ಚಿತ್ರದುರ್ಗದ ಬಳಿ ಕಾರು-ಲಾರಿ ನಡುವೆ ಭೀಕರ ಅಪಘಾತ, ನಾಲ್ವರು ಸಾವು, ಮೂವರಿಗೆ ಗಂಭೀರ ಗಾಯ
ಚಿತ್ರದುರ್ಗ, ಸೆಪ್ಟೆಂಬರ್, 04: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ .
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಕಾರು ಹಿಂಬಂದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶಂಶುದ್ದೀನ್ (40), ಮಲ್ಲಿಕಾ (37), ಖಲೀಲ್ (42), ತಬ್ರೇಜ್ (13) ಇವರು ಭೀಕರ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಇನ್ನು ರೆಹಾನ್ (14), ರೆಹಮಾನ್ (12), ಮುಬಿ (9) ಎನ್ನುವ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರು ತೆರಳುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಈ ವೇಳೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.












Click it and Unblock the Notifications