೆ ಶಾಲಾ, ಕಾಲೇಜುಗಳು ಆಗಸ್ಟ್ 23ರಿಂದ ಪ್ರಾರಂಭವಾಗಿವೆ. ಇತ್ತ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲಾ- ಕಾಲೇಜುಗಳಲ್ಲಿ ಸೋಮವಾರ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ವಿದ್ಯಾರ್ಥಿಗಳು ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಖುಷಿಯಿಂದ ಶಾಲಾ- ಕಾಲೇಜುಗಳ ಕಡೆ ಮುಖ ಮಾಡಿದ್ದಾರೆ. ಅಲ್ಲದೇ ಕೋವಿಡ್‍ನ ಯಾವುದೇ ಭಯವಿಲ್ಲದೆ ವಿದ್ಯಾರ್ಥಿಗಳು ಶಾಲೆಗಳಿಗೆ ಬರುತ್ತಿರುವುದು ವಿಶೇಷವಾಗಿ ಕಂಡು ಬಂದಿತು.

ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಹೂ ನೀಡಿ ಮೂಲಕ ಶಿಕ್ಷಕರು ಶಾಲೆಯೊಳಗೆ ಬರಮಾಡಿಕೊಂಡರು. ಹಸಿರು ನಿಶಾನೆ ತೋರಿಸಿ ಶಾಲೆ ಪ್ರಾರಂಭಕ್ಕೆ ಶಿಕ್ಷಣ ಇಲಾಖೆಯ ಡಿಡಿಪಿಐ ರವಿಶಂಕರ್ ರೆಡ್ಡಿ ಸಂತಸ ವ್ಯಕ್ತಪಡಿಸಿದರು.

Chitradurga School Reopening: Students Who Came To School Enthusiastically

ಚಿತ್ರದುರ್ಗ ಜಿಲ್ಲಾಡಳಿತ ಶಿಕ್ಷಣ ಇಲಾಖೆ ಶಾಲೆಯ ಆರಂಭಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು. ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 1.30 ರವರೆಗೆ 9, 10 ಮತ್ತು ದ್ವಿತೀಯ ಪಿಯು ತರಗತಿಗಳು ನಡೆದವು. ಇಂದು ಕೋವಿಡ್ ನಿಯಮ ಪಾಲನೆಯನ್ನು ಮಾಡಿಕೊಂಡು ಇಂದು ಚಿತ್ರದುರ್ಗ ಜಿಲ್ಲೆಯ ಶಾಲೆಗಳನ್ನು ಅಸರಂಭಿಸಲಾಗಿದೆ ಎಂದರು.

ಜಿಲ್ಲೆಯ 486 ಪ್ರೌಢ ಶಾಲಾ, 127 ಪಿಯು ಕಾಲೇಜುಗಳು ಆರಂಭವಾಗಿವೆ. ಶಾಲೆಗೆ ಬಂದ ಮಕ್ಕಳು ಸಾನಿಟೈಸರ್ ಮಾಡಿಕೊಂಡು ಶಾಲಾ ಕೊಠಡಿಗಳಿಗೆ ಹೋಗುವ ದೃಶ್ಯ ಸಾಮಾನ್ಯವಾಗಿತ್ತು. ಶಾಲೆಗೆ ಬರುವ ಪ್ರತೀ ವಿದ್ಯಾರ್ಥಿಗಳಿಗೆ ಅನುಮತಿ ಪತ್ರವೂ ಕಡ್ಡಾಯವಾಗಿತ್ತು.

ಒಂದೊಂದು ಕೊಠಡಿ ಒಳಗೆ ಸಾಮಾಜಿಕ ಅಂತರ 20 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಶಿಕ್ಷಕರು ಉತ್ಸಾಹದಿಂದ ತರಗತಿ ಶುರು ಮಾಡಿದರು. ಹಿರಿಯೂರು, ಚಳ್ಳಕೆರೆ, ಮೊಳಕಾಲ್ಮೂರು, ಹೊಸದುರ್ಗ ಸೇರಿದಂತೆ ಹೊಳಲ್ಕೆರೆ ತಾಲೂಕಿನಲ್ಲೂ ಸಕಲ ಸಿದ್ಧತೆ ಮಾಡಲಾಗಿತ್ತು.

ಆಯಾ ಶಾಲಾ ಶಿಕ್ಷಕ ಹಾಗೂ ಶಿಕ್ಷಕಿಯರು ತಮ್ಮ ತಮ್ಮ ಶಾಲೆಗಳಲ್ಲಿ ಹಸಿರು ತೋರಣ, ಬಾಳೆ ಕಂದು ಕಟ್ಟಿ ಶೃಂಗಾರ ಮಾಡಿದ್ದರು. ಒಂದುವರೆ ವರ್ಷದ ಬಳಿಕ ಮಕ್ಕಳು ಶಾಲೆಗೆ ಹೆಜ್ಜೆ ಹಾಕುತ್ತಿದ್ದನ್ನು ಕಂಡ ಶಿಕ್ಷಕರು ಸಂತಸ ವ್ಯಕ್ತಪಡಿಸಿದರು. ಶಾಲೆಗಳಲ್ಲಿ ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸಿದ್ದರು. ಮಾಸ್ಕ್, ಸ್ಯಾನಿಟರಿ, ಸಾಮಾಜಿಕ ಅಂತರ ಎಲ್ಲವೂ ಕಂಡುಬಂದಿತ್ತು.

