ಚಿತ್ರದುರ್ಗ ಜಿಲ್ಲೆಯ ಮಳೆ ವರದಿ: ಎಚ್.ಡಿ.ಪುರದಲ್ಲಿ ಅತ್ಯಧಿಕ ಮಳೆ

ಚಿತ್ರದುರ್ಗ, ಮೇ20: ಜಿಲ್ಲೆಯಲ್ಲಿ ಮೇ 20 ರಂದು ಬಿದ್ದ ಮಳೆಯ ವಿವರದನ್ವಯ ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ.ಪುರದಲ್ಲಿ 34.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆ 12.8 ಮಿ.ಮೀ, ರಾಮಗಿರಿ 8.4, ಚಿಕ್ಕಜಾಜೂರು 4.2, ಬಿ.ದುರ್ಗ 24, ತಾಳ್ಯದಲ್ಲಿ 6.4 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 34 ಮಿ.ಮೀ, ತಳುಕು 8.4, ನಾಯಕನಹಟ್ಟಿ 19.6, ಡಿ.ಮರಿಕುಂಟೆಯಲ್ಲಿ 9.4 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 25 ಮಿ.ಮೀ, ರಾಯಾಪುರದಲ್ಲಿ 17.4 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 30.6, ಮತ್ತೋಡು 2, ಶ್ರೀರಾಂಪುರ 5.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಮೇ 19 ರಂದು ಬಿದ್ದ ಮಳೆಯ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದಲ್ಲಿ 33 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

Chitradurga: Taluk Hobli level Rain record as on May 20

ಚಿತ್ರದುರ್ಗ ತಾಲ್ಲೂಕಿನ ಹಿರೇಗುಂಟನೂರು 2 ಮಿ.ಮೀ, ಸಿರಿಗೆರೆ 21.4 ಹಾಗೂ ಐನಹಳ್ಳಿಯಲ್ಲಿ 7.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 29.4 ಮಿ.ಮೀ, ರಾಮಗಿರಿ 3.4, ಚಿಕ್ಕಜಾಜೂರು 23.2, ಬಿ.ದುರ್ಗ 14.2, ಹೆಚ್.ಡಿ.ಪುರ 3.2, ತಾಳ್ಯ 6.2 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 1.9 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ. ಮಲೆನಾಡು, ಉತ್ತರ ಒಳನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

Recommended Video

      Tweet ಮುಖಾಂತರ ಖಡಕ್ ವಾರ್ನಿಂಗ್ !! Rishab pant | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+