ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನಲ್ಲಿ ಅತ್ಯಧಿಕ 21.2 ಮಿ.ಮೀ ಮಳೆ

ಚಿತ್ರದುರ್ಗ, ಮೇ 06: ಚಿತ್ರದುರ್ಗ ಜಿಲ್ಲೆಯಲ್ಲಿ ಮೇ 06 ರಂದು ಬಿದ್ದ ಮಳೆಯ ವಿವರ ಪ್ರಕಾರ ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 21.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ. ಮೇ 05 ರಂದು ಬಿದ್ದ ಮಳೆಯ ವಿವರದನ್ವಯ ಹೊಳಲ್ಕೆರೆ ತಾಲ್ಲೂಕಿನ ಬಿ. ದುರ್ಗದಲ್ಲಿ 52 ಮಿ.ಮೀ ಮಳೆ ದಾಖಲಾಗಿತ್ತು.

ಮೇ 06 ರಂದು ವಿವಿಧ ತಾಲೂಕಿನ ಮಳೆ ವಿವರ ಹೀಗಿದೆ:
ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು 9.8, ಬಿ.ದುರ್ಗ 9, ಹೆಚ್.ಡಿ. ಪುರ 3.2, ತಾಳ್ಯ 2.4 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರು 2.5, ಇಕ್ಕನೂರು 3.2, ಮಿ.ಮೀ ಮಳೆಯಾಗಿದೆ. ಹೊಸದುರ್ಗ 12.6, ಬಾಗೂರು 6.3, ಶ್ರೀರಾಂಪುರ 18.2, ಮಾಡದಕೆರೆ 8 ಮಿ.ಮೀ ಮಳೆಯಾಗಿದೆ.

Chitradurga: Taluk Hobli level Rain record as on May 6

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ 6.2, ಸಿರಿಗೆರೆ 7.8, ಐನಹಳ್ಳಿಯಲ್ಲಿ 4.2, ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಮಳೆ ಮುನ್ಸೂಚನೆ: ರಾಜ್ಯದ ಮಲೆನಾಡು ಮತ್ತ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಮಳೆ. ಉತ್ತರ ಒಳನಾಡು ಮತ್ತ ಮಧ್ಯ ಕರ್ನಾಟಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಅಲ್ಲಲ್ಲಿ ಗುಡುಗು ಸಹಿತ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಉಸ್ತುವಾರಿ ನಿರ್ದೇಶಕ ಸುಂದರ್ ಮೇತ್ರಿ ಹೇಳಿದ್ದಾರೆ.

Recommended Video

      Tejasvi Surya ಯಾರ ಬಳಿಯೂ ಕ್ಷಮೆಯಾಚಿಸಿಲ್ಲ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+