Chitradurga School Reopening: Students Who Came To School Enthusiastically

ಒಟ್ಟಾರೆಯಾಗಿ ರಾಜ್ಯಾದ್ಯಂತ ಇಂದಿನಿಂದ ಶಾಲೆ ಕಾಲೇಜು ಪ್ರಾರಂಭವಾಗಿದ್ದು, ಮೊದಲನೇ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ರಾಜ್ಯದಲ್ಲಿ ಮೂರನೇ ಕೊರೊನಾ ಅಲೆ ಶುರುವಾಗುವ ಬಗ್ಗೆ ತಜ್ಞರು ಮಾಹಿತಿ ನೀಡಿದ್ದಾರೆ. ಮತ್ತೆ ಲಾಕ್‌ಡೌನ್ ಆಗುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೋವಿಡ್- 19 ಕತ್ತರಿ ಹಾಕುತ್ತಾ ಅಥವಾ ಮುಂದಿನ ವಿದ್ಯಾಭ್ಯಾಸದ ಬಗ್ಗೆ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸುಗಮ ದಾರಿ ಮಾಡಿಕೊಡುತ್ತಾ ಕಾದು ನೋಡಬೇಕಿದೆ.

ಶಾಲಾ- ಕಾಲೇಜು ಆರಂಭ: ಜಿಲ್ಲಾಧಿಕಾರಿ ಪರಿಶೀಲನೆ
ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರೌಢಶಾಲೆಗಳ 9 ರಿಂದ 10ನೇ ತರಗತಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಸೋಮವಾರ ಆರಂಭವಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಚಿತ್ರದುರ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲಾ- ಕಾಲೇಜುಗಳ ಭೌತಿಕ ತರಗತಿ ಆರಂಭದ ಹಿನ್ನಲೆಯಲ್ಲಿ ನಗರದ ವಿದ್ಯಾವಿಕಾಸ ಪ್ರೌಢಶಾಲೆ ಹಾಗೂ ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಭಾರತೀಯ ಪ್ರೌಢಶಾಲೆಗಳಿಗೆ ಶಾಲೆಗೆ ಭೇಟಿ ನೀಡಿ, ಶಾಲಾರಂಭದ ಸಕಲ ಸಿದ್ಧತೆ ಪರಿಶೀಲಿಸಿ ಮಾತನಾಡಿದರು.

Chitradurga School Reopening: Students Who Came To School Enthusiastically

"ತರಗತಿಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳ, ಶಾಲಾ ಸಿಬ್ಬಂದಿಯ ದೇಹದ ಉಷ್ಣತೆ ತಪಾಸಣೆ ಮಾಡುವುದು ಸೇರಿದಂತೆ ಕೋವಿಡ್-19 ಸೋಂಕು ಹರಡದಂತೆ ತಡೆಯಲು ಕಠಿಣ ಕ್ರಮಕೈಗೊಳ್ಳಬೇಕು," ಎಂದು ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದರು.

"ವಿದ್ಯಾರ್ಥಿಗಳು ಪರಸ್ಪರ ಅಂತರ ಕಾಯ್ದುಕೊಂಡು ಪಾಠ ಕೇಳುವ ವ್ಯವಸ್ಥೆ ಕಲ್ಪಿಸಬೇಕು. ಶಾಲಾ ಕೊಠಡಿಗಳ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು," ಎಂದು ತಾಕೀತು ಮಾಡಿದರು.

"ಶಾಲಾ-ಕಾಲೇಜುಗಳ ಆವರಣದ ಸುತ್ತ ಹಾಗೂ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು. ಸರ್ಕಾರದ ಕೋವಿಡ್-19ರ ಮಾರ್ಗಸೂಚಿಯಂತೆ ಶಾಲೆಯ ಎಲ್ಲ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಸ್ಯಾನಿಟೈಸರ್ ಬಳಕೆ ಮಾಡುವಂತೆ," ಶಾಲಾ ಮುಖ್ಯಶಿಕ್ಷಕರಿಗೆ ಸೂಚನೆ ನೀಡಿದರು.

ಶಾಲೆ ಆರಂಭವಾಗಿರುವ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಮಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಅಭಿಪ್ರಾಯ ಕೇಳಿ, ಉತ್ತಮವಾಗಿ ವಿದ್ಯಾಭ್ಯಾಸ ಮಾಡಬೇಕು ಹಾಗೂ ಎಸ್‍ಎಸ್‍ಎಲ್‍ಸಿಯಲ್ಲಿ ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಅಲಂಕರಿಸಬೇಕು.

ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಾಲೆಗೆ ಹಾಗೂ ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತರುವಂತಹ ಫಲಿತಾಂಶ ಪಡೆಯಬೇಕು ಎಂದು ಸಲಹೆ ನೀಡಿದರು. ಜಿಲ್ಲಾಧಿಕಾರಿ ಭೇಟಿ ವೇಳೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಉಪಸ್ಥಿತರಿದ್ದರು.

English summary
Students attended physical classes with Covid-19 guidelines, In Chitradurga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X