ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ: ಬೈಕ್‌ ಸವಾರ ಸಾವು

ಚಿತ್ರದುರ್ಗ, ಅಕ್ಟೋಬರ್‌, 25: ದೊಡ್ಡ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಣ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಇನ್ನೂ ಡಿಕ್ಕಿ ಹೊಡೆದ ವಾಹನ ಚಾಲಕ ಪರಾರಿರಿ ಆಗಿದ್ದಾನೆ ಎಂದು ತಿಳಿದುಬಂದಿದೆ.

ಬೈಕ್ ಸವಾರ ತುಮಕೂರು ಮೂಲದ ಗಿರೀಶ(36) ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತ ಮಾಡಿದ ಸವಾರ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

Terrible Accident on National Highway 4 near Hiriyuru taluk Biker Death

ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ವೀರನಪುರ ಕ್ರಾಸ್ ಸಮೀಪ ನಡೆದಿದೆ.

ಚಾಮರಾಜನಗರದ ನಿವಾಸಿ ಅಲೀಂ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೆರಕಣಾಂಬಿಯತ್ತ ತೆರಳುತ್ತಿದ್ದ ಅಲೀಂಗೆ ಚಾಮರಾಜನಗರದತ್ತ ಬರುತ್ತಿದ್ದ ರಂಗನಾಥ ಖಾಸಗಿ ಬಸ್ ಮುಖಾ-ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಮರಾಜನಗರ ಟ್ರಾಫಿಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಎರಡು ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕ್ರಷರ್ ಮತ್ತು ಎಂ.ಸ್ಯಾಂಡ್ ಘಟಕಕ್ಕೆ ಆಕ್ರೋಶ: ಗುಂಡ್ಲುಪೇಟೆ ತಾಲೂಕಿನ ಅಗತಗೌಡನಹಳ್ಳಿ ಗ್ರಾಮದ ಸರ್ವೆ ನಂಬರ್ 56/2ರಲ್ಲಿ ಅಕ್ರಮವಾಗಿ ಕ್ರಷರ್ ಮತ್ತು ಎಂ.ಸ್ಯಾಂಡ್ ಘಟಕ ಪ್ರರಂಭವಾಗುತ್ತಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಅಗತಗೌಡನಹಳ್ಳಿ ಗ್ರಾಮದ ಸರ್ವೆ ನಂಬರ್ 56/2ರಲ್ಲಿ ನಿರ್ಮಾಣ ಆಗುತ್ತಿರುವ ಶ್ರೀ ಬಸವೇಶ್ವರ ಕ್ರಷರ್ ಮತ್ತು ಎಂ.ಸ್ಯಾಂಡ್ಘ ಟಕ ಪ್ರಾರಂಭಿಸಲು ಅವಕಾಶ ನೀಡಬಾರದು ಎಂದು ಗ್ರಾಮಸ್ಥರು ಶಾಸಕರು ಸೇರಿದಂತೆ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ.

ಅಗತಗೌಡನಹಳ್ಳಿ ಗ್ರಾಮದ ಸರ್ವೆ ನಂ: 56/2 ಜಮೀನಿನ ಖಾತೆದಾರರಾದ ಲೇ.ಕೆ.ಸರ್ವಮಂಗಳಮ್ಮ ಕೋಂ ಎಂ.ಅಂದಾನಪ್ಪ ಇವರ ಹೆಸರಿನಲ್ಲಿದ್ದು, ಈ ಜಮೀನಲ್ಲಿ ಇವರ ಮಗ ಎ.ಮಧುಸೂದನ್ ಹಾಗೂ ಮಗಳು ಎ.ಶಿಲ್ಪ ಎಂಬುವರು ಜಮೀನಿನಲ್ಲಿ ಪ್ರರಂಭಿಸುತ್ತಿರುವ ಕ್ರಷರ್ ಮತ್ತು ಎಂ.ಸ್ಯಾಂಡ್ ಘಟಕ ಸುತ್ತಲೂ ಫಲವತ್ತಾದ ಜಮೀನುಗಳಿದ್ದು, ಈ ಜಮೀನಿನಲ್ಲಿ ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರು ವ್ಯವಸಾಯವನ್ನು ನಂಬಿ ಜೀವನ ನಡೆಸುತ್ತಿದ್ದಾರೆ.

ಹಾಗೂ ಕೆಲ ರೈತರು ಜಮೀನಿನಲ್ಲಿ ವಾಸವಿದ್ದು, ಕೊಳವೆ ಬಾವಿ (ಬೋರ್‌ವೈಲ್) ಮುಖಾಂತರ ಹಾಗೂ ಕೆಲವರು ಮಳೆಯಾಶ್ರಿತ ಬೇಸಾಯ ಮಾಡುತ್ತಿದ್ದಾರೆ. ಅಲ್ಲದೇ, ಸ್ಟೋನ್ ಕ್ರಷರ್ ಪ್ರಾರಂಭ ಮಾಡುವ 100 ಮೀಟರ್‌ ಅಂತರದಲ್ಲಿ ಸರ್ಕಾರಿ ಪ್ರೌಢಶಾಲೆ ಇದ್ದು, ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಕ್ರಷರ್ ಆರಂಭವಾದರೆ, ಗ್ರಾಮದ ಜನರಿಗೆ ಹಾಗೂ ಶಾಲೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಧೂಳಿನಿಂದ ಪರಿಸರ ಹಾಳಾಗಿ ರೈತರ ಬೆಳೆ ನಾಶವಾಗುತ್ತದೆ ಎಂದು‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+